PGK NEWS(ಪಶ್ಚಿಮಘಟ್ಟ ವಾಯ್ಸ್) ಉಡುಪಿ: ದಾಖಲೆ ನೀಡಲು ಲಂಚ | ಉಪ್ಪೂರು ಪಿಡಿಒ, ಬಿಲ್‌ ಕಲೆಕ್ಟರ್ ಲೋಕಾಯುಕ್ತ ಬಲೆಗೆ

 PGK NEWS(ಪಶ್ಚಿಮಘಟ್ಟ ವಾಯ್ಸ್) 


 
ಉಡುಪಿ: ಭೂಮಿಯ 9 ಮತ್ತು 11 ದಾಖಲೆ ನೀಡಲು ಲಂಚ ಸ್ವೀಕರಿಸುತ್ತಿದ್ದ ಉಪ್ಪೂರು ಪಿಡಿಒ ಇನಾಯತ್ ಉಲ್ಲಾ ಬೇಗ್ ಹಾಗೂ ಬಿಲ್ ಕಲೆಕ್ಟರ್ ಸಂಜಯ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ರವಿ ಡಿಲಿಮಾ ಅವರಿಂದ 13,300 ರೂ. ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಲೋಕಾಯುಕ್ತ ಎಸ್‌ಪಿ ನಟರಾಜ್ ಅವರ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಕೆ.ಸಿ. ಪ್ರಕಾಶ್‌ ಅವರ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಮಂಜುನಾಥ್, ರಫೀಕ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಇಬ್ಬರಿಗೂ ಜೂನ್ 12ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.


PGK

Post a Comment

Previous Post Next Post