ಪಶ್ಚಿಮಘಟ್ಟ ವಾಯ್ಸ್) ಬೆಂಗಳೂರು: ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ದುಂದ ಗ್ರಾಮದಲ್ಲಿ ದಲಿತರ ಮೇಲೆ ಹಲ್ಲೆ ಮಾಡಿದ್ದ 10 ಆರೋಪಿಗಳಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ.
ಆರೋಪಿಗಳನ್ನು ಖುಲಾಸೆಗೊಳಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಪ್ರಕರಣದ ಸಂತ್ರಸ್ತೆಯಾಗಿರುವ ಲಕ್ಷ್ಮಮ್ಮ ಅವರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿ ನ್ಯಾಯಮೂರ್ತಿ ಕೆ.ಎಂ.ಖಾಜೀ ಅವರಿದ್ದ ನ್ಯಾಯಪೀಠ ಈ ಆದೇಶ ಮಾಡಿದೆ.
ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅಡಿಯಲ್ಲಿಎಲ್ಲಆರೋಪಿಗಳಿಗೆ ಒಂದು ವರ್ಷ ಜೈಲು ಶಿಕ್ಷೆ ಮತ್ತು 3 ಸಾವಿರ ರೂ. ದಂಡ ವಿಧಿಸಲಾಗಿದೆ. ಜತೆಗೆ, ಐಪಿಸಿ ಹಲವು ಸೆಕ್ಷನ್‌ಗಳಡಿ ಶಿಕ್ಷೆ ವಿಧಿಸಿ, ಒಟ್ಟು 85 ಸಾವಿರ ರೂ. ದಂಡ ಹಾಕಲಾಗಿದೆ. ಆದರೆ, ಪ್ರಕರಣದ 8ನೇ ಆರೋಪಿ ಶಿವಲಿಂಗಯ್ಯ ಎಂಬುವರು ಮೃತಪಟ್ಟಿರುವುದರಿಂದ ಅವರ ವಿರುದ್ಧದ ಪ್ರಕರಣ ಹಿಂಪಡೆಯಲಾಗಿದೆ.
ಪ್ರಕರಣದ ಹಿನ್ನೆಲೆ ಏನು?
ಸಿವಿಲ್ ಪ್ರಕರಣವೊಂದರಲ್ಲಿಆರೋಪಿಗಳಲ್ಲಿ ಒಬ್ಬರಾಗಿರುವ ಸುದೀಪ್ ಎಂಬುವರ ವಿರುದ್ಧ ಸಂತ್ರಸ್ತೆ ಲಕ್ಷ್ಮಮ್ಮ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದರಿಂದ ಸಿಟ್ಟಾಗಿದ್ದ ಸವರ್ಣೀಯರು 2008ರ ಆಗಸ್ಟ್ 14ರಂದು ದಲಿತರ ಕಾಲೋನಿಗೆ ನುಗ್ಗಿ ಜಾತಿ ನಿಂದನೆ ಮಾಡಿ ದೊಣ್ಣೆಗಳಿಂದ ಹಲ್ಲೆ ನಡೆಸಿದ್ದರು.ಈ ಬಗ್ಗೆ ದಾಖಲಾಗಿದ್ದ ದೂರಿನ ಸಂಬಂಧ ದಂಡಿನ ಶಿವರ ಪೊಲೀಸರು ತನಿಖೆ ನಡೆಸಿ 11 ಮಂದಿ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ತುಮಕೂರಿನ ವಿಚಾರಣಾ ನ್ಯಾಯಾಲಯ 2011ರ ಜೂನ್ 23 ರಂದು ಆರೋಪ ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ತಿಳಿಸಿ ಎಲ್ಲಆರೋಪಿಗಳನ್ನು ಖುಲಾಸೆಗೊಳಿಸಿ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಲಕ್ಷ್ಮಮ್ಮ ಹೈಕೋರ್ಟ್ ಮೆಟ್ಟಿಲೇರಿದ್ದರು.
ದಲಿತರ ದೌರ್ಜನ್ಯ ತಡೆಗೆ ಸಿಎಂಗೆ ಮನವಿ
ರಾಯಚೂರು ಜಿಲ್ಲೆಯಲ್ಲಿಇತ್ತೀಚೆಗೆ ದಲಿತರ ಮೇಲೆ ದೌರ್ಜನ್ಯ ಹಾಗೂ ಅತ್ಯಾಚಾರ ಹೆಚ್ಚಾಗುತ್ತಿದ್ದು, ಕೂಡಲೇ ಉನ್ನತಮಟ್ಟದ ತನಿಖೆ ನಡೆಸುವಂತೆ ಒತ್ತಾಯಿಸಿ ದಲಿತ ಸಂಘರ್ಷ ಮುಖಂಡರು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿ ಮೂಲಕ ಸಿಎಂಗೆ ಮನವಿ ಸಲ್ಲಿಸಿದರು. ಕೆಲ ದಿನಗಳ ಹಿಂದೆ ಮಾನ್ವಿ ತಾಲೂಕಿನ ಮದ್ಲಾಪುರು ಗ್ರಾಮದ ದಲಿತ ಮುಖಂಡ ಪ್ರಸಾದ ಕೊಲೆ ಮಾಡಲಾಗಿದೆ. ಅದರಂತೆ ಜಿಲ್ಲೆಯಲ್ಲಿಮಾದಿಗ ಮಾಲ ಜನಾಂಗದ ಮೇಲೆ ನಿರಂತರವಾಗಿ ಕೊಲೆ, ದೌರ್ಜನ್ಯ, ಅತ್ಯಾಚಾರಗಳು ನಡೆದಿದ್ದು, ಜಿಲ್ಲೆಯ ಉನ್ನತ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಇವುಗಳನ್ನು ತಡೆಯುವಲ್ಲಿವಿಫಲರಾಗಿದ್ದಾರೆ. ಆದರಿಂದ ಕೂಡಲೇ ಉನ್ನತಮಟ್ಟದ ತನಿಖೆ ಮಾಡಿ ಸೂಕ್ತ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.ದಲಿತ ಯುವಕರ ದಾರಿ ತಪ್ಪಿಸುವ ಕೆಲಸಎಸ್ಸಿ, ಎಸ್‌ಟಿ ಸಮುದಾಯದ ಮೇಲೆ ನಡೆಯುತ್ತಿರುವ ದೌರ್ಜನ್ಯ ನಿರಂತರವಾಗಿದ್ದು, ಅಕ್ರಮ ಮದ್ಯ ಮಾರಾಟ, ಅನಧಿಕೃತ ಕ್ಲಬ್, ಅಂದರ್‌ಬಾಹರ್, ಡ್ರಗ್ಸ್ ಮಾರಾಟ ಜಾಲದಿಂದ ದಲಿತ ಯುವಕರು ದಾರಿ ತಪ್ಪಿ ಜೀವನ ಹಾಳಾಗುವಂತಾಗಿದ್ದರೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸಭೆ ಕರೆದು ಸಮಸ್ಯೆ ಕೇಳುವಲ್ಲಿ ವಿಫಲರಾಗಿದ್ದಾರೆ ಎಂದು ಕೃಷ್ಣರಾಜನಗರ ತಾಲೂಕಿನ ದಲಿತ ಮುಖಂಡರು ದೂರಿದ್ದಾರೆ.