ಪಶ್ಚಿಮಘಟ್ಟ ವಾಯ್ಸ್ ನವದೆಹಲಿ: ಕುವೈತ್‌ನ ಕಾರ್ಮಿಕರ ಶಿಬಿರದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ 49 ಜನ ಸಜೀವ ದಹನವಾಗಿದ್ದು, ಇವರಲ್ಲಿ ಬಹುತೇಕರು ಭಾರತೀಯರಾಗಿದ್ದಾರೆ ಮತ್ತು 50 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ಮತ್ತು ಗಲ್ಫ್ ಮಾಧ್ಯಮ ವರದಿ ಮಾಡಿದೆ.
ಕುವೈತ್ ಅಗ್ನಿ ದುರಂತದಲ್ಲಿ ಕನಿಷ್ಠ 40 ಮಂದಿ ಭಾರತೀಯರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ರಾತ್ರಿ ತುರ್ತು ಸಭೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಸಾಧ್ಯವಿರುವ ಎಲ್ಲ ನೆರವು ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ಅವರು ಪರಿಹಾರ ಕ್ರಮಗಳ ಮೇಲ್ವಿಚಾರಣೆ ಮಾಡಲು ಮತ್ತು ಮೃತ ದೇಹಗಳನ್ನು ತ್ವರಿತವಾಗಿ ಸ್ವದೇಶಕ್ಕೆ ತರಲು ಕುವೈತ್‌ಗೆ ಧಾವಿಸುತ್ತಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.