ಬೆಂಗಳೂರು: ರಾಜ್ಯದಲ್ಲಿ ಹೊಸ ಮದ್ಯದಂಗಡಿ ತೆರೆಯಲು ಅವಕಾಶ ನೀಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇಂದು ಚಿತ್ರದುರ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಒಂದು ಸಾವಿರ ಮದ್ಯದಂಗಡಿಗಳನ್ನು ತೆರೆಯಲು ಚಿಂತನೆ ನಡೆಸುತ್ತಿರುವುದಾಗಿ ಅಬಕಾರಿ ಸಚಿವರು ಹೇಳಿರುವುದು ಸತ್ಯಕ್ಕೆ ದೂರವಾದ ಮಾತು, ಯಾವುದೇ ಹೊಸ ಮದ್ಯದಂಗಡಿ ತೆರೆಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಮದ್ಯದಂಗಡಿ ಹೊಸ ಪರವಾನಗಿ ನೀಡುವುದಕ್ಕೆ ಮಹಿಳೆಯರ ವಿರೋಧ ಇದೆ. ಹಣಕಾಸಿನ ಕೊರತೆ ಇದ್ದರೂ ಮದ್ಯದಂಗಡಿ ಹೊಸ ಲೈಸೆನ್ಸ್ ನೀಡಲು ನಾನು ಅನುಮತಿ ನೀಡುವುದಿಲ್ಲ ಎಂದು ವಾಗ್ದಾನ ಮಾಡಿದರು. ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಮದ್ಯದಂಗಡಿ ತೆರೆಯುವ ಪ್ರಸ್ತಾಪ ಸರ್ಕಾರದ ಮುಂದಿತ್ತು.