PGK NEWS(ಪಶ್ಚಿಮಘಟ್ಟ ವಾಯ್ಸ್ ) ಐಟಿ ದಾಳಿ ವೇಳೆ ಗುತ್ತಿಗೆದಾರನ ಮನೆಯಲ್ಲಿ ಪತ್ತೆಯಾದ ಕಂತೆ ಕಂತೆ ಹಣ ಯಾರದ್ದು?

 


PGK NEWS  (ಪಶ್ಚಿಮಘಟ್ಟ ವಾಯ್ಸ್ ) ಬೆಂಗಳೂರು, ಅಕ್ಟೋಬರ್‌ 13: ಪಂಚರಾಜ್ಯ ಚುನಾವಣೆ ಘೋಷಣೆ ಆಗಿದ್ದೇ ತಡ, ರಾಜ್ಯದಲ್ಲಿ ಕುರುಡು ಕಾಂಚಾಣ ಕಂತೆ ಕಂತೆಯಾಗಿ ಕಾಟನ್ ಬಾಕ್ಸ್ ಗಳಲ್ಲಿ ಕುಣಿಯುತ್ತಿದೆ! ಅದೂ ಮಂಚದ ಕೆಳಗೆ! ಐಟಿದಾಳಿ ವೇಳೆ ಗುತ್ತಿಗೆದಾರನ ಮನೆಯಲ್ಲಿ ಪತ್ತೆಯಾದ ಹಣ ಯಾರದ್ದು? ಎಂದು ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.


ಈ ಕುರಿತು ಟ್ವೀಟ್‌ ಮಾಡಿರುವ ಎಚ್‌ ಡಿ ಕುಮಾರಸ್ವಾಮಿ, ಐಟಿದಾಳಿ ವೇಳೆ ಗುತ್ತಿಗೆದಾರನ ಮನೆಯಲ್ಲಿ ಪತ್ತೆಯಾದ ಹಣ ಯಾರದ್ದು? ಯಾರ ಹೆಣದ ಮೇಲೆ ಸಂಗ್ರಹಿಸಿದ ಪಾಪದ ಹಣವಿದು? ಈ ಪ್ರಶ್ನೆಗಳಿಗೆ ಉತ್ತರ ಬೇಕಿದೆ ಎಂದು ಕೇಳಿದ್ದಾರೆ.

ಆಯ್ದ ಗುತ್ತಿಗೆದಾರರಿಗೆ ಬಿಬಿಎಂಪಿಯಿಂದ 650 ಕೋಟಿ ರೂ. ಬಿಡುಗಡೆಯಾದ ಬೆನ್ನಲ್ಲೇ ಈ 42 ಕೋಟಿ ರೂ. ಐಟಿ ಅಧಿಕಾರಿಗಳಿಗೆ ಸಿಕ್ಕಿಬೀಳುತ್ತದೆ. ಅಲ್ಲಿಗೆ ಕಲೆಕ್ಷನ್ ನಿಜ ಎಂದಾಯಿತು. ಅದು ಎಷ್ಟು ಪರ್ಸಂಟೇಜ್? ಅದರ ಹಿಂದೆ ಅಡಗಿ ಕೂತಿರುವ ಆದಿಪುರುಷರು ಯಾರು? ಎಂದು ಪ್ರಶ್ನಿಸಿದ್ದಾರೆ.

23 ಬಾಕ್ಸ್ ಗಳಲ್ಲಿ ತುಂಬಿಡಲಾಗಿದ್ದ ಈ ಇಡಗಂಟು ಪಕ್ಕದ ತೆಲಂಗಾಣಕ್ಕೆ ಹೊರಟು ನಿಂತಿತ್ತು ಎನ್ನುವುದು ಮಾಹಿತಿ. ಅಲ್ಲಿಗೆ ಚುನಾವಣೆಗಾಗಿ ಈ ಹಣವನ್ನು ಸಂಗ್ರಹ ಮಾಡಲಾಗಿತ್ತು ಎನ್ನುವುದು ಸತ್ಯ. ಈ ಕನಕ ಮಹಾಲಕ್ಷ್ಮಿಯ ಕಲೆಕ್ಷನ್ ಗೆ 'ಬೆಂಗಳೂರು ನಗದು ಅಭಿವೃದ್ಧಿ ಇಲಾಖೆ'ಯ ಕೈ ಕರಾಮತ್ತು ಅಂತ ಇನ್ನೊಂದು ಮಾಹಿತಿ. ಅಷ್ಟರಲ್ಲಿ ಐಟಿ ಇಲಾಖೆ ಮುಗಿಬಿದ್ದ ಪರಿಣಾಮ, ಗುಟ್ಟು ರಟ್ಟಾಗಿದೆ. ಅಲ್ಲಿಗೆ ಕಾಂಗ್ರೆಸ್‌ ಸರಕಾರದಲ್ಲಿ ಪರ್ಸಂಟೇಜ್ ಪಾರಮ್ಯ ಅವ್ಯಾಹತ ಎಂದಾಯಿತು? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.


ಈಗ ಹೇಳಿ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ.. 42 ಕೋಟಿ ರೂ. ಬಗ್ಗೆ ಯಾವ ತನಿಖೆ ಮಾಡಿಸುತ್ತೀರಿ? ಸಿಬಿಐ, ಈಡಿ, ಹಾಲಿ ನ್ಯಾಯಾಧೀಶರು, ನಿವೃತ್ತ ನ್ಯಾಯಾಧೀಶರು..? ದಯಮಾಡಿ ಹೇಳಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌ ನಾಯಕ ಎಚ್‌ ಡಿ ಕುಮಾರಸ್ವಾಮಿ ಕೇಳಿದ್ದಾರೆ.

ರೈತರು ಬರ, ವಿದ್ಯುತ್ ಬಿಕ್ಕಟ್ಟಿನಿಂದ ಕಂಗೆಟ್ಟಿದ್ದಾರೆ. ಗುತ್ತಿಗೆದಾರರು ಅಯೋಮಯ ಸ್ಥಿತಿಯಲ್ಲಿದ್ದಾರೆ. ಆದರೂ ಕಲೆಕ್ಷನ್ ' ಕೈ ' ಚಳಕ ಜೋರಾಗಿದೆ. ಪಂಚರಾಜ್ಯಗಳ ಪಾಲಿಕೆ ಕರ್ನಾಟಕ ಸಮೃದ್ಧ ಎಟಿಎಮ್!! ಕಾವೇರಿ ನೀರು ತಮಿಳುನಾಡಿಗೆ ನಿರಂತರ ಹರಿಯುತ್ತಿದ್ದರೆ, ಕನ್ನಡಿಗರ ತೆರಿಗೆಲಕ್ಷ್ಮೀ ಎಲೆಕ್ಷನ್ ರಾಜ್ಯಗಳ ಪಾಲಾಗುತ್ತಿದ್ದಾಳೆ.

ಆದಿಯಿಂದಲೂ ಇದೇ ಕಥೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹೈಕಮಾಂಡ್ ಗೆ ಹಬ್ಬ. ಈಗಲೂ ಅದೇ ಆಗುತ್ತಿದೆ. ಪಂಚರಾಜ್ಯಗಳ ಚುನಾವಣೆಗಾಗಿ ಕರ್ನಾಟಕಕ್ಕೆ ಕನ್ನ ಹೊಡೆಯಲಾಗಿದೆ. ವೋಟು ಕೊಟ್ಟ ತಪ್ಪಿಗೆ ಕಾಂಗ್ರೆಸ್ ಉಂಡು ಹೋಗುತ್ತಿದೆ, ಕೊಂಡು ಹೋಗುತ್ತಿದೆ. ಇದು ಕನ್ನಡಿಗರ ಕರ್ಮ ಎಂದು ಹೇಳುವ ಮೂಲಕ ಕರ್ನಾಟಕಕ್ಕೆ ಕಾಂಗ್ರೆಸ್‌ ಕನ್ನಡ ಎಂದು ಹ್ಯಾಶ್‌ ಟ್ಯಾಗ್‌ ಬಳಸಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಅಶ್ವತ್ಥಮ್ಮ ಅಂಬಿಕಾಪತಿ


ಆರ್‌ಟಿ ನಗರದ ಆನಂದ ಕಾಲೋನಿಯ ಅಶ್ವತ್ಥಮ್ಮ ಕಾಂಗ್ರೆಸ್ ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಹಿರಿಯ ಸಹೋದರಿಯಾಗಿದ್ದಾರೆ, ಕಳೆದ ೨೦೦೧ರಲ್ಲಿ ಕಾವಲ್ ಬೈರಸಂದ್ರ (ವಾರ್ಡ್. ನಂ.೯೫)ರ ಕಾರ್ಪೊರೇಟರ್ ಆಗಿದ್ದರು. ಇವರ ಪತಿ ಆರ್.ಅಂಬಿಕಾಪತಿ ಗುತ್ತಿಗೆದಾರರಾಗಿದ್ದು, ಕೆಂಪಣ್ಣ ಅವರ ಕಾಂಟ್ರಾಕ್ಟರ್ ಸಂಘದಲ್ಲಿ ಗುರುತಿಸಿಕೊಂಡಿದ್ದಾರೆ.


ಹಿಂದಿನ ಬಿಜೆಪಿ ಸರ್ಕಾರದ ಮೇಲೆ ರಾಜ್ಯದಲ್ಲಿ ನಡೆಯುವ ಕಾಮಗಾರಿಗೆ ಶೇ.೪೦ ನೀಡಬೇಕು, ಬಿಬಿಎಂಪಿಯಲ್ಲಿ ೫೦ ಪರ್ಸೆಂಟ್ ನೀಡಬೇಕು ಕೆಲವು ರಾಜಕೀಯ ವ್ಯಕ್ತಿಗಳ ವಿರುದ್ಧ ಆರೋಪ ಮಾಡಿದ್ದರು.ತನ್ನ ವಿರುದ್ಧ ಕಮೀಷನ್ ಆರೋಪ ಮಾಡಿದ ಬಿಜೆಪಿ ಶಾಸಕ ಮುನಿರತ್ನ ಅವರು ಅಂಬಿಕಾಪತಿ ವಿರುದ್ಧ ಮಾನನಷ್ಟ ಮೊಕದ್ದಮ್ಮೆ ಹೂಡಿದ್ದರು. ಈ ಪ್ರಕರಣದಲ್ಲಿ ಅಂಬಿಕಾಪತಿ ವೈಯ್ಯಾಲಿಕಾವಲ್ ಠಾಣೆ ಪೊಲೀಸರಿಂದ ಬಂಧನಕ್ಕೊಳಗಾಗಿ ಬಳಿಕ ಜಾಮೀನು ಮೇಲೆ ಬಿಡುಗಡೆಯಾಗಿದ್ದರು.
ಆರ್‌ಟಿ ನಗರದ ವೈಟ್ ಗೌಸ್‌ನಲ್ಲಿರುವ ಅಂಬಿಕಾಪತಿ ಮಗಳ ಮನೆ,ಮಾನ್ಯತಾ ಟೆಕ್ ಪಾರ್ಕ್ ಬಳಿಯ ಒಂದು ಮನೆ ಆರ್‌ಟಿ ನಗರದ ಸುಲ್ತಾನ್ ಪಾಳ್ಯದಲ್ಲಿ ಎರಡು ಕಡೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

www.westernghatsvoice.com

GOVERNMENT OF INDIA
OFFICE OF THE REGISTRAR OF NEWSPAPERS FOR INDIA
(MINISTRY OF INFORMATION & BROADCASTING)





PGK

Post a Comment

Previous Post Next Post