PGK NEWS:- ಉಡುಪಿ: ಜಿಲ್ಲೆಯ ಕಟ್ಟಡ ಸಾಮಗ್ರಿ ಸಾಗಾಟ ಲಾರಿ ಟೆಂಪೋ ಮಾಲಕರು ಸಂಘಟನೆಗಳ ಒಕ್ಕೂಟವು ಪರವಾನಿಗೆ ವಿಷಯವಾಗಿ ಕಳೆದ ಕೆಲವು ದಿನಗಳಿಂದ ನಡೆಸುತ್ತಿದ್ದ ಅನಿರ್ದಿಷ್ಟ ಅವಧಿ ಮುಷ್ಕರವನ್ನು ಗುರುವಾರ ಮುಖ್ಯಮಂತ್ರಿಗಳ ಸಭೆಯ ಅನಂತರದಲ್ಲಿ ಹಿಂದಕ್ಕೆ ಪಡೆದಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರು, ಗಣಿ ಸಚಿವರು ಹಾಗೂ ಜಿಲ್ಲೆಯ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿ, ಎಸ್ಪಿ, ಜಿಪಂ ಸಿಇಒ ಅವರೊಂದಿಗೆ ಮುಖ್ಯಮಂತ್ರಿ ಅವರು ವಿಧಾನಸೌಧದಲ್ಲಿ ಜಿಲ್ಲೆಯ ಮರಳು ಹಾಗೂ ಲಾರಿ ಮಾಲಕರ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಸವಿಸ್ತಾರವಾಗಿ ಚರ್ಚಿಸಿದ್ದಾರೆಅಂತಿಮವಾಗಿ ಲಾರಿ ಮಾಲಕರಿಗೆ ಸಕಾರಾತ್ಮಕವಾಗಿ ಸ್ಪಂದನೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಹಿಂಪಡೆಯಲಾಗಿದೆ.