ರಾಜ್ಯದ ಶಾಲಾ ಮಕ್ಕಳಿಗೆ ವಾರದಲ್ಲಿ ಒಂದೇ ದಿನ ಮೊಟ್ಟೆ, ಬಾಳೆಹಣ್ಣು..?





 PGK NEWS  :- k baligar _ರಾಜ್ಯದ ಶಾಲಾ ಮಕ್ಕಳಿಗೆ ವಾರದಲ್ಲಿ ಒಂದೇ ದಿನ ಮೊಟ್ಟೆ, ಬಾಳೆಹಣ್ಣು.{ ಬೆಂಗಳೂರು: ರಾಜ್ಯದ ಶಾಲಾ ಮಕ್ಕಳ ಮಧ್ಯಾಹ್ನದ ಬಿಸಿಯೂಟದ ಜತೆಗೆ ಪ್ರಧಾನ ಮಂತ್ರಿ ಪೋಷಣ ಅಭಿಯಾನದಡಿ ವಾರದಲ್ಲಿ 2 ದಿನ ನೀಡುತ್ತಿದ್ದ ಮೊಟ್ಟೆ/ಬಾಳೆಹಣ್ಣನ್ನು ಒಂದು ದಿನಕ್ಕೆ ಸೀಮಿತಗೊಳಿಸಲಾಗಿದೆ.ಬಿಸಿಯೂಟ ಯೋಜನೆ ನಿರ್ದೇಶಕರು ಈ ಬಗ್ಗೆ ಸುತ್ತೋಲೆ ಹೊರಡಿಸಿದ್ದು, ರಾಜ್ಯದ ಎಲ್ಲ ಜಿಲ್ಲೆಗಳ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 2023-24ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ 1ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಟಿಕ ಆಹಾರವಾಗಿ ಬೇಯಿಸಿದ ಮೊಟ್ಟೆ ಅಥವಾ ಬಾಳೆಹಣ್ಣು / ಶೇಂಗಾ ಚಿಕ್ಕಿ ವಿತರಿಸುವಂತೆ ಸರ್ಕಾರ ಸೂಚನೆ ನೀಡಿದೆ.ಪ್ರತಿ ವಿದ್ಯಾರ್ಥಿಗೆ ವಾರದಲ್ಲಿ ಒಂದು ಮೊಟ್ಟೆಯಂತೆ ಜೂ. 20ರಿಂದ ಜು.15ರ ವರೆಗೆ ಮೊದಲ ಹಂತದಲ್ಲಿ ಅಥವಾ ಸರ್ಕಾರದ ಮುಂದಿನ ಆದೇಶ ಬರುವ ತನಕ ಮಕ್ಕಳ ಹಾಜರಾತಿಗೆ ಅನುಗುಣವಾಗಿ ಯೋಜನೆಯನ್ನು ಮುಂದುವರಿಸುವಂತೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಇಲಾಖೆಯಲ್ಲಿರುವ ಅನುದಾನದ ಆಧಾರದಲ್ಲಿ ಸದ್ಯದ ಮಟ್ಟಿಗೆ ಮೊಟ್ಟೆ ವಿತರಿಸಲಾಗುತ್ತಿದೆ. ಹೊಸ ಸರ್ಕಾರವು ಜು.7ರಂದು ಬಜೆಟ್‌ ಮಂಡಿಸಲಿದೆ. ಅದಾದ ನಂತರ ಬಜೆಟ್‌ನಲ್ಲಿ ಕೈಗೊಳ್ಳುವ ನಿರ್ಧಾರದಂತೆ ಇಲಾಖೆ ಮೊಟ್ಟೆ ವಿತರಣೆ ಮಾಡಲಿದೆ ಎಂದು ಇಲಾಖೆ ಮೂಲಗಳು ತಿಳಿಸಿವೆ.

PGK

Post a Comment

Previous Post Next Post