PGK NEWS (ಪಶ್ಚಿಮಘಟ್ಟ ವಾಯ್ಸ್) ಬಾರೇಹಳ್ಳ ಸೇತುವೆ ನಿರ್ಮಾಣ ಕಾಮಗಾರಿ ಪರಿಶೀಲಿಸಿದ ಸಚಿವ ಮಧುಬಂಗಾರಪ್ಪ!


PGK NEWS (ಪಶ್ಚಿಮಘಟ್ಟ ವಾಯ್ಸ್ 
 ಶಿವಮೊಗ್ಗ: ತಾಲೂಕಿನ ಪುರದಾಳು ಗ್ರಾಮದ ಬಾರೇಹಳ್ಳ ಸೇತುವೆ ನಿರ್ಮಾಣ ಕಾಮಗಾರಿಯ ಪರಿಶೀಲನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ನಡೆಸಿದರು.

ಶುಕ್ರವಾರ ಪುರದಾಳು ಗ್ರಾಮಕ್ಕೆ ಭೇಟಿ ನೀಡಿದ ಅವರು,ಬಾರೇಹಳ್ಳ ಸೇತುವೆ ನಿರ್ಮಾಣದ ಕೊನೆ ಹಂತದ  ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಾಮಗಾರಿ ಪೂರ್ಣಗೊಳಿಸಲು ಬೇಕಾದ ಅನುದಾವನ್ನು ಶೀಘ್ರದಲ್ಲೇ ಮಂಜೂರು ಮಾಡಲಾಗುವುದು ಎಂದರು.

ಇದಕ್ಕೂ ಮೊದಲು ಗ್ರಾಮದ ಶ್ರೀ ಉದ್ಭವ ಬಸವೇಶ್ವರ ದೇವಸ್ಥಾನಕ್ಕೆ ಭೇಟಿ ಪೂಜೆ ಸಲ್ಲಿಸಿದರು. ದೇವಸ್ಥಾನ ಸೇವಾ ಸಮಿತಿ ವತಿಯಿಂದ ಸಚಿವ ಮಧುಬಂಗಾರಪ್ಪ ಹಾಗೂ ಶಾಸಕಿ ಶಾರದಾ ಪೂರ್‍ಯನಾಯ್ಕ್ ಅವರಿಗೆ ಸನ್ಮಾನಿಸಲಾಯಿತು.


ಇದೇ ಸಂದರ್ಭದಲ್ಲಿ ದೇವಸ್ಥಾನ ಆಡಳಿತ ಮಂಡಳಿ ವತಿಯಿಂದ  ಕಲ್ಯಾಣ ಮಂಟಪ ಮಂಜೂರು ಮಾಡುವಂತೆ ಹಾಗೂ ಅಗತ್ಯ ಅನುದಾನವನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಲಾಯಿತು. ಇದಕ್ಕೆ ಸಕಾರತ್ಮಾಕವಾಗಿ ಪ್ರತಿಕ್ರಿಯಿಸಿದ ಸಚಿವರು, ತಂದೆ ಬಂಗಾರಪ್ಪನವರಿಗೆ ಪುರದಾಳು ಗ್ರಾಮದ ಬಗ್ಗೆ ವಿಶೇಷ ಅಭಿಮಾನವಿತ್ತು.ರಸ್ತೆ,ತುಂಗಾ ಏತನೀರಾವರಿ,ಗೋದಾಮು ನಿರ್ಮಾಣಕ್ಕೆ ಅನುದಾನ ನೀಡಿದ್ದಾರೆ.ನಾನು ಕೂಡ ಕಲ್ಯಾಣ ಮಂಟಪವನ್ನು ಮಂಜೂರು ಮಾಡಿ ಅಗತ್ಯ ಅನುದಾನ ಒದಗಿಸುತ್ತೇನೆ ಎಂದು ಹೇಳಿದರು.

ಪುರದಾಳು ಗ್ರಾಮ ಪಂಚಾಯಿತಿ ವತಿಯಿಂದ ಸಚಿವರಿಗೆ ಸನ್ಮಾನಿಸಲಾಯಿತು. ಕಡ್ಲೆಒಡ್ಡು  ಸರ್ಕಾರಿ ಕಿರಿಯ  ಪ್ರಾಥಮಿಕ ಶಾಲೆ ಹಾಗೂ ಪುರದಾಳು ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಶಾಸಕಿ ಶಾರದಾ ಪೂರ್‍ಯನಾಯ್ಕ್, ಕಾಂಗ್ರೆಸ್ ಮುಖಂಡರಾದ ಕಲಗೋಡು ರತ್ನಾಕರ್,ಜಿ.ಡಿ ಮಂಜುನಾಥ್,ಮಾಜಿ ಎಂಎಲ್‌ಸಿ ಆರ್.ಪ್ರಸನ್ನಕುಮಾರ್ ಸೇರಿದಂತೆ ಹಲವರಿದ್ದರು.



PGK

Post a Comment

Previous Post Next Post