PGK NEWS(.ಪಶ್ಚಿಮ ಘಟ್ಟ ವಾಯ್ಸ್ )ರಸ್ತೆ ಕಾಮಗಾರಿಯಲ್ಲಿ ಅವ್ಯವಹಾರದ ಕಾಮಗಾರಿ ಆರೋಪ; ಮೂವರು ಇಂಜಿನಿಯರ್‌ಗಳ ಅಮಾನತು.

 


    •  PGK NEWS(.ಪಶ್ಚಿಮ ಘಟ್ಟ ವಾಯ್ಸ್ )ರಸ್ತೆ ಕಾಮಗಾರಿಗಳಲ್ಲಿ ಅವ್ಯವಹಾರ ನಡೆಸಿದ ಆರೋಪದ ಮೇಲೆ ಕಲಬುರಗಿ ವಿಭಾಗದ ಪಂಚಾಯತ್‌ ರಾಜ್‌ ಇಂಜಿನಿಯರಿಂಗ್‌ (ಪಿಆರ್‌ಇ) ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್‌ ಸೇರಿ ಮೂವರು ಇಂಜಿನಿಯರ್‌ಗಳನ್ನು ಅಮಾನತುಗೊಳಿಸಲಾಗಿದೆ.

      ಭ್ರಷ್ಟರಿಗೆ ತಕ್ಕ ಪಾಠ ಕಲಿಸುವುದಾಗಿ ಅಧಿಕಾರ ವಹಿಸಿಕೊಂಡ ಬಳಿಕ ಜನತೆಗೆ ವಾಗ್ದಾನ ಮಾಡಿದ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಸಚಿವ ಪ್ರಿಯಾಂಕ್‌ ಖರ್ಗೆ ಅವರು ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಗ್ರಾಮೀಣ ರಸ್ತೆಗಳಲ್ಲಿ ಅವ್ಯವಹಾರ ಎಸಗಿದ ಮೂವರು ಇಂಜಿನಿಯರ್‌ಗಳನ್ನು ಇಲಾಖೆ ಮೂಲಕ ಅಮಾನತುಗೊಳಿಸುವ ಮೂಲಕ ಅಧಿಕಾರಿಗಳ ವರ್ಗದಲ್ಲಿ ಬಿಸಿ ಮುಟ್ಟಿಸಿದ್ದಾರೆ.

      ರಸ್ತೆ ಕಾಮಗಾರಿಗಳಲ್ಲಿ ಅವ್ಯವಹಾರ ನಡೆಸಿದ ಆರೋಪದ ಮೇಲೆ ಕಲಬುರಗಿ ವಿಭಾಗದ ಪಂಚಾಯತ್‌ ರಾಜ್‌ ಇಂಜಿನಿಯರಿಂಗ್‌ (ಪಿಆರ್‌ಇ) ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್‌ ಸೇರಿ ಮೂವರು ಇಂಜಿನಿಯರ್‌ಗಳನ್ನು ಅಮಾನತುಗೊಳಿಸಲಾಗಿದೆ.

      ಪಿಆರ್‌ಇ ಕಲಬುರಗಿ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್‌ ಮೋನಪ್ಪ, ಪಿಆರ್‌ಇ ಸೇಡಂ ಉಪ ವಿಭಾಗದ ಸಹಾಯಕ ಕಿರಿಯ ಇಂಜಿನಿಯರ್‌ ಹನುಮಂತಪ್ಪ ಅಡವಣಿ ಮತ್ತು ಕಿರಿಯ ಇಂಜಿನಿಯರ್‌ ಮೀರಾಜುದ್ದೀನ್‌ ಪಟೇಲ್‌ ಅವರನ್ನು ಅಮಾನತು ಮಾಡಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ (ಸೇವೆಗಳು-ಎ) ಚೇತನ್‌ ಎಂ. 

ಆದೇಶ ಹೊರಡಿಸಿದ್ದಾರೆ.

ಏನಿದು ಅವ್ಯವಹಾರ ಪ್ರಕರಣ

ಸಿಎಂ ವಿಶೇಷ ಅನುದಾನದಲ್ಲಿ ಸೇಡಂ ತಾಲೂಕಿನ ಬಿಬ್ಬಳ್ಳಿ ಗ್ರಾಮದಲ್ಲಿ ಚರಂಡಿ, ಬೆನಕನಳ್ಳಿ ಗ್ರಾಮದ ಊಡಗಿ ಮುಖ್ಯ ರಸ್ತೆವರೆಗಿನ ರಸ್ತೆ ಅಭಿವೃದ್ಧಿ ಮತ್ತು ಸೇಡಂ ಮುಖ್ಯ ರಸ್ತೆಯಿಂದ ಸೇಡಂ ತಾಲೂಕಿನ ಆಡಕಿ ಗ್ರಾಮದ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನದವರೆಗಿನ ರಸ್ತೆ ಅಭಿವೃದ್ಧಿ ಹೀಗೆ ಮೂರು ರಸ್ತೆ ಕಾಮಕಾರಿಗಳಿಗೆ 10 ಕೋಟಿ ರೂ.ಕಾಮಗಾರಿಗೆ ತಾಂತ್ರಿಕ ಅನುಮೋದನೆ ನೀಡಿ ಗುತ್ತಿಗೆದಾರರಿಗೆ ವಹಿಸಲಾಗಿತ್ತು.

ಈ ಮೂರು ರಸ್ತೆಗಳ ನಿರ್ಮಾಣಕ್ಕೆ ಕಾರ್ಯಾದೇಶ ನೀಡಲಾಗಿತ್ತು. ಕಿರಿಯ ಇಂಜಿನಿಯರ್‌ರಗಳು ಕಾಮಗಾರಿಗಳ ಅಳತೆಯನ್ನು ತೆಗೆದುಕೋಂಡು ಅಳತೆ ಪುಸ್ತಕದಲ್ಲಿ ನಮೂದಿಸಿದ್ದು, ಅದಕ್ಕೆ ಗುತ್ತಿಗೆದಾರರು ಸಹಿ ಮಾಡಿರುವುದು ಮತ್ತು ಅದನ್ನು ಪರಿಶೀಲಿಸಿ ಅಳತೆ ಸರಿಯಾಗಿ ಇರುವುದಾಗಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ ದೃಢೀಕರಿಸಿ ವಿಭಾಗದ ಕಚೇರಿಗೆ ಕಳಿಸಿದ್ದು, 2022ರ ಮಾರ್ಚ್‌ 14 ರಂದು ಗುತ್ತಿಗೆದಾರರಿಗೆ ಬಿಲ್‌ ಪಾವತಿಸಲಾಗಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಸಚಿವ ಪ್ರಿಯಾಂಕ್‌ ಖರ್ಗೆ ಅವರು ತಮ್ಮ ಇಲಾಖೆಯಲ್ಲಿ ನಡೆದ ಅವ್ಯವಹಾರದ ತನಿಖೆ ಕೈಗೊಂಡು ಮೂವರು ಇಂಜಿನಿಯರ್‌ಗಳನ್ನು ಅಮಾನಗುತೊಳಿಸಿ ಅಧಿಕಾರಿಗಳಲ್ಲಿ ಭಯ ಹುಟ್ಟಿಸಿದ್ದು, ಜಿಲ್ಲಾ ಉಸ್ತುವಾರಿ ಸಚಿವರಾಗಿರುವುದರಿಂದ ಜಿಲ್ಲಾ ವ್ಯಾಪ್ತಿಯಲ್ಲಿ ಎಲ್ಲ ಇಲಾಖೆಗಳ ಮೇಲೆ ನಿಗಾ ವಹಿಸಿದ್ದಾರೆ. ಯಾರು ತಪ್ಪು ಮಾಡುತ್ತಾರೋ ಅವರಿಗೆ ಶಿಕ್ಷೆ ವಿಧಿಸುವ ಕಾರ್ಯ ಮಾಡಲಿದ್ದಾರೆ. ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳು ಮೂವರು ಇಂಜನಿಯರ್‌ಗಳು ಅಮಾನತುಗೊಂಡಿರುವ ವಿಷಯ ಗಂಭೀರವಾಗಿ ಪರಿಗಣಿಸಿ ಪ್ರಾಮಾಣಿಕ ಮತ್ತು ದಕ್ಷತೆಯಿಂದ ಕೆಲಸ ಮಾಡಬೇಕಾಗಿದೆ.





PGK

Post a Comment

Previous Post Next Post