PGK NEWS (ಪಶ್ಚಿಮ ಘಟ್ಟ ವಾಯ್ಸ್) ಅರಣ್ಯ ಇಲಾಖೆಗೆ ಕೆಕೆಆರ್ ಡಿಬಿ ಯಿಂದ ರೂ 30 ಕೋಟಿ ಅನುದಾನ ಬಿಡುಗಡೆ : ಪ್ರಿಯಾಂಕ್ ಖರ್ಗೆ!

 ಪಶ್ಚಿಮ ಘಟ್ಟ ವಾಯ್ಸ್

-  ಕಲಬುರಗಿ: ಕಲ್ಯಾಣ ಕರ್ನಾಟಕ‌ ಅಭಿವೃದ್ದಿ ನಿಗಮದ ವತಿಯಿಂದ ಅರಣ್ಯ ಇಲಾಖೆಗೆ ರೂ 30 ಕೋಟಿ ಅನುದಾನ‌ ಬಿಡುಗಡೆ ಮಾಡಲಾಗುತ್ತಿದ್ದು. ಅರಣ್ಯ ಹಾಗೂ ವನ್ಯಜೀವಿಗಳ ಸಂರಕ್ಷಣೆಗೆ ಈ ಅನುದಾನ ಬಳಸಿಕೊಳ್ಳಬೇಕು. ಇದಲ್ಲದೇ ಇನ್ನೂ ಬೇಕಾಗುವ ಅನುದಾನ ಬಿಡುಗಡೆ ಮಾಡಲು ಅರಣ್ಯ ಸಚಿವರಿಗೆ ಮನವಿ ಸಲ್ಲಿಸಿ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಹೇಳಿದರು.

ಪ್ರಕೃತಿಯ ಆಸ್ತಿಯನ್ನು ಕಾಪಾಡುವ ಅರಣ್ಯ ಸಿಬ್ಬಂದಿಗಳ ಕಾರ್ಯಕ್ಷಮತೆ ದೇಶದ ಗಡಿ ಕಾಯುವ ಸೈನಿಕರ ಸೇವೆಗೆ ಸಮಾನವಾದುದು ಎಂದು ಶ್ಲಾಘಿಸಿದ ಸಚಿವರು ನೈಸರ್ಗಿಕ ವಿಕೋಪ, ವನ್ಯ ಜೀವಿಗಳ ನಡುವಿನ ಸಂಘರ್ಷ, ಅರಣ್ಯ ಚೋರರ ವಿರುದ್ದದ ಕಾರ್ಯಾಚರಣೆ ಸೇರಿದಂತೆ ಹಲವಾರು ಅಡೆತಡೆಗಳ ನಡುವೆ ಕೆಲಸ ಮಾಡುವ ನಿಮ್ಮ ಸೇವೆಯನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕಿದೆ. ನಾವು ವನ್ಯಜೀವಿಗಳ ಬಗ್ಗೆ ತೋರಿಸುವ ಕಾಳಜಿ ಅರಣ್ಯ ಸಿಬ್ಬಂದಿಗಳಿಗೂ ತೋರಿಸಬೇಕಿದೆ ಎಂದು ಕಾಳಜಿ ವ್ಯಕ್ತಪಡಿಸಿದರು.

ಪ್ರಕೃತಿಯ ಆಸ್ತಿಯನ್ನು ಕಾಪಾಡುವ ಅರಣ್ಯ ಸಿಬ್ಬಂದಿಗಳ ಕಾರ್ಯಕ್ಷಮತೆ ದೇಶದ ಗಡಿ ಕಾಯುವ ಸೈನಿಕರ ಸೇವೆಗೆ ಸಮಾನವಾದುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಶ್ಲಾಘಿಸಿದ್ದಾರೆ. ಕಲ್ಯಾಣ ಕರ್ನಾಟಕ‌ ಅಭಿವೃದ್ದಿ ನಿಗಮದ ವತಿಯಿಂದ ಅರಣ್ಯ ಇಲಾಖೆಗೆ ರೂ 30 ಕೋಟಿ ಅನುದಾನ‌ ಬಿಡುಗಡೆ ಮಾಡಲಾಗುತ್ತಿದೆ ಎಂದು ತಿಳಿದ್ದಾರೆ
.

ಅರಣ್ಯ ಇಲಾಖೆಯ ವತಿಯಿಂದ ಏರ್ಪಡಿಸಲಾಗಿದ್ದ ರಾಜ್ಯ ಮಟ್ಟದ ಅರಣ್ಯ ಕ್ರೀಡಾಕೂಟದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಮಾನವ ಹಾಗೂ ವನ್ಯಜೀವಿ ಗಳ ಸಂಘರ್ಷ ನಿಲ್ಲಬೇಕು ಎನ್ನುವುದು ಎಲ್ಲರ ಕೂಗು. ಆದರೆ, ನಿಮಗೆ ಸರಿಯಾದ ಸೌಕರ್ಯ ಕೊಟ್ಟಾಗ ಮಾತ್ರ ಸಂಘರ್ಷ ತಡೆಯಲು ಅನುಕೂಲವಾಗುತ್ತದೆ‌. ಹಾಗಾಗಿ ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಯಿಂದ ಅಗತ್ಯ ಅನುದಾನ ಬಿಡುಗಡೆ ಮಾಡಲು ಬದ್ಧ ಎಂದರು.

ವೇದಿಕೆಯ ಮೇಲೆ ಎಂಎಲ್ಸಿ ತಿಪ್ಪಣ್ಣಪ್ಪ ಕಮಕನೂರು, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಪೊಲೀಸ್ ಕಮೀಷನರ್ ಆರ್ ಚೇತನ್, ಎಸ್ ಪಿ ಅಡ್ಡೂರು ಶ್ರೀನಿವಾಸಲು, ಸುದರ್ಶನ್, ಬ್ರಿಜೇಶ್ ಕುಮಾರ, ಬಿಶ್ವಜಿತ್ ಮಿಶ್ರಾ, ಶಾಶ್ವತಿ ಮಿಶ್ರ ಸೇರಿದಂತೆ ಹಲವರಿದ್ದರು.




PGK

Post a Comment

Previous Post Next Post