PGK NEWS ಕರಾವಳಿ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ!

 


PGK NEWS ಪಶ್ಚಿಮಘಟ್ಟ ವಾಯ್ಸ್/ಉಡುಪಿ/ಕಾರವಾರ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಅದರಲ್ಲೂ ಕರಾವಳಿ ಭಾಗವಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ.

ಜುಲೈ 12ರವರೆಗೆ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಜ್ಞ ಸಿ.ಎಸ್​​​.ಪಾಟೀಲ್ ಮಾಹಿತಿ ನೀಡಿದ್ದಾರೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದ್ದು ಈ ಮೂರು ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್​ ಘೋಷಣೆ ಮಾಡಲಾಗಿದೆ. ಜು.10 ಮತ್ತು 11ರಂದು ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಇರಲಿದೆ ಎಂದು ತಿಳಿಸಿದರು. ಇಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಜು.12ರವರೆಗೆ ಯೆಲ್ಲೋ ಅಲರ್ಟ್ ಇರಲಿದ್ದು ಬೆಳಗಾವಿ, ಬೀದರ್​, ಕಲಬುರಗಿ, ಕೊಡಗು, ಹಾಸನ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ರಾಜ್ಯದ ಮಳೆ ಕುರಿತು ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ.

ಇಂದು ಉತ್ತರ ಒಳನಾಡಿನ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೆೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರ ಜಿಲ್ಲೆಗಳಲ್ಲಿ ಹಲವೆಡೆ ಗಾಳಿಯ ವೆೇಗ (30-40 kmph) ಸಹಿತ ಸಾಧಾರಣ ಮಳೆ/ಗುಡುಗು ಸಹಿತ ಗಾಳಿ ಬೀಸುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಕರ್ನಾಟಕದ ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.


PGK

Post a Comment

Previous Post Next Post