PGK NEWS k baligar :ವಿಧಾನ ಪರಿಷತ್ ಉಪ ಚುನಾವಣೆ : ಮೂರು ಸ್ಥಾನಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ.ಬೆಂಗಳೂರು : ವಿಧಾನ ಪರಿಷತ್ತಿನ ಮೂರು ಸ್ಥಾನಗಳಿಗೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ.
ಕಾಂಗ್ರೆಸ್ ಅಭ್ಯರ್ಥಿಗಳಾಗಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಚಿವ ಎನ್.ಎಸ್. ಬೋಸರಾಜು, ತಿಮ್ಮಣ್ಣ ಕಮಕನೂರು ಇಂದು ತಮ್ಮ ಉಮೇದುವಾರಿಕೆಯನ್ನು ಚುನಾವಣಾಧಿಕಾರಿ ಅವರಿಗೆ ಸಲ್ಲಿಸಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಪಕ್ಷದ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ನಾಳೆ ನಾಮಪತ್ರ ಪರಿಶೀಲನೆ ನಡೆಯಲಿದೆ. ಅಗತ್ಯ ಬಿದ್ದಲ್ಲಿ ಇದೇ 30ರಂದು ಮತದಾನ ನಡೆಯಲಿದೆ.
Tags:
Daily News