ಪಶ್ಚಿಮಘಟ್ಟ ವಾಯ್s ಡೈಲಿ ನ್ಯೂಸ್:
ಉತ್ತರ ಕನ್ನಡ /ಶಿವಮೊಗ್ಗ/ಚಿಕ್ಕಮಗಳೂರು: ರಾಜ್ಯದಲ್ಲಿ ಅಕ್ರಮವಾಗಿ ಅರಣ್ಯ ಒತ್ತುವರಿ ಮಾಡಿದವರಿಗೆ ಇದೀಗ ಸಂಕಷ್ಟ ಎದುರಾಗಿದೆ. ಒತ್ತುವರಿ ಕಾರಣದಿಂದ ಪ್ರಕೃತಿ ವಿಕೋಪ ಎಂದ ಸರ್ಕಾರ ಇದೀಗ ಅಕ್ರಮ ಒತ್ತುವರಿ ವಿರುದ್ಧ ಸಮರ ಸಾರಿದೆ.ಚಿಕ್ಕಮಗಳೂರು ಜಿಲ್ಲೆ ಮತ್ತು ಶಿವಮೊಗ್ಗ.ಕಾರವಾರ ಜಿಲ್ಲೆಯಲ್ಲಿ ಈಗಾಗಲೇ ನೂರಾರು ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು ಮಾಡಲಾಗಿದೆ. ಇನ್ನು ಅನೇಕರಿಗೆ ನೋಟೀಸ್ ನೀಡಲಾಗಿದೆ.
ಪಶ್ಚಿಮ ಘಟ್ಟದ ಎಲ್ಲ ಗಿರಿ ಪ್ರದೇಶಗಳಲ್ಲಿ ಅನಧಿಕೃತವಾಗಿ ಮತ್ತು ಅರಣ್ಯ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸಲಾಗಿರುವ ಬಡಾವಣೆ, ತೋಟ, ಹೋಂ ಸ್ಟೇ ಮತ್ತು ರೆಸಾರ್ಟ್ ಗಳ ವಿರುದ್ಧ ಕ್ರಮ ಕೈಗೊಳ್ಳಲು, ಮತ್ತು ಅರಣ್ಯ ಒತ್ತುವರಿಯನ್ನು ತಕ್ಷಣದಿಂದಲೇ ತೆರವುಗೊಳಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ.
ತೀರ್ಥಹಳ್ಳಿ, ಕೊಪ್ಪ, ಶೃಂಗೇರಿ, ಚಿಕ್ಕಮಗಳೂರು,.ಉತ್ತರ ಕನ್ನಡ ಜಿಲ್ಲೆ ಸಿರ್ಸಿ, ಯಲ್ಲಾಪುರ, ಸಿದ್ದಾಪುರ. ಭಾಗದಲ್ಲಿ ಕಾರ್ಯಾಚರಣೆ ಶುರುವಾಗಿದೆ.
ಅರಣ್ಯ ಒತ್ತುವರಿ ಕಾರ್ಯಾಚರಣೆಗೆ -ಕರ್ನಾಟಕ ಸರ್ಕಾರಿ ಭೂಮಿ ಉಳಿಸಿ ಹೋರಾಟ ಸಮಿತಿ. ಬೆಂಬಲ ವ್ಯಕ್ತಪಡಿಸಿದೆ.