ದಾವಣಗೆರೆಯಲ್ಲಿ ಲಂಚಗುಳಿತನ ಹೆಚ್ಚಿರುವ ದೂರಿದೆ, ಅಂತವರಿಗೆ ಜಾಗವಿಲ್ಲ-ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ

 ದಾವಣಗೆರೆಯಲ್ಲಿ ಲಂಚಗುಳಿತನ ಹೆಚ್ಚಿರುವ ದೂರಿದೆ, ಅಂತವರಿಗೆ ಜಾಗವಿಲ್ಲ-ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ



ದಾವಣಗೆರೆ ಜಿಲ್ಲೆ ಬಹಳ ಪ್ರಗತಿ ಪರವಾದ ಜಿಲ್ಲೆಯಾಗಿದ್ದು ಇನ್ನಷ್ಟು ಪ್ರಗತಿ ಕಾಣಬೇಕಾಗಿದೆ. ಜಿಲ್ಲೆಯ ಅಭಿವೃದ್ದಿಯಲ್ಲಿ ವಿವಿಧ ಇಲಾಖೆಗಳ ಪಾತ್ರ ಬಹಳ ಪ್ರಮುಖವಾಗಿದೆ. ತಹಶೀಲ್ದಾರರ ಕಚೇರಿ ಜನರಿಗೆ ಹೆಚ್ಚು ಸೇವೆ ಕೊಡುವ ಕಚೇರಿಯಾಗಿದ್ದು ಇಲ್ಲಿ ಲಂಚಗುಳಿತನ, ಅಲೆದಾಡಿಸುವುದು ಹೆಚ್ಚಿದೆ ಎಂಬ ದೂರುಗಳಿವೆ, ಇದಕ್ಕೆ ಅವಕಾಶ ನೀಡುವುದಿಲ್ಲ. ತಹಶೀಲ್ದಾರ್ ಕಚೇರಿ, ಪೊಲೀಸ್ ಸ್ಟೇಷನ್, ತಾಲ್ಲೂಕು ಪಂಚಾಯತ್, ಕೃಷಿ, ರೇಷ್ಮೆ, ತೋಟಗಾರಿಕೆ, ಸಮಾಜ ಕಲ್ಯಾಣ ಸೇರಿದಂತೆ ಇಲಾಖೆಗಳು ಸಮಾಜಮುಖಿಯಾಗಿ ಕೆಲಸ ಮಾಡಬೇಕು ಎಂದು ಹೇಳಿದರು.
ಜಿಲ್ಲಾಧಿಕಾರಿ ತಹಶೀಲ್ದಾರ್‌ ಕಚೇರಿಗೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿಗಳಿಗೆ, ಆಸ್ಪತ್ರೆಗಳಿಗೆ ಭೇಟಿ ನೀಡಬೇಕು. ಇದರಿಂದ ಕೆಳಗಿನ ಅಧಿಕಾರಿಗಳು ಜಾಗೃತರಾಗುವರು. ಅಧಿಕಾರಿಗಳು ತಮ್ಮ ಜವಾಬ್ದಾರಿ, ಕರ್ತವ್ಯವನ್ನು ಸಮಾಜದ ಅಭಿವೃದ್ದಿಗಾಗಿ ಮಾಡಬೇಕು. ಮೇಲಾಧಿಕಾರಿಗಳು ಪದೇ ಪದೇ ಭೇಟಿ ನೀಡಿ ಕೆಲಸ ಕಾರ್ಯಗಳ ಪರಿಶೀಲನೆ, ಉಸ್ತುವಾರಿ ಮಾಡಲಿಲ್ಲವೆಂದರೆ ಭ್ರಷ್ಟಾಚಾರ ಕಡಿಮೆಯಾಗುವುದಿಲ್ಲ. ಜಿಲ್ಲಾ ಮಟ್ಟದ ಆಡಳಿತ ಸದಾ ಪಾರದರ್ಶಕವಾಗಿರಬೇಕು ಎಂದರು.



PGK

Post a Comment

Previous Post Next Post