PGK NEWS :-ಸಾಗರಮಾಲಾ: ಯೋಜನೆ ತ್ವರಿತಗೊಳಿಸಲು ಕೇಂದ್ರ ಸಚಿವರಿಗೆ ಸಂಸದ ಅನಂತಕುಮಾರ ಹೆಗಡೆ
ಶಿರಸಿ, ಅಕ್ಟೋಬರ್ 03: ಭಾರತದ ಸಾಗರ ವಲಯವನ್ನು ಬಲಪಡಿಸುವ ಪ್ರಧಾನಮಂತ್ರಿಯವರ ದೂರದೃಷ್ಟಿ ಯೋಜನೆಗಳಿಗೆ ಅನುಮೋದನೆ ಪ್ರಕ್ರಿಯೆಗಳನ್ನು ತ್ವರಿತಗೊಳಿಸುವಂತೆ ಕೇಂದ್ರದ ಬಂದರು, ಹಡಗು ಮತ್ತು ಜಲಸಾರಿಗೆ ಸಚಿವ ಸರ್ಬಾನಂದ ಸೋನವಾಲರವರಿಗೆ ಸಂಸದ ಅನಂತಕುಮಾರ ಹೆಗಡೆ ಮಾತನಾಡಿದರು.
ಉತ್ತರ ಕನ್ನಡ ಕ್ಷೇತ್ರದಲ್ಲಿ ಮೂಲ ಸೌಕರ್ಯ ಅಭಿವೃದ್ಧಿ, ಪ್ರವಾಸೋದ್ಯಮ, ಕಡಲ ಅಭಿವೃದ್ಧಿ, ಬೃಹತ್ ಸರಕು ಸಾಗಣೆ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿಗಾಗಿ 4 ಬೃಹತ್ ಯೋಜನೆಗಳ ಕುರಿತಂತೆ ಸಮಗ್ರ ಕಾರ್ಯಸಾಧ್ಯತಾ ವರದಿಗಳನ್ನು (ಡಿಎಫ್‌ಆರ್) ಸಾಗರಮಾಲಾ ಸೆಲ್ ಮತ್ತು ಸಾಗರಮಾಲಾ ಅಭಿವೃದ್ಧಿ ಕಂಪನಿ ಲಿಮಿಟೆಡ್ (ಎಸ್‌ಡಿಸಿಎಲ್)ಗೆ ಸಲ್ಲಿಸಲಾಗಿದೆ. ಇನ್ನೂ ಎರಡು ಅಭಿವೃದ್ಧಿ ಯೋಜನೆಗಳಿಗಾಗಿ ಸಮಗ್ರ ವರದಿಯನ್ನು ಶೀಘ್ರದಲ್ಲೇ ಸಲ್ಲಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
Tags:
Daily News