PGK NEWS:-ಮಂಗಳೂರು: ಭಾರೀ ಮಳೆಗೆ ತಡೆಗೋಡೆಯೊಂದು ಕುಸಿದು ಬಿದ್ದ ಘಟನೆ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಸಬಾ ಗ್ರಾಮದ ಹೊಸ್ಮಾರ್ ಎಂಬಲ್ಲಿ ನಡೆದಿದೆ.
ತಡೆಗೋಡೆ ಕುಸಿತದಿಂದ ಅಶೋಕ್ ಪೂಜಾರಿ ಮತ್ತು ಗಣೇಶ್ ಪೂಜಾರಿ ಎಂಬವರ ಮನೆ ಅಪಾಯದಲ್ಲಿದೆ ಎಂದು ತಿಳಿದು ಬಂದಿದೆ.
ಮನೆ ಮಂದಿಯನ್ನು ಸಂಬಂಧಿಕರ ಮನೆಗೆ ಸ್ಥಳಾಂತರ ಮಾಡಲಾಗಿದ್ದು, ಮಣ್ಣು ಮತ್ತೆ ಕುಸಿಯದಂತೆ ತುರ್ತು ತಡೆಗೋಡೆ ನಿರ್ಮಾಣಕ್ಕೆ ಸ್ಥಳೀಯಾಡಳಿತ ಸೂಚನೆ ನೀಡಿದೆ.