ಪಶ್ಚಿಮಘಟ್ಟ ವಾಯ್s ಡೈಲಿ ನ್ಯೂಸ್:
ಚಿಕ್ಕಮಗಳೂರು: ಚಾರಣಕ್ಕೆ ತೆರಳುವ ಪ್ರವಾಸಿಗರಿಗೆ ನಕಲಿ ಟಿಕೆಟ್ ಮಾರಾಟ ಮಾಡುತ್ತಿದ್ದ DRFOರನ್ನು ಸಸ್ಪೆಂಡ್ ಮಾಡಲಾಗಿದೆ.ನಕಲಿ ಟಿಕೆಟ್ ಸೃಷ್ಟಿಸಿ ಸಾವಿರಾರು ಪ್ರವಾಸಿಗರಿಗೆ ಮಾರಾಟ ಮಾಡಲಾಗುತ್ತಿತ್ತು. ಬಂಡಾಜೆ ಫಾಲ್ಸ್, ಬಲ್ಲಾಳರಾಯನ ದುರ್ಗ ಚಾರಣಕ್ಕೆ ಆನ್ ಲೈನ್ ಟಿಕೆಟ್ ನಕಲು ಮಾಡಿ ಪ್ರವಾಸಿಗರಿಗೆ ಮಾರಾಟ ಮಾಡುತ್ತಿದ್ದ ಹಿನ್ನೆಲೆ ಅರಣ್ಯ ಇಲಾಖೆಯ ಉಪ ವಲಯ ಅರಣ್ಯಧಿಕಾರಿ ಚಂದನ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ.
ಚಂದನ್ ಅವರು ಈಗಾಗಲೇ ಸಾವಿರಾರು ಟ್ರೆಕ್ಕಿಂಗ್ ಟಿಕೆಟ್ ನಕಲು ಮಾಡಿ ಮಾರಾಟ ಮಾಡಿದ್ದಾರೆ ಎನ್ನಲಾಗುತ್ತಿದೆ. ಅನ್ ಲೈನ್ ನಲ್ಲಿ ಟಿಕೆಟ್ ಬುಕ್ ಮಾಡಿದವರಿಗೆ ಚಾರಣಕ್ಕೆ ಅವಕಾಶ ನೀಡದೆ, ತಾನು ನೀಡಿದ ನಕಲಿ ಟಿಕೆಟ್ ಪಡೆದ ಪ್ರವಾಸಿಗರಿಗೆ ಮಾತ್ರ ಚಾರಣಕ್ಕೆ ಅವಕಾಶ ನೀಡುತ್ತಿದ್ದರು ಎಂದು ತಿಳಿದು ಬಂದಿದೆ. ಪ್ರವಾಸೋದ್ಯಮ ಇಲಾಖೆ ಚಾರಣಕ್ಕೆ ಅನ್ಲೈನ್ ಟಿಕೆಟ್ ಬುಕಿಂಗ್ ಆರಂಭಿಸಿದೆ.