PGK NEWS :-ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ,ಅಧಿಕಾರಿಗಳ ವರ್ಗ ಮೌನ.

ಬೆಂಗಳೂರು,ಸಪ್ಟಂಬರ್ 8: ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೊಪ್ಪಳ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ದಾವಣಗೆರೆ, ಕೊಡಗು, ಧಾರವಾಡ ಹಾಗೂ ಬೀದರ್ ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ಅಕಾರಿಗಳು ಗುರುವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ.

ಬೆಂಗಳೂರು: ದೇವನಹಳ್ಳಿಯ ಗ್ರೇಡ್- 2 ತಹಶೀಲ್ದಾರ್ ಶಿವರಾಜ್, ಚಿಕ್ಕಜಾಲ ಗ್ರಾಮ ಪಂಚಾಯಿತಿ ಸದಸ್ಯ ಲಕ್ಷ್ಮೀಪತಿ ಸೇರಿದಂತೆ ನಾಲ್ವರಿಗೆ ಸಂಬಂಸಿದ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ.

ತುಮಕೂರು:- ಜನಸ್ಪಂದನ ಕಚೇರಿಯ ಮುಖ್ಯ ಕಾರ್ಯನಿರ್ವಾಹಕ ಅಕಾರಿ ಭೂವನಹಳ್ಳಿ ನಾಗರಾಜ್, ಲಂಚ ಪ್ರಕರಣದಲ್ಲಿ ಇತ್ತೀಚೆಗಷ್ಟೇ ಬಂತರಾಗಿದ್ದ ಬಿಬಿಎಂಪಿ ಕಂದಾಯ ನಿರೀಕ್ಷಕ ನಟರಾಜ್ ದಾಳಿಗೊಳಗಾದವರಲ್ಲಿ ಸೇರಿದ್ದಾರೆ.
ಭೂವನಹಳ್ಳಿ ನಾಗರಾಜ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನಿರ್ದೇಶಕರಾಗಿ ನಿವೃತ್ತರಾಗಿದ್ದರು. ಬಳಿಕ ಜನಸ್ಪಂದನ ಕಚೇರಿಯ ಸಿಇಒ ಹುದ್ದೆಗೆ ನೇಮಕಗೊಂಡಿದ್ದರು.

ಲೋಕಾಯುಕ್ತದ ಬೆಂಗಳೂರು ನಗರ ಪೊಲೀಸ್ ವಿಭಾಗದಲ್ಲಿ ಈ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಇವರಿಗೆ ಸಂಬಂಸಿದಂತೆ 23 ಸ್ಥಳಗಳಲ್ಲಿ ಶೋಧ ನಡೆಸಲಾಗುತ್ತಿದೆ.

ತುಮಕೂರು: ನಗರಾಭಿವೃದ್ಧಿ ಪ್ರಾಕಾರದ ಜಂಟಿ ನಿರ್ದೇಶಕ ನಾಗರಾಜು ಅವರ ಮನೆ ಹಾಗೂ ಕಚೇರಿ ಮೇಲೆ ಗುರುವಾರ ಲೋಕಾಯುಕ್ತ ಅಕಾರಿಗಳು ದಾಳಿ ನಡೆಸಿದ್ದಾರೆ.

ನಗರದ ದೇವನೂರು ಚರ್ಚ್ ಬಳಿ ಇರುವ ನಾಗರಾಜು ಮನೆ ಮತ್ತು ನಗರದ ಬೆಳಗುಂಬ ರಸ್ತೆ ಯಲ್ಲಿರುವ ಟೂಡಾ (ತುಮಕೂರು ನಗರಾಭಿವೃದ್ದಿ ಪ್ರಾಕಾರ) ಕಚೇರಿಯಲ್ಲಿ ಲೋಕಾಯುಕ್ತ ಅಕಾರಿಗಳು ದಾಖಲೆ ಪರಿಶೀಲನೆ ನಡೆಸಿದ್ದಾರೆ.
ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.


PGK

Post a Comment

Previous Post Next Post