ಭದ್ರಾವತಿ ಜನರ ಹೋರಾಟಕ್ಕೆ ಜಯ ಸಿಕ್ಕಿದ್ದು, ನಗರದಲ್ಲಿದ್ದ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯ ಯಂತ್ರಗಳು ಮತ್ತೆ ಸದ್ದು ಮಾಡಲಿವೆ. ಭಾರತೀಯ ಉಕ್ಕು ಪ್ರಾಧಿಕಾರ (SAIL) ವಿಐಎಸ್‌ಎಲ್ ಮರು ಕಾರ್ಯಾರಂಭಕ್ಕೆ ಅನುಮತಿ ನೀಡಲಿವೆ. ಆಗಸ್ಟ್ 10ರಿಂದಲೇ ವಿಐಎಸ್‌ಎಲ್ ಮತ್ತೆ ಕಾರ್ಯಾರಂಭ ಮಾಡಲಿದೆ ಎಂದು ,ಸಂಸದ ಬಿವೈ ರಾಘವೇಂದ್ರ ಅವರು ಮಾಹಿತಿ ನೀಡಿದ್ದಾರೆ.
PGK NEWS ಶಿವಮೊಗ್ಗ : ಭದ್ರಾವತಿ ಜನರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಮತ್ತೆ ಆರಂಭವಾಗಲಿದೆ. ವಿಐಎಸ್‌ಎಲ್ ಕಾರ್ಖಾನೆಯ ಮರು ಕಾರ್ಯಾರಂಭಕ್ಕೆ ಭಾರತೀಯ ಉಕ್ಕು ಪ್ರಾಧಿಕಾರ (SAIL) ಅನುಮತಿ ನೀಡಿದೆ. ಆಗಸ್ಟ್ 10ರಿಂದ ಬಾರ್‌ಮಿಲ್ ಶುರುವಾಗಲಿದ್ದು, ಶೀಘ್ರದಲ್ಲಿಯೇ ವಿಐಎಸ್‌ಎಲ್ ಕಾರ್ಖಾನೆ ಕೆಲಸ ಶುರುಮಾಡಲಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಸಂಸದ ಬಿವೈ ರಾಘವೇಂದ್ರ ಅವರು, ಮತ್ತೆ ಶುರುವಾಗುತ್ತಿದೆ ಭದ್ರಾವತಿಯ ಸುವರ್ಣಯುಗ, ಮತ್ತೆ ಫಳಫಳಿಸಲಿದೆ ಕಪ್ಪು ಚಿನ್ನ, ವಿಐಎಸ್ಎಲ್ ಮೈಕೊಡವಿ ಮೇಲೇಳುತ್ತಿದೆ ಎಂದು ತಮ್ಮ ಫೇಸ್‌ಬುಕ್ ಪುಟದಲ್ಲಿ ಬರೆದುಕೊಂಡಿದ್ದಾರೆ. ಅದಲ್ಲದೇ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಉಕ್ಕು ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಅವರಿಗೆ ಸಂಸದರು ಧನ್ಯವಾದ ಸಲ್ಲಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಸಂಸದ ಬಿವೈ ರಾಘವೇಂದ್ರ ಅವರು, ಮತ್ತೆ ಶುರುವಾಗುತ್ತಿದೆ ಭದ್ರಾವತಿಯ ಸುವರ್ಣಯುಗ, ಮತ್ತೆ ಫಳಫಳಿಸಲಿದೆ ಕಪ್ಪು ಚಿನ್ನ, ವಿಐಎಸ್ಎಲ್ ಮೈಕೊಡವಿ ಮೇಲೇಳುತ್ತಿದೆ ಎಂದು ತಮ್ಮ ಫೇಸ್‌ಬುಕ್ ಪುಟದಲ್ಲಿ ಬರೆದುಕೊಂಡಿದ್ದಾರೆ. ಅದಲ್ಲದೇ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಉಕ್ಕು ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಅವರಿಗೆ ಸಂಸದರು ಧನ್ಯವಾದ ಸಲ್ಲಿಸಿದ್ದಾರೆ.
ಭಾರತೀಯ ಉಕ್ಕು ಪ್ರಾಧಿಕಾರ ನಿಯಮಿತದ (SAIL) ಆಡಳಿತ ಮಂಡಳಿ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯಲ್ಲಿ ಉತ್ಪಾದನೆಗೆ ಅನುಮತಿ ನೀಡಿದೆ. ಇದೇ ತಿಂಗಳು ಅಂದರೆ ಆಗಸ್ಟ್ 10ಕ್ಕೆ ಬಾರ್‌ಮಿಲ್ ಶುರುವಾಗಲಿದೆ. ಅದಾದ ಕೆಲ ದಿನದಲ್ಲಿಯೇ ಕಾರ್ಖಾನೆ ಸಂಪೂರ್ಣ ಪುನರಾರಂಭವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.
ಸವಾಲುಗಳನ್ನೆಲ್ಲಾ ಎದುರಿಸಿ ಗೆದ್ದ ಹೆಮ್ಮೆ ಶಿವಮೊಗ್ಗ ಜಿಲ್ಲೆ ಹಾಗೂ ಭದ್ರಾವತಿ ನಗರದ ಜನರದ್ದು, ಭರವಸೆ ಕಳೆದುಕೊಳ್ಳದ ನೌಕರ ಸಮುದಾಯದ್ದು ಎಂದಿರುವ ಅವರು. ವಿಐಎಸ್‌ಎಲ್ ಪುನರಾರಂಭಕ್ಕೆ ಕಾರಣವಾದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಉಕ್ಕು ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಕೃತಜ್ಞತೆಗಳು ಎಂದಿರುವ ಅವರು, ಭದ್ರಾವತಿಯ ಸಮಸ್ತ ಜನರ ಪ್ರಾರ್ಥನೆ ಫಲ ಕೊಟ್ಟಿದೆ ಎಂದಿದ್ದಾರೆ..
100 ವರ್ಷ ತುಂಬಿರುವಾಗಲೇ ಮುಚ್ಚುವ ನಿರ್ಧಾರ ಮಾಡಿದ್ದ ಕೇಂದ್ರ!
ವಿಐಎಸ್‌ಎಲ್‌ಗೆ 100 ವರ್ಷ ತುಂಬಿರುವಾಗಲೇ ಈ ನಿರ್ಧಾರವನ್ನು ಕೇಂದ್ರ ಸರ್ಕಾರ ಮಾಡಿತ್ತು. ಆದರೆ, ವಿಶ್ವೇಶ್ವರಯ್ಯ ಉಕ್ಕು ಮತ್ತು ಕಬ್ಬಿಣ ಕಾರ್ಖಾನೆ (ವಿಐಎಸ್‌ಎಲ್) ಮುಚ್ಚಬಾರದು ಪುನಃ ಉತ್ಪಾದನೆ ಆರಂಭಿಸಬೇಕು ಎಂದು ಹೋರಾಟ ನಡೆದಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಕಳೆದ ತಿಂಗಳು ವಿಐಎಸ್‌ಎಲ್ ಮುಚ್ಚುವ ನಿರ್ಧಾರವನ್ನು ಕೇಂದ್ರ ಸರ್ಕಾರ ಪುನರ್ ಪರಿಶೀಲಿಸಬೇಕು ಎಂದು ಕೇಂದ್ರ ಉಕ್ಕು ಖಾತೆ ಸಚಿವ ಜ್ಯೋತಿರಾದಿತ್ಯ ಸಿಂಧಿಯಾಗೆ ಪತ್ರ ಬರೆದಿದ್ದರು. ಈಗ ಕೇಂದ್ರ ಸರ್ಕಾರ ಮತ್ತೆ ವಿಐಎಸ್‌ಎಲ್ ಆರಂಭಕ್ಕೆ ಅನುಮತಿ ನೀಡಿದೆ.ವರದಿ :-ನವೀನ್ ಭದ್ರಾವತಿ.