PGK NEWS( ಪಶ್ಚಿಮಘಟ್ಟ ವಾಯ್ಸ್ ) ಲಕ್ನೋ: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಉತ್ತರ ಪ್ರದೇಶದ (Uttar Pradesh) ಆಗ್ರಾದಲ್ಲಿ ನಡೆಸಿದ ದಾಳಿಯಲ್ಲಿ ಬರೋಬ್ಬರಿ 40 ಕೋಟಿ ರೂ. ನಗದು ವಶಪಡಿಸಿಕೊಂಡಿದ್ದಾರೆ.
ತೆರಿಗೆ ವಂಚನೆ ಮತ್ತು ಅಕ್ರಮ ಆಸ್ತಿ ಹೊಂದಿದ್ದ ಆರೋಪದ ಮೇಲೆ ಐಟಿ ಅಧಿಕಾರಿಗಳು ಆಗ್ರಾದಲ್ಲಿ ಶೂ ವ್ಯಾಪಾರಿ ರಾಮನಾಥ್ ಡಂಗ್ ಅವರ ಮನೆ ಮೇಲೆ ದಾಳಿ (Tax Raid) ನಡೆಸಿದ್ದರು. ಈ ವೇಳೆ ದಾಖಲೆ ಇಲ್ಲದ 500 ರೂ. ನೋಟುಗಳ ಹಲವು ಬಂಡಲ್‌ಗಳನ್ನು ಹೊರತೆಗೆದಿದ್ದಾರೆ
ಸದ್ಯ 40 ಕೋಟಿ ರೂ. ಜಪ್ತಿ ಮಾಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಜಪ್ತಿ ಮಾಡಿದ ಹಣವನ್ನು ಇನ್ನೂ ಏಣಿಕೆ ಮಾಡಲಾಗುತ್ತಿದ್ದು, ಹಣದ ಮೊತ್ತ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ
ಇತ್ತೀಚೆಗೆ ದೇಶದಲ್ಲಿ ನಡೆದ 2ನೇ ಅತಿದೊಡ್ಡ ದಾಳಿಯೂ ಇದಾಗಿದೆ. ಇದೇ ತಿಂಗಳ ಮೇ 6 ರಂದು ಜಾರ್ಖಂಡ್‌ನಲ್ಲಿ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳ ತಂಡ ಸಚಿವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಮತ್ತು ಅವರ ಮನೆ ಕೆಲಸಗಾರ ಜಹಾಂಗೀರ್ ಆಲಂ ಮನೆಯಲ್ಲಿ ಸಿಕ್ಕ 35 ಕೋಟಿ ರೂ.ಗಳನ್ನು ವಶಪಡಿಸಿಕೊಂಡಿತ್ತು.