PGK NEWS( ಪಶ್ಚಿಮಘಟ್ಟ ವಾಯ್ಸ್) ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ!


PGK NEWS(ಪಶ್ಚಿಮಘಟ್ಟ ವಾಯ್ಸ್) 
ಶಿವಮೊಗ್ಗ  ಸರಕಾರಿ ನೌಕರರೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ವಿನೋಬ ನಗರದಲ್ಲಿ ಈ ಘಟನೆ ನಡೆದಿದ್ದು, ಸಮಾಜ ಕಲ್ಯಾಣ ಇಲಾಖೆಯ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಧೀಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದ ಚಂದ್ರಶೇಖರ್ ಅವರು ತಮ್ಮ ನಿವಾಸದಲ್ಲೇ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಂದ್ರಶೇಖರನ್ (50 ) ಆತ್ಮಹತ್ಯೆ ಮಾಡಿಕೊಂಡ ನೌಕರ, 6 ಪುಟಗಳ ಡೆತ್ ನೋಟ್ ಬರೆದಿಟ್ಟಿರುವ ಚಂದ್ರಶೇಖರ್, ಡೆತ್ ನೋಟ್‌ನಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಇಲಾಖಾ ಅಧಿಕಾರಿಗಳು ಹಣ ವರ್ಗಾವಣೆ ಮಾಡಲು ಒತ್ತಡ ಹಾಕಿರುವ ಕುರಿತು ಉಲ್ಲೇಖಿಸಲಾಗಿದೆ. ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

PGK

Post a Comment

Previous Post Next Post