PGK NEWS (ಪಶ್ಚಿಮಘಟ್ಟ ವಾಯ್ಸ್) ಮಂಗಳೂರು/ಉಡುಪಿ/ಶಿವಮೊಗ್ಗ: ದಕ್ಷಿಣ ಕನ್ನಡದಲ್ಲಿ ಜಿಲ್ಲಾಧಿಕಾರಿಯಾಗಿ ಗಮನಸೆಳೆದಿದ್ದ ಸಸಿಕಾಂತ್ ಸೆಂಥಿಲ್ ಈಗ ಸಂಸದರಾಗುತ್ತಿದ್ದಾರೆ. ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಿಇಓ ಆಗಿದ್ದ ಸೆಂತಿಲ್ ಮಲೆನಾಡು, ಕರಾವಳಿಯಲ್ಲಿ ಚಿರಪರಿಚಿತರು. ತಮಿಳುನಾಡಿನ ತಿರುವೆಲ್ಲೂರು ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಿಂದ ಭರ್ಜರಿ ಗೆಲುವು ಸಾಧಿಸಿದೆ. ಆದರೆ, ಈ ಹಿಂದೆ ದಕ್ಷಿಣ ಕನ್ನಡದಲ್ಲಿ ಸುಮಾರು ಎರಡು ವರ್ಷಗಳಿಗೂ ಹೆಚ್ಚು ಅವಧಿಗೆ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿ ಬಳಿಕ ಸ್ವಯಂ ನಿವೃತ್ತಿ ಪಡೆದುಕೊಂಡು ಕಾಂಗ್ರೆಸ್‌ಗೆ ಸೇರಿದ್ದ ಸಸಿಕಾಂತ್ ಸೆಂಥಿಲ್ ಅವರು ಇದೀಗ ಲೋಕಸಭೆ ಪ್ರವೇಶಿಸುತ್ತಿದ್ದಾರೆ. ಸೆಂಥಿಲ್ ಅವರು ತಮಿಳುನಾಡಿನ ತಿರುವಲ್ಲೂರು ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದರು. ಅವರು ಇದೀಗ ಡಿಎಂಕೆಯ ನಲ್ಲತಂಬಿ ಕೆ. ವಿರುದ್ಧ 2 ಲಕ್ಷಕ್ಕೂ ಅಧಿಕ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಸೆಂಥಿಲ್ ಅವರು ದಕ್ಷಿಣ ಕನ್ನಡದಲ್ಲಿ ಜಿಲ್ಲಾಧಿಕಾರಿಯಾಗಿದ್ದ ವೇಳೆ, ಜನರ ಪಾಲಿಗೆ ಅತ್ಯುತ್ತಮ ಅಧಿಕಾರಿಯಾಗಿ ಗಮನಸೆಳೆದಿದ್ದರು. ಎಲ್ಲರೊಂದಿಗೆ ಬೆರೆತು ಆಡಳಿತ ವ್ಯವಸ್ಥೆಯಲ್ಲಿ ಬಹಳ ದಕ್ಷ ಅಧಿಕಾರಿಯಾಗಿ ಕೆಲಸ ಮಾಡಿದ್ದರು. ಇದೀಗ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದ ಅವರು ಈಗ ಸಂಸದರಾಗಿ ಲೋಕಸಭೆ ಮೂಲಕ ಮತ್ತೆ ಜನಸೇವೆ ಮಾಡಲಿದ್ದಾರೆ ಎನ್ನುವುದು ಗಮನಾರ್ಹ. ಕರ್ನಾಟಕ ಕಾಂಗ್ರೆಸ್ ವಾರ್ ರೂಮ್ ಹೆಡ್ ಆಗಿ ಸೇವೆ ಸಲ್ಲಿಸಿದ್ದರು.
ಸೋತ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ!
ತಮಿಳು ನಾಡು ಬಿಜೆಪಿ ರಾಜ್ಯಾಧ್ಯಕರಾಗಿ ಕೊಯಂಬತ್ತೂರಿನಿಂದ ಲೋಕಸಭೆಗೆ ಸ್ಪರ್ಧಿಸಿದ್ದ ನಿವೃತ್ತ ಐಪಿಎಸ್ ಅಧಿಕಾರಿಯಾಗಿರುವ ಅಣ್ಣಾಮಲ್ಲೈ ಅವರು ಸೋತಿದ್ದಾರೆ. ತಮಿಳುನಾಡಿನ ಬಿಜೆಪಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಉಡುಪಿ ಮತ್ತು ಚಿಕ್ಕಮಗಳೂರು ಎಸ್ಪಿಯಾಗಿ ಸೇವೆ ಸಲ್ಲಿಸಿದ್ದ ಅಣ್ಣಾಮಲೈ ಗೆಲ್ಲುತ್ತಾರೆ ಎಂದು ಅಂದಾಜಿಸಲಾಗಿತ್ತು. ಕಾಂಗ್ರೆಸ್ ಗಣಪತಿ ಪಿ ರಾಜ್ ಕುಮಾರ್ ಡಿಎಂಕೆ ಪಕ್ಷದ ಅಭ್ಯರ್ಥಿ ವಿರುದ್ಧ ಸೋಲು ಕಂಡಿದ್ದಾರೆ.