PGK NEWS:-ಕಾರವಾರ: ಪ್ರವಾಹ ಪೀಡಿತ ಪ್ರದೇಶದ ಜನ ಆತಂಕಕ್ಕೊಳಗಾಗುವ ಅವಶ್ಯಕತೆಯಿಲ್ಲ ಜಿಲ್ಲಾಡಳಿತ ನಿಮ್ಮ ಜತೆಗೆ ಇದೆ ಎಂದು ಜಿಲ್ಲಾಧಿಕಾರಿ ಗಂಗುಬಾಯಿ ಮಾನಕರ್ ಹೇಳಿದರು.
ಹೊನ್ನಾವರ ತಾಲೂಕಿನ ಪ್ರವಾಹ ಪೀಡಿತ ಬಸಕೆರೆ ಗ್ರಾಮದ ಪ್ರದೇಶಗಳಿಗೆ ಭೇಟಿ ನೀಡಿ ಅವರು, ಸಂತ್ರಸ್ತರ ಜತೆ ಮಾತುಕತೆ ನಡೆಸಿದರು. ಅಧೀನ ಅಧಿಕಾರಿಗಳು 24 ಗಂಟೆ ಕಾರ್ಯನಿರ್ವಹಿಸಲು ಕ್ರಮ ವಹಿಸಲಾಗಿದ್ದು, ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು. ನೆರೆಯಿಂದ ಉಂಟಾದ ಹಾನಿಗೆ ಸರ್ಕಾರದಿಂದ ಪರಿಹಾರ ಕೊಡಿಸಲು ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.
ಅಪ್ಸರಾಕೊಂಡ ಹಾಗೂ ಕಸರಕೋಡ ಭೂ ಕುಸಿತ ಪ್ರದೇಶಗಳಿಗೆ ಭೇಟಿ ನೀಡಿದ ಅವರು, ಅಗತ್ಯ ಮುಂಜಾಗೃತೆ ವಹಿಸುಂತೆ ಸ್ಥಳೀಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಳೆಗಾಲ ಇನ್ನೂ ಇದ್ದು ಯಾವುದೇ ಸಮಯದಲ್ಲು ಸಮಸ್ಯೆಗಳಾಗಬಹುದು ಈಗಲೇ ಎಚ್ಚತ್ತು ಕೊಂಡರೆ ಮುಂದೆ ಆಗಬಹುದಾದಂತ ದುರಂತಗಳನ್ನು ತಡೆಗಟ್ಟಲ್ಲು ಸಾಧ್ಯವಾಗುತ್ತದೆ ಎಂದರು.
ಹಾಸ್ಟೆಲ್‌ಗೆ ಭೇಟಿ:
ಜಿಲ್ಲಾಧಿಕಾರಿಗಳು ತಮ್ಮ ಪ್ರವಾಸದ ಸಮಯದಲ್ಲಿ ಕುಮಟಾದ ಬಿಸಿಎಂ ಹಾಸ್ಟೆಲ್‌ಗೆ ಭೇಟಿ ನೀಡಿ ಅಲ್ಲಿ ಅಗತ್ಯ ಮೂಲ ಸೌಕರ್ಯ ಒದಗಿಸಿರುವ ಬಗ್ಗೆ ಖಚಿತಪಡಿಸಿಕೊಂಡರು.
ಹಾಸ್ಟೆಲ್ ವಿದ್ಯಾರ್ಥಿಗಳ ಜತೆ ಮಾತುಕತೆ ನಡೆಸಿದ ಅವರು, ಸಮಸ್ಯೆ ಉಂಟಾದಲ್ಲಿ ನೇರವಾಗಿ ಜಿಲ್ಲಾಡಳಿತವನ್ನು ಸಂಪರ್ಕಿಸುವಂತೆ ಸೂಚಿಸಿದರು.
ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಸಹಲಹೆ ನೀಡಿದರು. ಗ್ರಾಮ ಒನ್ ಸಿಬ್ಬಂದಿಯ ಕಾರ್ಯವೈಖರಿಯ ಬಗ್ಗೆ ಚರ್ಚಿಸಿದರು. ಅಲ್ಲದೆ, ಮಾರ್ಗ ಮಧ್ಯದಲ್ಲಿ ರಸ್ತೆ, ಕುಡಿಯುವ ನೀರು, ಸೇತುವೆ ಮುಂತಾದ ಕಾಮಗಾರಿಗಳ ಬಗ್ಗೆ ಅವರು ಪರಿಶೀಲನೆ ನಡೆಸಿದರು.