ಬೆಂಗಳೂರು: ಸರ್ಕಾರದ ಭ್ರಷ್ಟಾಚಾರ ಬಗ್ಗೆ ವಿರುದ್ಧ ಮಾತನಾಡುತ್ತಿರುವುದಕ್ಕೆ ಸಿದ್ದರಾಮಯ್ಯ ಸರ್ಕಾರ ನನ್ನನ್ನು ಟಾರ್ಗೆಟ್ ಮಾಡಿದೆ. ಒಂದು ದಿನವಾದರೂ ಜೈಲಿಗೆ ಹಾಕಿಸಬೇಕು ಅಂತ ನನ್ನ ಸಹಿ ತಿರುಚಿರುವ ದಾಖಲಾತಿಗಳನ್ನ ಇಟ್ಟುಕೊಂಡು ಪ್ರಯತ್ನ ಮಾಡುತ್ತಿದ್ದಾರೆ. ಇದರ ವಿರುದ್ಧ ಕಾನೂನು ಹೋರಾಟ ಮಾಡುತ್ತೇನೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ರಾಜ್ಯ ಸರ್ಕಾರಕ್ಕೆ ಸವಾಲ್ ಹಾಕಿದ್ದಾರೆ.
ಸಾಯಿ ವೆಂಕಟೇಶ್ವರ ಮೈನಿಂಗ್ ಪ್ರಕರಣದಲ್ಲಿ ತನ್ನ ವಿರುದ್ಧ ರಾಜ್ಯಪಾಲರ ಬಳಿ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದ್ದಕ್ಕೆ ಹೆಚ್ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿ ಕಿಡಿಕಾರಿದ್ದಾರೆ.
ಸಿದ್ದರಾಮಯ್ಯ ಸರ್ಕಾರ ನನ್ನ ವಿರುದ್ದ ಷಡ್ಯಂತ್ರ ಮಾಡುತ್ತಿ
ದೆ. ನನ್ನನ್ನ ಒಂದು ದಿನವಾದರೂ ಜೈಲಿಗೆ ಹಾಕಲು ಪ್ಲ್ಯಾನ್ ನಡೆಯುತ್ತಿದೆ. ಸಾಯಿ ವೆಂಕಟೇಶ್ವರ ಮೈನಿಂಗ್ ಕೇಸ್ ನಲ್ಲಿ ನನ್ನ ಸಹಿಯನ್ನೇ ನಕಲು ಮಾಡಿದ್ದಾರೆ. ನಾನು ಸಹಿ ಮಾಡಿದೇ ಹೋದರೂ ನನ್ನ ಸಹಿ ಅಂತ ಕೇಸ್ ನಡೆಯುತ್ತಿದೆ. ಅಧಿಕಾರಿಗಳು ಮಾಡಿರುವ ತಪ್ಪಿಗೆ ನನ್ನ ಮೇಲೆ ಕ್ರಮಕ್ಕೆ ಮುಂದಾಗಿದ್ದು, ಇದು ರಾಜ್ಯ ಸರ್ಕಾರದ ಸೇಡಿನ ರಾಜಕೀಯ ಎಂದು ವಾಗ್ದಾಳಿ ನಡೆಸಿದರು.