PGK NEWS(ಪಶ್ಚಿಮಘಟ್ಟ ವಾಯ್ಸ್). ಸಂವಿಧಾನ ಉಳಿಸಿ , ಫೆ.24-25ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಐಕ್ಯತಾ ಸಮಾವೇಶ: ಸಿಎಂ ಸಿದ್ದರಾಮಯ್ಯ!


ಪಶ್ಚಿಮಘಟ್ಟ ವಾಯ್ಸ್:
 ಬೆಂಗಳೂರು: ಈ ತಿಂಗಳ 24 ಮತ್ತು 25ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಐಕ್ಯತಾ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಭಾರತ ಸಂವಿಧಾನ ಹಾಗೂ ಐಕ್ಯತಾ ಸಮಾವೇಶ ಸಂಬಂಧಿಸಿ ವಿಧಾನ ಸೌಧದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತದ ಸಂವಿಧಾನ ಜಾರಿಯಾಗಿ 75 ವರ್ಷ ಆಗಿದೆ. ಜನವರಿ 26ರಿಂದ 31 ಜಿಲ್ಲೆಗಳಲ್ಲೂ ಸಂವಿಧಾನ ಜಾಥಾ ಕಾರ್ಯಕ್ರಮ ನಡೆಯುತ್ತಿದೆ. ಶಾಲಾ ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವ ಕೆಲಸ ಆಗುತ್ತಿದೆ ಎಂದರು.

ಭಾರತದ ಸಂವಿಧಾನ ಜಾರಿಗೆ ಬಂದು 75 ವರ್ಷಕ್ಕೆ ಕಾಲಿಟ್ಟಿದೆ. ಅಮೃತ ಉತ್ಸವದ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಬೇಕೆಂದು ತೀರ್ಮಾನ ಮಾಡಿದ್ದೇವೆ. 31 ಜಿಲ್ಲೆಗಳಲ್ಲಿ ಸಂವಿಧಾನ ಜಾಥಾ ಮಾಡುವ ಕಾರ್ಯಕ್ರಮವನ್ನು ಜನವರಿ 26 ರಿಂದ ಹಮ್ಮಿಕೊಳ್ಳಲಾಗಿದೆ. ಇದೇ ತಿಂಗಳ 25ರಂದು ಕೊನೆಯಾಗುತ್ತದೆ. ಫೆ.24, 25 ರಾಷ್ಟ್ರೀಯ ಐಕ್ಯತಾ ಸಮಾವೇಶ ಬೆಂಗಳೂರಿನಲ್ಲಿ ನಡೆಯಲಿದೆ ಎಂದರು.

ಪ್ರೊ, ಅಶುತೋಷ್, ಪ್ರಶಾಂತ್ ಭೂಷಣ್, ಮೇದಾ ಪಾಟ್ಕರ್ ಸೇರಿದಂತೆ ಅನೇಕ ಮೇದಾವಿಗಳು ಭಾಗವಹಿಸುತ್ತಿದ್ದಾರೆ. ಜನರ ಭಾವನೆಗಳು, ಸಂವಿಧಾನದ ಬಗ್ಗೆ ಬೆಳಕು ಚೆಲ್ಲುವ ಕೆಲಸ ಮಾಡ್ತಾರೆ. 24ರಂದು ರಾಷ್ಟ್ರೀಯ ಐಕ್ಯತಾ ಸಮಾವೇಶ ಉದ್ಘಾಟನೆಯಾಗಲಿದೆ. 25ರಂದು ದೊಡ್ಡ ರ್ಯಾಲಿ ಇರುತ್ತದೆ ಎಂದರು.


PGK

Post a Comment

Previous Post Next Post