PGK NEWS( ಪಶ್ಚಿಮ ಘಟ್ಟ ವಾಯ್ಸ್)ಉಡುಪಿ: ಅಮೃತ್‌ ಭಾರತ್‌ ಯೋಜನೆಯಡಿ ಉಡುಪಿ ರೈಲು ನಿಲ್ದಾಣ ಅಭಿವೃದ್ಧಿ!

ಪಶ್ಚಿಮ ಘಟ್ಟ ವಾಯ್ಸ್ 

 ಉಡುಪಿ: ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ನಿಮಿತ್ತ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರ ಪ್ರಾರಂಭಿಸಿದ ಅಮೃತ್‌ ಭಾರತ್‌ ರೈಲು ನಿಲ್ದಾಣಗಳ ಅಭಿವೃದ್ಧಿ ಯೋಜನೆಯಡಿ ಉಡುಪಿಯ ನಿಲ್ದಾಣವನ್ನು ಆಯ್ಕೆ ಮಾಡಲಾಗಿದೆ.


ಅಮೃತ್‌ ಭಾರತ್‌ ಯೊಜನೆಯ ಮೂಲಕ ಉಡುಪಿಯ ರೈಲು ನಿಲ್ದಾಣವನ್ನು ಸಂಪೂರ್ಣ ಆಧುನೀಕರಿಸಿ ವಿಶ್ವದರ್ಜೆಯ ಪ್ರಯಾಣಿಕ ಸೌಲಭ್ಯಗಳನ್ನು ಕಲ್ಪಿಸಲು ಸಾಧ್ಯವಾಗಲಿದೆ. ತನ್ಮೂಲಕ ಶೈಕ್ಷಣಿಕ ಕೇಂದ್ರ ಮಣಿಪಾಲ, ಧಾರ್ಮಿಕ ಕೇಂದ್ರ

ಉಡುಪಿ ಹಾಗೂ ಬಂದರು ನಗರಿ ಮಲ್ಪೆಗೆ ಸಂಬಂಧಿಸಿದ ಪ್ರಯಾಣಿಕರಿಗೆ ಬಹಳಷ್ಟು ಅನುಕೂಲವಾಗಲಿದೆ. ಅಮೃತ್‌ ಭಾರತ್‌ ಕಾಮಗಾರಿಯನ್ನು ಶೀಘ್ರವಾಗಿ ಪ್ರಾರಂಭಿಸಲು ರೈಲ್ವೇ ಇಲಾಖೆಗೆ ಸೂಚಿಸಲಾಗುವುದು ಎಂದು ಶೋಭಾ ಕರಂದ್ಲಾಜೆ ಪ್ರಕಟನೆಯಲ್ಲಿ ತಿಳಿಸಿ¨ªಾರೆ. ಕೇಂದ್ರದ ಕ್ರಮವನ್ನು ಯಶ್‌ಪಾಲ್‌ ಸುವರ್ಣ ಸ್ವಾಗತಿಸಿದ್ದಾರೆ.


PGK

Post a Comment

Previous Post Next Post