PGK NEWS (ಪಶ್ಚಿಮ ಘಟ್ಟ ವಾಯ್ಸ್ ) ರಾಜ್ಯದಲ್ಲಿ ಮಳೆ ಕೊರತೆ, ಬರಗಾಲ: ಡಿಸಿ, ಸಿಇಓಗಳ ಜೊತೆ ಸಿಎಂ ಮಹತ್ವದ ಸಭೆ; ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸೇರಿದಂತೆ ಅಭಿವೃದ್ಧಿ ವಿಚಾರಗಳ ಕುರಿತು ಚರ್ಚೆ.

 

PGK NEWS  (ಪಶ್ಚಿಮ ಘಟ್ಟ ವಾಯ್ಸ್ )  ಬೆಂಗಳೂರು: ರಾಜ್ಯ ಸರ್ಕಾರ ಮಂಗಳವಾರ ಮತ್ತು ಬುಧವಾರದಂದು ಮಹತ್ವದ ಸಭೆಯನ್ನು ಕರೆದಿದ್ದು, ರಾಜ್ಯಕ್ಕೆ ಸವಾಲಾಗಿರುವ ಪ್ರಮುಖ ಸಮಸ್ಯೆಗಳನ್ನು, ವಿಶೇಷವಾಗಿ ಬರ ಮತ್ತು ಅಭಿವೃದ್ಧಿ ಕುರಿತಾಗಿ ಚರ್ಚಿಸಲಿದೆ. ಎಲ್ಲಾ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಸಚಿವರು, ಮುಖ್ಯ ಕಾರ್ಯದರ್ಶಿಗಳು, ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು ಮತ್ತು ಪ್ರಧಾನ ಕಾರ್ಯದರ್ಶಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.

'ನಾವು ಬರ ಮತ್ತು ಇತರ ಪ್ರಮುಖ ಅಭಿವೃದ್ಧಿ ವಿಷಯಗಳ ಬಗ್ಗೆ ಚರ್ಚಿಸುತ್ತೇವೆ' ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಇದು ಮಹತ್ವದ ಸಭೆ ಎಂದು ಸ್ಪಷ್ಟಪಡಿಸಿದ್ದಾರೆ.

ಬರಗಾಲಕ್ಕೆ ಸಂಬಂಧಿಸಿದಂತೆ, ಈ ತಿಂಗಳು ಕೆಲವು ಪ್ರದೇಶಗಳಲ್ಲಿ ಮಳೆಯಾಗಿರುವುದರಿಂದ ಅಂತಿಮ ಚಿತ್ರಣ ಸ್ಪಷ್ಟವಾಗುವುದಕ್ಕೆ ಸರ್ಕಾರವು ಸೆಪ್ಟೆಂಬರ್ ಅಂತ್ಯದವರೆಗೆ ಕಾಯಬೇಕೆಂದು ಕೆಲವು ತಜ್ಞರು ಸೂಚಿಸಿದ್ದಾರೆ. ರೈತ ಸಮುದಾಯಕ್ಕೆ ಲಾಭವಾಗಬೇಕಾದರೆ ನಿಯಮಾವಳಿಗಳನ್ನು ಸಡಿಲಿಸಬೇಕಾಗಿದೆ ಎಂದು ಸರ್ಕಾರ ಹೇಳಿದೆ.

ಸೆಪ್ಟೆಂಬರ್ 15 ರಂದು ಗೃಹ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸರ್ಕಾರ ಗಮನ ಹರಿಸಲಿದ್ದು, ರಾಜ್ಯದಾದ್ಯಂತ ಪೊಲೀಸ್ ಅಧಿಕಾರಿಗಳು ಭಾಗವಹಿಸುವ ನಿರೀಕ್ಷೆಯಿದೆ.


ಗ್ಯಾರಂಟಿ ಯೋಜನೆಗಳು ಮಾತ್ರವಲ್ಲದೆ ಮಳೆ ಕೊರತೆ, ಬರಗಾಲ ಪರಿಸ್ಥಿತಿಯ ಬಗ್ಗೆಯೂ ಸಿಎಂ ಆಯಾ ಜಿಲ್ಲೆಗಳ ಡಿಸಿ ಮತ್ತು ಸಿಇಒಗಳಿಂದ ಮಾಹಿತಿ ಪಡೆಯಲಿದ್ದಾರೆ. ಇಂದು ಡಿಸಿ, ಸಿಇಒಗಳ ಜೊತೆ ಚರ್ಚೆ ನಡೆಸಲಿರುವ ಸಿಎಂ, ನಾಳೆಯಿಂದ ಎಸಿಪಿಯಿಂದ ಮೇಲ್ಪಟ್ಟ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.





ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳ ಪೈಕಿ ಈಗಾಗಲೇ ನಾಲ್ಕು ಗ್ಯಾರಂಟಿಗಳು ಜಾರಿಯಾಗಿವೆ. ರಾಜ್ಯದ ಕೆಲವೆಡೆ ಇನ್ನೂ ಗ್ಯಾರಂಟಿ ಯೋಜನೆಗಳ ಲಾಭ ಫಲಾನುಭವಿಗಳಿಗೆ ದೊರೆತಿಲ್ಲ ಎಂಬ ದೂರುಗಳು ಕೇಳಿ ಬಂದಿವೆ. ಈ ಕುರಿತು ಸಿಎಂ ಮಾಹಿತಿ ಪಡೆಯಲಿದ್ದಾರೆ ಎನ್ನಲಾಗಿದೆ.


Advertisement



PGK

Post a Comment

Previous Post Next Post