PGK NEWS:-ಗೃಹಲಕ್ಷ್ಮೀ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಇಂದು "ಸಿಎಂ ಸಿದ್ದರಾಮಯ್ಯ ಉಪಮುಖ್ಯಮಂತ್ರಿಡಿಕೆ ಶಿವಕುಮಾರ್ 'ಚಾಲನೆ..

 




PGK NEWS '':-ಬೆಂಗಳೂರು
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ  ಡಿಕೆ ಶಿವಕುಮಾr.   ಚಾಲನೆ    ನೀಡಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜ್ಯೋತಿ ಬೆಳಗುವುದರ ಮೂಲಕ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದು ನಾಳೆಯಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಲಿದೆ. ರಾಜ್ಯದಲ್ಲಿ 1.28 ಕೋಟಿ ಮಹಿಳೆಯರಿಗೆ ಗೃಹ ಲಕ್ಷ್ಮಿ ಯೋಜನೆಯ ಲಾಭ ಸಿಗಲಿದೆ. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮಿ ಹೆಬ್ಬಾಳಕರ್‌ ಹಾಗೂ ಸಚಿವರಾದ ರಾಮಲಿಂಗಾರೆಡ್ಡಿ, ಕೆ.ಎಚ್.‌ ಮುನಿಯಪ್ಪ, ಡಾ. ಹೆಚ್.‌ ಸಿ. ಮಹದೇವಪ್ಪ, ರಹೀಂ ಖಾನ್‌, ಬೈರತಿ ಸುರೇಶ್‌ ಮತ್ತು ಶಾಸಕರು, ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.


ಯೋಜನೆಯಡಿ ಆಗಸ್ಟ್ 15ಕ್ಕೆ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಸಂದಾಯ ಆಗಲಿದೆ. ರೇಷನ್ ಕಾರ್ಡ್​ನಲ್ಲಿ ಮನೆಯ ಯಜಮಾನಿಯಾಗಿರುವವರು ಯೋಜನೆಯ ಫಲಾನುಭವಿಯಾಗಲಿದ್ದಾರೆ. ಅವರ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿರಬೇಕು. ಅವರ ಪತಿಯ ಆಧಾರ್ ಕಾರ್ಡ್ ನೀಡಬೇಕು. ಜಿಎಸ್​ಟಿ ಹಾಗೂ ಆದಾಯ ತೆರಿಗೆ ಪಾವತಿದಾರರ ಪತ್ನಿಯರಿಗೆ ಈ ಯೋಜನೆ ಅನ್ವಯವಾಗುವುದಿಲ್ಲ. ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್, ಗ್ರಾಪಂಗಳಲ್ಲಿರುವ ಬಾಪೂಜಿ ಸೇವಾ ಕೇಂದ್ರಗಳಲ್ಲಿ ನೋಂದಣಿಗೆ ಅವಕಾಶ ಇದೆ. ಸರ್ಕಾರ ನೇಮಕ ಮಾಡಿರುವ ಪ್ರಜಾಪ್ರತಿನಿಧಿಗಳು ಮನೆ ಬಾಗಿಲಿಗೆ ಬಂದು ನೋಂದಣಿ ಮಾಡಲಿದ್ದಾರೆ.




ನೋಂದಾವಣಿ ಹೇಗೆ?
* ರೇಷನ್ ಕಾರ್ಡ್​ನಲ್ಲಿ ಗುರುತಿಸಿರುವ ಮಹಿಳೆ ಮೊಬೈಲ್ ಸಂಖ್ಯೆಗೆನೋಂದಣಿ ದಿನಾಂಕ, ಸಮಯ, ಸ್ಥಳದ ವಿವರ ಎಸ್​ಎಂಎಸ್ ಮೂಲಕ ಕಳುಹಿಸಲಾಗುತ್ತದೆ.
* ನೋಂದಣಿ ಮಾಡಿಸಲು ಯಾವುದೇ ರೀತಿಯ ಶುಲ್ಕ ಇರುವುದಿಲ್ಲ.
* ಪ್ರಜಾಪ್ರತಿನಿಧಿಗಳು ಮನೆ ಬಾಗಿಲಿಗೆ ತೆರಳಿ ನೋಂದಣಿ ಮಾಡಲಿದ್ದಾರೆ.
* ಸಮಸ್ಯೆಗಳಿದ್ದಲ್ಲಿ 1902ಗೆ ಕರೆ ಮಾಡಿ ಅಥವಾ 8147500500 ಸಂಖ್ಯೆಗೆ ಎಸ್​ಎಂಎಸ್ ಮಾಡಿ ಮಾಹಿತಿ ಪಡೆಯಬಹುದು.
* ನಿಗದಿತ ಸಮಯಕ್ಕೆ ಹೋಗಲು ಸಾಧ್ಯವಾಗದಿದ್ದರೆ ಮುಂದಿನ ಯಾವುದೇ ದಿನಾಂಕದಂದು ಸಂಜೆ 5 -7 ಗಂಟೆಯೊಳಗೆ ಭೇಟಿ ನೀಡಿ.
* ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಬಿಟ್ಟು ಬೇರೆ ಬ್ಯಾಂಕ್​ಗೆ ನೋಂದಣಿ ಮಾಡಿಸಬಹುದು.
* ನೋಂದಣಿ ಆದಾಗ ಮಂಜೂರಾತಿ ಪತ್ರ ನೀಡಲಾಗುತ್ತದೆ.
* ಪ್ರಜಾಪ್ರತಿನಿಧಿಗಳಲ್ಲಿ ನೋಂದಣಿ ಯಾದರೆ ಮಂಜೂರಾತಿ ಪತ್ರ ತಡವಾಗಿ ತಲುಪಲಿದೆ.





PGK

Post a Comment

Previous Post Next Post