PGK NEWS:-ಮಂಗಳೂರು:-ಕರಾವಳಿ ನಿಯಂತ್ರಣ ವಲಯ (ಸಿಆರ್‌ಝಡ್) ಅಡಿಯಲ್ಲಿ ಅನುಮತಿ ಪಡೆಯುವಲ್ಲಿ ವಿಳಂಬವಾಗಿರುವುದರಿಂದ ಕರ್ನಾಟಕದಲ್ಲಿ ಸಾಗರಮಾಲಾ ಯೋಜನೆಯಡಿಯಲ್ಲಿ ಕೇಂದ್ರದಿಂದ ಮಂಜೂರಾದ 26 ಕಡಲ ಯೋಜನೆಗಳನ್ನು ತಡೆಹಿಡಿಯಲಾಗಿದೆ ಎಂದು ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ್ ಸುಬ್ಬ ವೈದ್ಯ ಹೇಳಿದ್ದಾರೆ.
ಕರಾವಳಿ ನಿಯಂತ್ರಣ ವಲಯ (ಸಿಆರ್‌ಝಡ್) ಅಡಿಯಲ್ಲಿ ಅನುಮತಿ ಪಡೆಯುವಲ್ಲಿ ವಿಳಂಬವಾಗಿರುವುದರಿಂದ ಕರ್ನಾಟಕದಲ್ಲಿ ಸಾಗರಮಾಲಾ ಯೋಜನೆಯಡಿಯಲ್ಲಿ ಕೇಂದ್ರದಿಂದ ಮಂಜೂರಾದ 26 ಕಡಲ ಯೋಜನೆಗಳನ್ನು ತಡೆಹಿಡಿಯಲಾಗಿದೆ ಎಂದು ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ್ ಸುಬ್ಬ ವೈದ್ಯ ಹೇಳಿದ್ದಾರೆ.
ಶುಕ್ರವಾರ ಇಲ್ಲಿ ಕಾನ್ಫೆಡರೇಶನ್ ಆಫ್ ಇಂಡಿಯಾ ಇಂಡಸ್ಟ್ರಿಯ (ಸಿಐಐ) ರಾಜ್ಯ ವಿಭಾಗ ಆಯೋಜಿಸಿದ್ದ ಮೊದಲ ಕರ್ನಾಟಕ ಬಂದರು ಸಮ್ಮೇಳನ ಉದ್ದೇಶಿಸಿ ಮಾತನಾಡಿದ ಅವರು, ಹೂಡಿಕೆದಾರರು ಕಡಲ ಯೋಜನೆಗಳಿಗೆ ಹಣ ನೀಡಲು ಮುಂದೆ ಬಂದಿದ್ದಾರೆ. ಆದರೆ, ಕೇಂದ್ರವು ನಿಯಮಗಳಲ್ಲಿ ಕೆಲವು ಸಡಿಲಿಕೆಗಳನ್ನು ಘೋಷಿಸಿದ್ದರೂ, ಸಿಆರ್‌ಝಡ್ ಕ್ಲಿಯರೆನ್ಸ್ ಪಡೆಯಲು ಅಡೆತಡೆಗಳಿವೆ ಎಂದು ಹೇಳಿದರು.
ಉತ್ತರ ಕನ್ನಡ ಜಿಲ್ಲೆಯ ಮಾವಿನಕುರ್ವೆಯಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದ (ಪಿಪಿಪಿ) ಮಾದರಿಯಲ್ಲಿ ಬಂದರನ್ನು ಅಭಿವೃದ್ಧಿಪಡಿಸುವ ಪ್ರಸ್ತಾವನೆಯು ಸರ್ಕಾರದ ಪರಿಶೀಲನೆಯಲ್ಲಿದೆ ಎಂದು ಅವರು ಹೇಳಿದರು