ಕಾರ್ಕಳ ಪರಶುರಾಮ ಥೀಮ್‌ ಪಾರ್ಕ್‌ ಕಾಮಗಾರಿಯಲ್ಲಿ ಅಕ್ರಮ; ಸಿಐಡಿ ತನಿಖೆಗೆ ಸರ್ಕಾರ ಆದೇಶ!


ಪಶ್ಚಿಮಘಟ್ಟ ವಾಯ್ಸ್ಉಡುಪಿ
:
ಕಾರ್ಕಳದ ಎರ್ಲಪಾಡಿ ಗ್ರಾಮದ ಬೈಲೂರಿನಲ್ಲಿರುವ ಪರಶುರಾಮ ಥೀಮ್‌ ಪಾರ್ಕ್‌ ನಿರ್ಮಾಣ ಕಾಮಗಾರಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

 ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಅವರ ಶಿಫಾರಸಿನಂತೆ ಮುಖ್ಯಮಂತ್ರಿ ಈ ಆದೇಶ ಹೊರಡಿಸಿದ್ದಾರೆ.


L
ಪರಶುರಾಮ ಥೀಮ್ ಪಾರ್ಕ್ ಕಾಮಗಾರಿಯಲ್ಲಿ ನಡೆದ ಕಳಪೆ ಕಾಮಗಾರಿ ಹಾಗೂ ಅವ್ಯವಹಾರದ ಬಗ್ಗೆ, ಜೊತೆಗೆ ಧಾರ್ಮಿಕ ಭಾವನೆಗಳಿಗೆ ಅಪಪ್ರಚಾರವಾಗಿರುವ ಸಂಬಂಧ ಸಾರ್ವಜನಿಕರಿಂದ ಭಾರೀ ದೂರು ಕೇಳಿ ಬಂದಿತ್ತು.

ಈ ಹಿನ್ನೆಲೆಯಲ್ಲಿ ಥೀಮ್ ಪಾರ್ಕ್ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಆರ್. ಹೆಬ್ಬಾಳ್ಕರ್ ಅವರು ಫೆ.2ರಂದು ಮುಖ್ಯಮಂತ್ರಿಗೆ ಪತ್ರ ಬರೆದು ಮನವಿ ಮಾಡಿದ್ದರು. ಅದರಂತೆ ಇದೀಗ ಮುಖ್ಯಮಂತ್ರಿ ಸಿಐಡಿ ತನಿಖೆಗೆ ಆದೇಶ ಹೊರಡಿಸಿದ್ದಾರೆ.





PGK

Post a Comment

Previous Post Next Post