PGK NEWS:- ಬೆಳಗಾವಿ, ಜು:-- 15: ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನಗಳನ್ನ ಗೆಲ್ಲುವ ಟಾರ್ಗೆಟ್ ಹಾಕಿಕೊಂಡಿರುವ ಕಾಂಗ್ರೆಸ್, ಭರ್ಜರಿ ತಯಾರಿ ನಡೆಸುತ್ತಿದ್ದು, 2024ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಸತೀಶ್ ಜಾರಕಿಹೊಳಿ ಮತ್ತೊಮ್ಮೆ ಬೆಳಗಾವಿಯಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿ ಶನಿವಾರ ಮಾಧ್ಯPGKಮಗಳ ಜೊತೆಗೆ ಮಾತನಾಡಿದ ಅವರು, ಪಕ್ಷ ಹೇಳಿದರೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ. ಲೋಕಸಭಾ ಚುನಾವಣೆ ಸಂಬಂಧ ಬೆಂಗಳೂರಿನಲ್ಲಿ ಸಭೆ ನಡೆದಿದೆ. ಬೆಳಗಾವಿ ಜಿಲ್ಲೆಯ ಶಾಸಕರ ಜೊತೆ ಸಭೆ ಮಾಡಿ ಚರ್ಚಿಸಿದ್ದೇನೆ. ಮುಂದಿನ 2 ತಿಂಗಳೊಳಗೆ ಕಾಂಗ್ರೆಸ್ ಅಭ್ಯರ್ಥಿ ಹೆಸರು ಘೋಷಣೆಯಾಗಲಿದೆ ಎಂದು ಸ್ಪಷ್ಟಪಡಿಸಿದರು.
ಬೆಳಗಾವಿ, ಚಿಕ್ಕೋಡಿ ಅಭ್ಯರ್ಥಿ ಹೆಸರು ಘೋಷಣೆ ಮಾಡುತ್ತೇವೆ. ಲೋಕಸಭೆ ಟಿಕೆಟ್ ಗಾಗಿ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದೆ, ಸ್ಥಳೀಯ ಶಾಸಕರು, ಮುಖಂಡರೊಂದಿಗೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ. ಅವಶ್ಯಕತೆ ಇದ್ದರೆ ಮಾತ್ರ ನಮ್ಮ ಕುಟುಂಬ ದಿಂದ ನಿಲ್ಲಿಸುತ್ತೇವೆ, ಸದ್ಯಕ್ಕೆ ನಮ್ಮ ಕುಟುಂಬ ಎರಡನೇ ಸ್ಥಾನದಲ್ಲಿ ಇರಲಿದೆ. ಪಕ್ಷ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವಂತೆ ಹೇಳಿದರೆ ನಿಲ್ಲುತ್ತೇನೆ ಎಂದ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.
ಬೆಳಗಾವಿ ಹಲಗಾ ಮಚ್ಚೆ ಬೈಪಾಸ್ ರಸ್ತೆ ಕಾಮಗಾರಿ ಆರಂಭ ಮಾಡುತ್ತಿದ್ದೇವೆ. ಕಾಮಗಾರಿ ವಿಳಂಬ ಆಗಿದಕ್ಕೆ ಗುತ್ತಿಗೆದಾರ ಕೆಲಸ ಬಿಟ್ಟು ಹೋಗಿದ್ದಾನೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳಿಗೆ ಹೇಳಿದ್ದೇವೆ. ಅದೇ ಗುತ್ತಿದಾರರನಿಗೆ ಕೊಡಲು ತಿಳಿಸಿದ್ದೇವೆ. ಬೆಳಗಾವಿ ರಿಂಗ್ ರೋಡ್ ಕಾಮಗಾರಿ ಶೀಘ್ರದಲ್ಲಿ ಆರಂಭ ಮಾಡುತ್ತೇವೆ ಎಂದು ಹೇಳಿದರು.
28 ರಾಜ್ಯ ಹೆದ್ದಾರಿಗಳನ್ನ ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೆ ಏರಿಸಬೇಕಿದೆ. ಈ ಬಗ್ಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಜತೆಗೆ ಮಾತನಾಡಿದ್ದೇವೆ.ಮುಂದಿನ ವಾರದಲ್ಲಿ ಈ ಕುರಿತು ಸಭೆ ಮಾಡುವುದಾಗಿ ನಿತಿನ್ ಗಡ್ಕರಿ ಹೇಳಿದ್ದಾರೆ ಎಂದರು. ರಾಜ್ಯದಲ್ಲಿ ಮಳೆ ಕೊರತೆ ವಿಚಾರವಾಗಿ ಮಾತನಾಡಿದ ಅವರು, ರಾಜ್ಯದಲ್ಲಿ ಮಳೆಯ ಕೊರತೆಯಿದೆ ಹೀಗಾಗಿ ಬರ ಘೋಷಣೆ ಮಾಡುವ ಅವಶ್ಯಕತೆ ಇದೆ. ಮಳೆಯಾಗದ ಜಿಲ್ಲೆಗಳನ್ನ ಬರಪೀಡಿ ಎಂದು ಘೋಷಣೆ ಮಾಡುತ್ತೇವೆ. ಈಗಾಗಲೇ ಈ ವಿಚಾರ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇವೆ. ಆದಷ್ಟು ಬೇಗ ಬರಗಾಲ ಎಂದು ಘೋಷಣೆ ಮಾಡುತ್ತಾರೆ ಎಂದರು.
ಜೈನಮುನಿ ಹತ್ಯೆ ಪ್ರಕರಣ ಮುಗಿದು ಹೋಗಿದೆ. ಪೊಲೀಸರು ತನಿಖೆ ಮಾಡಿದ್ದಾರೆ ಮತ್ತೆನ ಮಾಡಬೇಕು ಎಂದ ಅವರು, ಖಾನಾಪುರ ತಾಲೂಕಿನ ಮಕ್ಕಳು ಶಾಲೆಗೆ ಬರಲು ಬಸ್ ವ್ಯವಸ್ಥೆ ಇಲ್ಲ. ಖಾನಾಪುರ ತಾಲೂಕಿನಲ್ಲಿ ಮೊದಲಿನಿಂದಲೂ ಬಸ್ ಸಮಸ್ಯೆ ಇದೆ. ಸರ್ಕಾರದಿಂದ ನಾಲ್ಕು ಸಾವಿರ ಬಸ್ ಖರೀದಿ ಮಾಡುವುದಾಗಿ ಹೇಳಿದ್ದಾರೆ, ಹೊಸ ಬಸ್ ಬಂದ್ರೇ ಅವುಗಳನ್ನ ಬಿಡಿಸುವ ವ್ಯವಸ್ಥೆ ಮಾಡುತ್ತೇವೆ ಎಂದು ಹೇಳಿದರು.