PGK NEWS:-ಬಿ.ವೈ.ವಿಜಯೇಂದ್ರ:-ವೀರಶೈವ ಲಿಂಗಾಯತ ಸಮಾಜದ ಎಲ್ಲ ಒಳಪಂಗಡಗಳು ಒಗ್ಗಟ್ಟಾಗಲಿ:


 PGK NEWS:- ಶಿವಮೊಗ್ಗ: :-   ನಗರದಲ್ಲಿ ವೀರಶೈವ ಲಿಂಗಾಯತ ಸಮುದಾಯವನ್ನು ಕೇಂದ್ರ ಒಬಿಸಿ ಪಟ್ಟಿಗೆ ಸೇರ್ಪಡೆ ಮಾಡಲು ಆಗ್ರಹಿಸಿ ಆಯೋಜಿಸಿದ್ದ ವೀರಶೈವ ಲಿಂಗಾಯತ ಸಮಾಜದ ಸಭೆಯಲ್ಲಿ ಅವರು ಮಾತನಾಡಿದರು.

ನಮ್ಮ ಸಮಾಜದ ಯುವಕ, ಯುವತಿಯರಿಗೆ ಅನ್ಯಾಯ ಆಗುತ್ತಿದೆ. ಉದ್ಯೋಗದಿಂದ ವಂಚಿತರಾಗುತ್ತಿದ್ದಾರೆ. ಈ ಬಗ್ಗೆ ಸಮಾಜದ ಗಣ್ಯರು, ಜನಪ್ರತಿನಿಧಿಗಳು ಧ್ವನಿ ಎತ್ತುತ್ತಿಲ್ಲ. ನಮ್ಮ ಜವಾಬ್ದಾರಿಯನ್ನು ನಾವು ಮರೆತಿದ್ದೇವೆ. ನಮ್ಮ ಸಮಾಜವನ್ನು ಗೌರವಯುತವಾಗಿ ಕಾಣಲು ಸಮಾಜದ ಸ್ವಾಮೀಜಿಗಳು ಕಾರಣ. ನಮ್ಮ ಸಮಾಜವನ್ನು ಕೇಂದ್ರದ ಒಬಿಸಿ ಪಟ್ಟಿಗೆ ಸೇರಿಸಬೇಕು. ಆ ನಿಟ್ಟಿನಲ್ಲಿ ಸ್ವಾಮೀಜಿಗಳು ನೇತೃತ್ವ ವಹಿಸಿದ್ದಾರೆ ಎಂದು ತಿಳಿಸಿದರು.



ಮಾಧ್ಯಮಗಳಲ್ಲಿ ಪ್ರಸಾರವಾದರೆ ನ್ಯಾಯ ಸಿಗುತ್ತದೆ ಎಂಬ ಭ್ರಮೆ ಬೇಡ. ನಮ್ಮ ಸಮಾಜದ ಎಲ್ಲ ಒಳಪಂಗಡಗಳು ಒಟ್ಟಾಗಬೇಕು. ಈ ಹೋರಾಟಕ್ಕೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕೂಡ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಹೋರಾಟ ಯಾವುದೇ ಸಮಾಜದ ವಿರುದ್ಧವಲ್ಲ. ನಮ್ಮ ಸಮಾಜದ ಬಡವರಿಗೆ ನ್ಯಾಯ ಕೊಡಿಸಲು ನಾವು ಸೇರಿದ್ದೇವೆ. ಇಡೀ ಜಗತ್ತು, ದೇಶಕ್ಕೆ ಬೆಳಕು ಕೊಡುವ ಶಕ್ತಿ ನಮ್ಮ ಸಮಾಜಕ್ಕಿದೆ. ಅಂತಹ ಸಮಾಜಕ್ಕೆ ಅನ್ಯಾಯ ಆಗುತ್ತಿರುವಾಗ ನಾವು ಒಗ್ಗಟ್ಟು ಪ್ರದರ್ಶಿಸಬೇಕು ಎಂದು ಕರೆ ನೀಡಿದರು.

ಜಿಲ್ಲೆಯಲ್ಲಿ ಸಾಕಷ್ಟು ಮಳೆಯಾಗುತ್ತಿದ್ದು, ಅಲ್ಲಲ್ಲಿ ಸಾಕಷ್ಟು ಹಾನಿಯಾಗುತ್ತಿದೆ. ಈ ಹಿಂದೆ ಯಡಿಯೂರಪ್ಪ ಸರ್ಕಾರ ಇದ್ದಾಗ, ಮನೆ ಬಿದ್ದ ಕುಟುಂಬಕ್ಕೆ ತಕ್ಷಣ 5 ಲಕ್ಷ ರೂಪಾಯಿ ಪರಿಹಾರ ಕೊಡಲಾಗುತ್ತಿತ್ತು. ಆದರೆ, ಹೊಸ ಸರ್ಕಾರ ಬಂದ ನಂತರ ಅಧಿಕಾರಿಗಳಿಗೆ ಸರಿಯಾದ ಮಾಹಿತಿ‌, ಕಾರ್ಯಸೂಚಿ ಬಂದಿಲ್ಲ. 20 ಸಾವಿರ ರೂ. ಕೊಡುತ್ತಾರೋ, 1 ಲಕ್ಷ ರೂ. ಕೊಡುತ್ತಾರೋ ಅಧಿಕಾರಿಗಳಿಗೆ ಮಾಹಿತಿ ಇಲ್ಲ. ಅವರೇ ಗೊಂದಲದಲ್ಲಿದ್ದಾರೆ ಎಂದು ತಿಳಿಸಿದರು.

ಶಿಕಾರಿಪುರದಲ್ಲಿ 40-50 ಮನೆಗಳು ಬಿದ್ದಿವೆ. ತಕ್ಷಣ ಸರ್ಕಾರ ಪರಿಹಾರ ಕೊಡಬೇಕು. ಬೆಳೆ ವಿಮೆ ಕಟ್ಟಲು ಇನ್ನು ಏಳೆಂಟು ದಿನ ಬಾಕಿ ಇದೆ. ಅದರ ಕೊನೇ ದಿನಾಂಕವನ್ನು ವಿಸ್ತರಣೆ ಮಾಡಬೇಕು. ಈ ಮೂಲಕ ರೈತರಿಗೆ ಅನುಕೂಲವಾಗಬೇಕು ಎಂದು ಹೇಳಿದರು.

ಗೃಹ ಸಚಿವರಿಗೆ ಶಾಸಕ ತನ್ವೀರ್ ಸೇಠ್ ಪತ್ರ ಬರೆದಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಡಿ.ಜೆ.ಹಳ್ಳಿ ಕೆ.ಜೆ.ಹಳ್ಳಿ ಪ್ರಕರಣದಲ್ಲಿ ಕೈ ಶಾಸಕರ ಮನೆಗೆ ಬೆಂಕಿ ಹಚ್ಚಲಾಗಿತ್ತು. ಶಂಕಿತ ಉಗ್ರರ ಮನೆಯಲ್ಲಿ ಶಸ್ತ್ರಾಸ್ತ್ರಗಳು ಸಿಕ್ಕಿದರೂ ಸಚಿವರು, ಸರ್ಕಾರ ಕ್ರಮ ಕೈಗೊಳ್ಳಲು ಹಿಂದೆ ಮುಂದೆ ನೋಡುತ್ತಿವೆ ಎಂದು ತಿಳಿಸಿದರು.


ಉಡುಪಿಯ ಕಾಲೇಜು ವಿಡಿಯೊ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿ, ಈ ಬಗ್ಗೆ ಹೆಣ್ಣು ಮಗಳು ಟ್ವೀಟ್ ಮಾಡಿದ್ದಕ್ಕೆ ಅಧಿಕಾರಿಗಳು ಅವರ ಮನೆಗೆ ಹೋಗಿ ವಿಚಾರಣೆ ಮಾಡಿದ್ದಾರೆ. ಸರ್ಕಾರದ ಧೋರಣೆ ಏನು ಎಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ. ಸ್ಪಷ್ಟ ಬಹುಮತದಲ್ಲಿ ಅಧಿಕಾರಕ್ಕೆ ಬಂದಿದ್ದೇವೆ ಎಂಬ ಅಮಲಿನಲ್ಲಿ ಸರ್ಕಾರ ತೇಲುತ್ತಿದೆ. ಅಧಿಕಾರದ ಅಮಲಿನಿಂದ ಹೊರ ಬಂದು ರೈತರ ಸಮಸ್ಯೆಗೆ ಸ್ಪಂದಿಸಬೇಕು. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹಾಳಾಗಿದ್ದು, ಸರ್ಕಾರ ಅದರ ಕಡೆಯೂ ಗಮನ ಕೊಡಬೇಕು ಎಂದು ಹೇಳಿದರು.

ಅಂಜನಾಪುರ, ಅಂಬ್ಲಿಗೊಳ ಜಲಾಶಯಕ್ಕೆ ಬಾಗಿನ

 


ಈ ಬಾರಿ ಜಿಲ್ಲೆಯಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಬಹುತೇಕ ಕಡೆ ಕೆರೆ, ಜಲಾಶಯಗಳು ತುಂಬುವ ಹಂತಕ್ಕೆ ತಲುಪಿವೆ. ಅದೇ ರೀತಿ ಶಿಕಾರಿಪುರದಲ್ಲಿ ತಾಲೂಕಿನ ಜೀವನಾಡಿಗಳಾದ ಅಂಜನಾಪುರ, ಅಂಬ್ಲಿಗೊಳ ಜಲಾಶಯಗಳು ತುಂಬಿದ್ದರಿಂದ ಬುಧವಾರ ಶಾಸಕ ಬಿ.ವೈ. ವಿಜಯೇಂದ್ರ ದಂಪತಿ ಬಾಗಿನ ಅರ್ಪಣೆ ಮಾಡಿದರು...

PGK

Post a Comment

Previous Post Next Post