PGK NEWS( ಪಶ್ಚಿಮಘಟ್ಟ ವಾಯ್ಸ್)ವಾಲ್ಮೀಕಿ ಒಂದು ಸಮುದಾಯಕ್ಕೆ ಸೀಮಿತರಾಗಿದ್ದವರಲ್ಲ-ಗಂಗೂಬಾಯಿ ಮಾನಕರ್‌!


PGK NEWS( ಪಶ್ಚಿಮಘಟ್ಟ ವಾಯ್ಸ್) 
ಕಾರವಾರ: ನಾವು ಹೇಗೆ ಮೌಲ್ಯಯುತ ಬದುಕು ಕಟ್ಟಿಕೊಳ್ಳಬೇಕು ಎಂಬುದನ್ನು ಮಹರ್ಷಿ ವಾಲ್ಮೀಕಿ ಅವರು ರಾಮಾಯಣ ಮಹಾಕಾವ್ಯದ ಮೂಲಕ ತಿಳಿಸಿಕೊಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆಯಿಂದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವಾಲ್ಮೀಕಿ ಅವರು ಒಂದು ಸಮುದಾಯಕ್ಕೆ ಸೀಮಿತವಾದವರಲ್ಲ. ಅವರು ಇಡೀ ಮನುಕುಲಕ್ಕೆ ಬೇಕಾದ ಮಹಾನ್ ಸಂತರಾಗಿದ್ದಾರೆ ಎಂದರು. ಪರಿಶಿಷ್ಟ ಸಮಾಜದವರು ಇಂದಿಗೂ ಶಿಕ್ಷಣದಿಂದ ದೂರ ಉಳಿದಿದ್ದಾರೆ. ಅವರನ್ನು ಅಕ್ಷರ ಲೋಕಕ್ಕೆ ಕರೆತಂದು ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸವಾಗಬೇಕಾಗಿದೆ ಎಂದರು.

ಅಸ್ನೋಟಿಯ ಶಿವಾಜಿ ವಿದ್ಯಾಮಂದಿರದ ಗಣೇಶ ಬಿಷ್ಠಣ್ಣನವರ್ ಅವರಿಗೆ ವಾಲ್ಮೀಕಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಜಿ.ಬಿ.ತಿಪ್ಪೆಸ್ವಾಮಿ ಉಪನ್ಯಾಸ ನೀಡಿದರು. ಎಸ್‌ಪಿ ಎನ್.ವಿಷ್ಣುವರ್ಧನ,ಎಡಿಸಿ ಪ್ರಕಾಶ ರಜಪೂತ, ಎಸಿ ಜಯಲಕ್ಷ್ಮೀ ರಾಯಕೋಡ ಜಿಪಂ ಉಪಕಾರ್ಯದರ್ಶಿ ನಾಗೇಶ ರಾಯ್ಕರ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಅಜ್ಜಪ್ಪ ಸೊಗಲದ, ಜಿಲ್ಲಾ ವಾಲ್ಮೀಕಿ ಸಮಾಜದ ಹಿತರಕ್ಷಣಾ ಸಂಘದ ಅಧ್ಯಕ್ಷ ನಾಗರಾಜ ತಳವಾರ, ಪರಿಶಿಷ್ಟ ವರ್ಗಗಳ ಕಲ್ಯಾಣಾಽಕಾರಿ ಉಮೇಶ ವೈ.ಕೆ., ಸಂಘಟನೆಯ ಮುಖಂಡರಾದ ದೀಪಕ ಕುಡಾಳಕರ, ಹನುಮಂತಪ್ಪ ತಳವಾರ, ಜೆ.ಡಿ ಮನೋಜೆ ಇದ್ದರು.
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಪರಿಶಿಷ್ಟ ಪಂಗಡದ ವಿದ್ಯಾರ್ಥಿನಿ ರಕ್ಷಿತಾ ರಾಮ ಗೊಂಡ ಅವರಿಗೆ 1 ಲಕ್ಷದ ಚೆಕ್ ವಿತರಿಸಲಾಯಿತು. ಕುಮಟಾ ಕುಜಳ್ಳಿ ಡಾ. ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ ವಿದ್ಯಾರ್ಥಿಗಳು ಪ್ರಾಥಿಸಿದರು, ಶಿಕ್ಷಕಿ ವಸಂತಲಕ್ಷ್ಮಿ ಸ್ವಾಗತಿಸಿ ನಿರೂಪಿಸರು, ನಿಲಯಪಾಲಕ ಶಂಕರ ಪೊಳ್ ವಂದಿಸಿದರು. ಸಭಾ ಕಾರ್ಯಕ್ರಮಕ್ಕೂ ಪೂರ್ವದಲ್ಲಿ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಿತು. 
ಮೆರವಣಿಗೆಯಲ್ಲಿ ರಾಷ್ಟ್ರೀಯ ದಲಿತ(R D S)
ಸಮಿತಿಯು  ಭಾಗವಹಿಸಿದ್ದವು.

www.westernghatsvoice.com

GOVERNMENT OF INDIA
OFFICE OF THE REGISTRAR OF NEWSPAPERS FOR INDIA
(MINISTRY OF INFORMATION & BROADCASTING




PGK

Post a Comment

Previous Post Next Post