PGK NEWS (ಪಶ್ಚಿಮಘಟ್ಟ ವಾಯ್ಸ್) ಶಿವಮೊಗ್ಗ/ಶಿಕಾರಿಪುರ: ದೇಶ ವಿಭಜನೆಯೇ ಕಾಂಗ್ರೆಸ್‌ನ ಸಂಸ್ಕೃತಿ. ಈಗಾಗಲೇ ದೇಶವನ್ನು ಮೂರು ವಿಭಾಗ ಮಾಡಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶ ಒಡೆಯುವ ವಿಚಾರದಲ್ಲಿ ರಾಜಕೀಯ ನಾಯಕರು ಹೇಳಿಕೆ ಕೊಡುತ್ತಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಹ ಡಿಕೆ ಸುರೇಶ ಹೇಳಿಕೆಯನ್ನು ಖಂಡಿಸಿದ್ದಾರೆ. ಕಾಂಗ್ರೆಸ್ ನಾಯಕರಲ್ಲಿಯೇ ಭಿನ್ನ ನಿಲುವು ಇರುವುದನ್ನು ಕಾಂಗ್ರೆಸ್ ನಾಯಕರು ಅರ್ಥ ಮಾಡಿಕೊಳ್ಳಬೇಕು ಎಂದರು.
ಎಲ್.ಕೆ. ಅಡ್ವಾಣಿ ಅವರಿಗೆ ಭಾರತ ರತ್ನ ಘೋಷಿಸಿದ್ದು, ರಾಜಕೀಯ ಮುತ್ಸದ್ಧಿತನಕ್ಕೆ ಸಿಕ್ಕ ಗೌರವ. ಸಿದ್ಧಾಂತಕ್ಕೆ ಬದ್ಧರಾಗಿ ಹೋರಾಡಿದ ನಾಯಕ ಅಡ್ವಾಣಿಯವರ ತಪಸ್ಸಿನಿಂದ ರಾಮಮಂದಿರ ನಿರ್ಮಾಣವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.
28 ಕ್ಷೇತ್ರದಲ್ಲೂ ಗೆಲ್ಲಲು ನಮ್ಮ ಸಂಘಟನೆ ಮುಂದಾಗಿದೆ. ದೇಶದಲ್ಲಿ 400 ಕ್ಷೇತ್ರ ಗೆಲ್ಲುವ ನಿರೀಕ್ಷೆ ಇದೆ. ದೇಶದಲ್ಲಿ ಬಿಜೆಪಿ ಪರ ವಾತಾವರಣ ಇದೆ. ಶಿವಮೊಗ್ಗ ಕ್ಷೇತ್ರದಲ್ಲಿ ಅಭಿವೃದ್ಧಿ ನೋಡಿ ನನ್ನನ್ನು ಕೈ ಹಿಡಿಯುತ್ತಾರೆ ಎನ್ನುವ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.