( ಪಶ್ಚಿಮ ಘಟ್ಟ ವಾಯ್ಸ್) ಧಾರವಾಡ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ನೇತೃತ್ವದಲ್ಲಿ ಡಿ. 23ರಂದು ಬೆಳಗ್ಗೆ 9 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಜನತಾ ದರ್ಶನ ಏರ್ಪಡಿಸಲಾಗಿದೆ. ಸಾರ್ವಜನಿಕರು ಅಹವಾಲು, ಮನವಿ, ದೂರುಗಳನ್ನು ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೆ. 25 ಹಾಗೂ ನ. 6ರಂದು ಜರುಗಿದ ಜನತಾ ದರ್ಶನದಲ್ಲಿ ಒಟ್ಟು 662 ಅರ್ಜಿ ಸ್ವೀಕರಿಸಲಾಗಿತ್ತು. 626 ಅರ್ಜಿಗಳನ್ನು ಪರಿಹರಿಸಿದ್ದು, ಲೋಕೋಪಯೋಗಿ, ಕಂದಾಯ, ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ, ಶಿಕ್ಷಣ ಮತ್ತು ವಸತಿ ಇಲಾಖೆಗಳಿಗೆ ಸಂಬಂಧಿಸಿದ 36 ಅರ್ಜಿಗಳ ಇತ್ಯರ್ಥ ಬಾಕಿ ಇದೆ. ಸೂಕ್ತ ಕ್ರಮ ಜರುಗಿಸಲು ಸಂಬಂಧಪಟ್ಟ ಇಲಾಖೆಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ...
www.westernghatsvoice.com
GOVERNMENT OF INDIA
OFFICE OF THE REGISTRAR OF NEWSPAPERS FOR INDIA
(MINISTRY OF INFORMATION & BROADCASTING