ಪಶ್ಚಿಮಘಟ್ಟ ವಾಯ್s ಡೈಲಿ ನ್ಯೂಸ್:-200 ಆನೆಗಳೂ ಸೇರಿದಂತೆ ಕಾಡು ಪ್ರಾಣಿಗಳನ್ನು ಕೊಲ್ಲಲ್ಲು ಅನುಮತಿ ನೀಡಿದ ಜಿಂಬಾಬ್ವೆ ಸರ್ಕಾರ

 


ಪಶ್ಚಿಮಘಟ್ಟ ವಾಯ್s ಡೈಲಿ ನ್ಯೂಸ್:-  ಹರಾರೆ,ಸೆ.

ಭೀಕರ ಬರಗಾಲಕ್ಕೆ ತುತ್ತಾಗಿರುವ ಕೂಡ ಅಲ್ಲಿನ ಕಾಡು ಪ್ರಾಣಿಗಳನ್ನು ಕೊಲ್ಲಲ್ಲು ಸರ್ಕಾರ ಅನುಮತಿ ನೀಡಿದೆ. ನಮೀಬಿಯಾ ಸರ್ಕಾರದ ಬಳಿಕ ಆಫ್ರೀಕಾ ಖಂಡದ ಮತ್ತೊಂದು ದೇಶ ಇಂತಹ ನಿರ್ಧಾರಕ್ಕೆ ಬಂದಿದೆ. 

ನಾವು ಸುಮಾರು 200 ಆನೆಗಳನ್ನು ಕೊಲ್ಲುತ್ತೇವೆ. ಅವುಗಳ ಮಾಂಸವನ್ನು ಅವಶ್ಯವಿರುವ ಸಮುದಾಯಗಳ ಜನರಿಗೆ ಹಂಚುತ್ತೇವೆ ಎಂದು ಜಿಂಬಾಬ್ವೆ ತಿಳಿಸಿದೆ. ಇದೇ ರೀತಿ ನಮೀಬಿಯಾ ದೇಶ ಕೂಡಾ ವಾರದ ಹಿಂದೆ ಇಂಥದ್ದೇ ಕ್ರಮಕ್ಕೆ ಮುಂದಾಗಿತ್ತು. 700ಕ್ಕೂ ಹೆಚ್ಚು ಕಾಡುಪ್ರಾಣಿಗಳನ್ನು ಕೊಲ್ಲಲು ನಿರ್ಧರಿಸಿತ್ತು. ಈ ಪೈಕಿ 83 ಆನೆಗಳನ್ನು ಕೊಲ್ಲುವ ಕಾರ್ಯ ಅಲ್ಲಿ ನಡೆಯುತ್ತಿದೆ.

ಜಿಂಬಾಬ್ವೆ ರಾಷ್ಟ್ರೀಯ ಉದ್ಯಾನವನ ಮತ್ತು ವನ್ಯಜೀವಿ ನಿರ್ವಹಣಾ ಪ್ರಾಧಿಕಾರದ ವಕ್ತಾರ ತಿನಶೆ ಫರವೊ ಪ್ರತಿಕ್ರಿಯಿಸಿ, ನಾವು ಅವಶ್ಯವಿರುವ ಸಮುದಾಯದ ಜನರಿಗೆ ಪ್ರಾಣಿಗಳನ್ನು ಬೇಟೆಯಾಡಲು ಅನುಮತಿ ನೀಡುತ್ತೇವೆ. ಅದೇ ರೀತಿ ಹಂಚಿಕೆಯಾದ 200 ಪ್ರಾಣಿಗಳನ್ನು ನಮ ಪ್ರಾಧಿಕಾರ ಕೊಲ್ಲಲಿದೆ. ಅನುಮತಿ ಪತ್ರ ವಿತರಿಸಿದ ನಂತರ ಪ್ರಾಣಿಗಳನ್ನು ಹತ್ಯೆ ಮಾಡುವ ಕೆಲಸ ಪ್ರಾರಂಭಿಸುತ್ತೇವೆ ಎಂದು ಹೇಳಿದರು.

ದಿನೇ ದಿನೇ ತಾಪಮಾನ ಏರಿಕೆಯಾಗುತ್ತಿರುವ ಹಾಗು ಮಾನವ ಮತ್ತು ವನ್ಯಜೀವಿಗಳ ನಡುವೆ ಆಹಾರ ಮತ್ತು ನೀರಿಗೆ ಸಂಘರ್ಷ ನಡೆಯುತ್ತಿರುವ ದೇಶದ ಪಶ್ಚಿಮ ಶುಷ್ಕ ಪ್ರದೇಶವಾದ ಹ್ವಾಂಗೆ ರಾಷ್ಟ್ರೀಯ ಉದ್ಯಾನವನ ಮುಂತಾದೆಡೆ ಆನೆಗಳ ಹತ್ಯೆ ಕೆಲಸ ನಡೆಯುತ್ತದೆ.

1.63 ಕೋಟಿಯಷ್ಟು ಜನಸಂಖ್ಯೆ ಹೊಂದಿರುವ ಜಿಂಬಾಬ್ವೆ ದೇಶದಲ್ಲಿ ಅರ್ಧದಷ್ಟು ಜನ ಹಸಿವಿನಿಂದ ಬಳಲುತ್ತಿದ್ದಾರೆ. ಅವರ ಹಸಿವನ್ನು ನೀಗಿಸುವ ಉದ್ದೇಶದಿಂದ 200 ಆನೆಗಳನ್ನು ಕೊಲ್ಲಲು ನಿರ್ಧರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ.

ಜೊತೆಗೆ 55,000 ಆನೆಗಳಿಗೆ ಆಶ್ರಯ ಒದಗಿಸಬಲ್ಲ ನಮ ದೇಶದಲ್ಲಿ ಪಸ್ತುತ 84,000 ಆನೆಗಳಿದ್ದು, ಆನೆಗಳ ಸಂಖ್ಯೆಯಲ್ಲಿ ಜಿಂಬಾಬ್ವೆ ವಿಶ್ವದಲ್ಲೇ 2ನೇ ಸ್ಥಾನದಲ್ಲಿದೆ ಎನ್ನುವ ಮೂಲಕ ಆನೆ ಹತ್ಯೆ ಸಮರ್ಥಿಸಿಕೊಂಡಿದ್ದಾರೆ. ಈ ನಡುವೆ ಆನೆಗಳನ್ನು ಕೊಂದು ಅವುಗಳ ಮಾಂಸವನ್ನು ಒಣಗಿಸಿ ಪ್ರೋಟೀನ್‌ ಅವಶ್ಯಕತೆ ಇರುವವರಿಗೆ ಕೊಡುವ ಬಗ್ಗೆ ಚರ್ಚಿಸಲಾಗುತ್ತಿದೆ ಎಂದು ಜಿಂಬಾಬ್ವೆ ಪರಿಸರ ಸಚಿವ ಸಿತೆಂಬಿಸೋ ನಿಯೋನಿ ಹೇಳಿದ್ದಾರೆ ಎಂದೂ ಸಹ ವರದಿಯಾಗಿತ್ತು.

ಪ್ರತಿ 5 ವರ್ಷಗಳಿಗೊಮೆ ಆನೆ ಗಣತಿಯನ್ನು ನಡೆಸಲಾಗುತ್ತದೆ. 2021ರ ಆನೆ ಗಣತಿ ವರದಿ ಪ್ರಕಾರ ಜಿಂಬಾಬ್ವೆ 1 ಲಕ್ಷ ಆನೆಗಳನ್ನು ಹೊಂದಿದ್ದು, ವಿಶ್ವಕ್ಕೆ 2ನೇ ಸ್ಥಾನದಲ್ಲಿತ್ತು. ಆದರೀಗ 84 ಸಾವಿರ ಆನೆಗಳನ್ನಷ್ಟೇ ಹೊಂದಿದೆ ಎಂದು ವರದಿಗಳು ಉಲ್ಲೇಖಿಸಿವೆ.
2021ರ ಆನೆ ಗಣತಿ ವರದಿ ಅನ್ವಯ ಬೋಟ್ಸ್ವಾನ 1.30 ಲಕ್ಷ ಆನೆಗಳನ್ನು ಹೊಂದಿದ್ದು, ವಿಶ್ವದಲ್ಲೇ ಅತಿಹೆಚ್ಚು ಆನೆಗಳನ್ನು ಹೊಂದಿರುವ ದೇಶವಾಗಿದೆ.



PGK

Post a Comment

Previous Post Next Post