ಅನ್ನ ಭಾಗ್ಯ ಯೋಜನೆ : ಒಂದು ಕೆಜಿ ಅಕ್ಕಿ ಖರೀದಿಗೆ ರಾಜ್ಯ ಸರ್ಕಾರ ಎಫ್ ಸಿ ಐ ಗೆ ಕೊಡುವ ಹಣ ಎಷ್ಟು ಗೊತ್ತಾ..?
PGK NEWS: k baligar _ಅನ್ನ ಭಾಗ್ಯ ಯೋಜನೆ : ಒಂದು ಕೆಜಿ ಅಕ್ಕಿ ಖರೀದಿಗೆ ರಾಜ್ಯ ಸರ್ಕಾರ ಎಫ್ ಸಿ ಐ ಗೆ ಕೊಡುವ ಹಣ ಎಷ್ಟು ಗೊತ್ತಾ..? [ದ.ಕ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಿಧ ಪ್ರಕರಣಗಳಲ್ಲಿ ಮೃತಪಟ್ಟ ಕುಟುಂಬದವರಿಗೆ ಪರಿಹಾರ ವಿತರಿಸಿದರು.
ನ್ಯಾಷನಲ್ ಕೋ-ಆಪರೇಟಿವ್ ಕನ್ಸೂಮರ್ಸ್ ಫೆಡರೇಷನ್ ಎನ್‌ಸಿಸಿಎಫ್, ನ್ಯಾಷನಲ್ ಅಗ್ರಿಕಲ್ಚರಲ್ ಕೋ-ಆಪರೇಟಿವ್ ಮಾರ್ಕೆಟಿಂಗ್ ಫೆಡರೇಷನ್ ಹಾಗೂ ಕೇಂದ್ರೀಯ ಭಂಡಾರ, ಈ ಮೂರು ಸಂಸ್ಥೆಗಳು ಭಾರತ ಸರ್ಕಾರಕ್ಕೆ ಸೇರಿದ್ದು, ಈ ಮೂರು ಸಂಸ್ಥಗಳಿಂದ ಅಕ್ಕಿ ಪಡೆಯಲು ದರಪಟ್ಟಿ ಸಲ್ಲಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.ಭಾರತೀಯ ಆಹಾರ ಮಂಡಳಿಯಿಂದ 34 ರೂಪಾಯಿ ಅಕ್ಕಿ 2.60ರೂಪಾಯಿ ಸಾಗಾಣಿಕೆ ವೆಚ್ಚ ಸೇರಿ ಒಂದು ಕೆ.ಜಿ. ಅಕ್ಕಿಗೆ ಒಟ್ಟು 36.60ರೂಪಾಯಿ ವೆಚ್ಚ ತಗಲುತ್ತದೆ. ಈ ಮೂರು ಸಂಸ್ಥೆಗಳು ನಮೂದಿಸುವ ದರ, ಸರಬರಾಜು ಮಾಡುವ ಪ್ರಮಾಣಗಳ ವಿವರ ಪಡೆಯಲಾಗುವುದು ಮತ್ತು ಟೆಂಡರ್ ಮೂಲಕ ಅಕ್ಕಿ ಪಡೆಯಲೂ ಕ್ರಮ ಕೈಗೊಳ್ಳಲಾಗುವುದು ಎಂದರು.ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ವಿತರಿಸಲು ಒಂದು ತಿಂಗಳಿಗೆ 840 ಕೋಟಿ ರೂಪಾಯಿ. ವೆಚ್ಚ ತಗುಲುತ್ತದೆ. ವರ್ಷಕ್ಕೆ 10 ಸಾವಿರದ 92 ಕೋಟಿ ವೆಚ್ಚವಾಗಲಿದ್ದು. ಸರ್ಕಾರ ಈ ವೆಚ್ಚವನ್ನು ಭರಿಸಿ ಅಕ್ಕಿಯನ್ನು ವಿತರಿಸಲು ಸಿದ್ಧವಿದೆ, ಎಂದು ಹೇಳಿದರು.