ಬೆಂಗಳೂರು: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡಿದೆ. ಇಂದು ಬೆಳಗ್ಗೆಯಿಂದಲೇ ಮೊಡ ಕವಿದ ವಾತಾವಣವಿದ್ದು ತುಂತುರು ಮಳೆಯಾಗುತ್ತಿದೆ. ನಿನ್ನೆ ಸಹ ರಾಜ್ಯದ ವಿವಿಧೆಡೆ ಮಳೆಯಾಗಿದ್ದು, ನಾಲ್ಕೈದು ದಿನ ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂನ್ 24, 25 ರಂದು ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ. ಜೂನ್ 26ರಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗಲಿದ್ದು ಆರೆಂಜ್ ಅಲರ್ಟ್ ನೀಡಲಾಗಿದೆ. ಜೂನ್ 26 ರಂದು ಕಲಬುರ್ಗಿ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಜೂನ್ 27ರಂದು ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನಲೆಯಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದ್ದು, ಶಿವಮೊಗ್ಗ, ಕಲಬುರ್ಗಿ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
Tags:
Daily News