ಪಶ್ಚಿಮ ಘಟ್ಟ ವಾಯ್ಸ್) ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ಥಿತ್ವಕ್ಕೆ ಬಂದ ಬಳಿಕ ಜಾರಿಯಾದ ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆ ನೂತನ ಮೈಲಿಗಲ್ಲು ಸ್ಥಾಪಿಸಿದ್ದು, 2,397.80 ಕೋಟಿ ರೂ ಟಿಕೆಟ್ ಮೌಲ್ಯದ 100 ಕೋಟಿ ಉಚಿತ ಬಸ್ ಪ್ರಯಾಣ ದಾಖಲಾಗಿದೆ ಎಂದು ತಿಳಿದುಬಂದಿದೆ.
ಹೌದು.. ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ 'ಶಕ್ತಿ' ಯೋಜನೆಯು ಐಷಾರಾಮಿ ಅಲ್ಲದ ಸಾರ್ವಜನಿಕ ಸಾರಿಗೆ ಬಸ್‌ಗಳಲ್ಲಿ ರಾಜ್ಯದ ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆ ಹೊಸ ಮೈಲಿಗಲ್ಲು ನಿರ್ಮಿಸಿದ್ದು, 2,397.80 ಕೋಟಿ ರೂ ಟಿಕೆಟ್ ಮೌಲ್ಯದ 100 ಕೋಟಿ ಉಚಿತ ಬಸ್ ಪ್ರಯಾಣ ದಾಖಲಾಗಿದೆ.
ಈ ಬಗ್ಗೆ ಸಾರಿಗೆ ಇಲಾಖೆ ಮಾಹಿತಿ ನೀಡಿದ್ದು, ಯೋಜನೆಯು ಪ್ರಾರಂಭವಾದ ಜೂನ್ 11 ರಿಂದ ಇಲ್ಲಿಯವರೆಗೆ 100,47,56,184 ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ. ಯೋಜನೆಯು ಪ್ರಾರಂಭವಾದಾಗಿನಿಂದ ರಾಜ್ಯದ ಬೊಕ್ಕಸಕ್ಕೆ 2,397.80 ಕೋಟಿ ರೂಪಾಯಿ ವೆಚ್ಚವಾಗಿದೆ ಎಂದು ದತ್ತಾಂಶಗಳು ತೋರಿಸಿದೆ.
ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ಥಿತ್ವಕ್ಕೆ ಬಂದ ಬಳಿಕ ಜಾರಿಯಾದ ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆ ನೂತನ ಮೈಲಿಗಲ್ಲು ಸ್ಥಾಪಿಸಿದ್ದು, 2,397.80 ಕೋಟಿ ರೂ ಟಿಕೆಟ್ ಮೌಲ್ಯದ 100 ಕೋಟಿ ಉಚಿತ ಬಸ್ ಪ್ರಯಾಣ ದಾಖಲಾಗಿದೆ ಎಂದು ತಿಳಿದುಬಂದಿದೆ.
ಈ ಸಾಧನೆಯನ್ನು ಆಚರಿಸಲು ಸರ್ಕಾರವು ಶುಕ್ರವಾರ ವಿಧಾನಸೌಧದಲ್ಲಿ “ಶಕ್ತಿ ಖಾತರಿಗೆ ಶತಕೋಟಿ ಸಂಭ್ರಮ” ಎಂಬ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ. ಶಕ್ತಿ ಯೋಜನೆಯು ಕಾಂಗ್ರೆಸ್ ಸರ್ಕಾರ ನೀಡಿದ್ದ ಐದು ಭರವಸೆಗಳಲ್ಲಿ (ಚುನಾವಣಾ ಪೂರ್ವ ಭರವಸೆಗಳು) ಒಂದಾಗಿದೆ