PGK NEWS ಬೆಂಗಳೂರು: ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ರಜನೀಶ್ ಗೋಯೆಲ್ ಅವರನ್ನು ನೇಮಕ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.
ಹಾಲಿ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ನವೆಂಬರ್ 30ರಂದು ನಿವೃತ್ತಿಯಾಗುತ್ತಿದ್ದು, ಅವರಿಂದ ತೆರವಾಗುವ ಸ್ಥಾನಕ್ಕೆ 1986ನೇ ಬ್ಯಾಚ್ ಐಎಎಸ್ ಅಧಿಕಾರಿ ರಜನೀಶ್ ಗೋಯಲ್ ಅವರನ್ನು ನೇಮಕ ಮಾಡಲಾಗಿದೆ.
ರಜನೀಶ್ ಗೋಯೆಲ್ ಅವರು ಪ್ರಸ್ತುತ ಗೃಹ ಇಲಾಖೆಯ ಹೆಚ್ಚಿವರಿ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಡಿಸೆಂಬರ್ 1 ರಂದು ನೂತನ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.