13 ಆಕ್ಷೇಪಣೆಗಳಿಗೆ ಸಂಬಂಧಿಸಿ ದಂತೆ ಮಲೆನಾಡು ಜಿಲ್ಲಾ ವ್ಯಾಪ್ತಿಯಲ್ಲಿ ಕಾವೇರಿದ ಚರ್ಚೆ ನಡೆಯುತ್ತಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಸೇರಿದಂತೆ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಈವರೆಗಿನ ಸಂಬಂಧ ಮನೆಮನೆಗಳಿಗೆ ಅಧಿಸೂಚನೆಯ ಆಕ್ಷೇಪಣೆಗಳನ್ನು ತಲುಪಿಸಿ ಜಾಗೃತಿ ಮೂಡಿಸಲಾಗುತ್ತಿದೆ.
ಮಲೆನಾಡು ಕರಾವಳಿ ಜನಪರ ಒಕ್ಕೂಟದ ಪ್ರಧಾನ ಸಂಚಾಲಕರಾದ ಅನಿಲ್ ಹೊಸಕೊಪ್ಪ, ಪ್ರಧಾನ ಕಾರ್ಯದರ್ಶಿಯಾದ ಸುಧೀರ್ ಕುಮಾರ್ ಮುರೋಳ್ಳಿ ಅವರು ಅವೈಜ್ಞಾನಿಕ ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಿ ಸ್ಥಳೀಯ ಜನಪ್ರತಿನಿಧಿಗಳನ್ನು ಒಳಗೊಂಡ ಹೊಸ ಪರಿಣಿತಿ ತಂಡವನ್ನು ನೇಮಿಸಿ ವರದಿಯನ್ನು ಅಮೂಲಾಗ್ರವಾಗಿ ಪರಿಶೀಲಿಸಬೇಕೆಂದು ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವರಾದ ಭೂಪೇಂದ್ರ ಯಾದವ್ ಮತ್ತು ಅರಣ್ಯ ಇಲಾಖೆ ಕಾರ್ಯದರ್ಶಿಯವರಿಗೆ ಪತ್ರ ಮುಖೇನ ಮನವಿ ಮಾಡಿದ್ದಾರೆ.
ವರದಿಗೆ ಸಂಬಂಧಿಸಿದಂತೆ ಕೆಳಕಂಡ ಆಕ್ಷೇಪಣೆಗಳನ್ನು ಉಲ್ಲೇಖಿಸಿದ್ದಾರೆ.
*ಕಸ್ತೂರಿ ರಂಗನ್ ವರದಿಯು ತೀವ್ರ ಅವೈಜ್ಞಾನಿಕವಾಗಿದ್ದು, ಸೆಟಲೈಟ್ ಚಿತ್ರಣದ ಆಧಾರದ ಮೇಲೆ ವಾಸ್ತವಿಕ ಮತ್ತು ನೈಜತೆಯ ಚಿತ್ರಣಕ್ಕೆ ವ್ಯತಿರಿಕ್ತವಾಗಿದೆ. ಸದರಿ ಸಮಿತಿಯು ಈ ಭಾಗಕ್ಕೆ ಭೇಟಿ ಕೊಡದೇ ವಾಸ್ತವ ಚಿತ್ರಣವನ್ನು ಅರಿಯದೇ ನೀಡಿದ ವರದಿಯಾಗಿರುತ್ತದೆ.
*ಈ ಭಾಗದ ಗ್ರಾಮಗಳ ಶೇ.20 ಕ್ಕಿಂತ ಹೆಚ್ಚು ಭೌಗೋಳಿಕ ಪ್ರದೇಶವನ್ನು ಜೀವವೈವಿಧ್ಯ ಪರಿಸರ ಸೂಕ್ಷ್ಮ ಪ್ರದೇಶವನ್ನಾಗಿ ಸೇರಿಸಲ್ಪಟ್ಟಿದೆ. ಇದು ಅವೈಜ್ಞಾನಿಕವಾಗಿರುತ್ತದೆ.
*ಘೋಷಿಸಿದ ಸೂಕ್ಷ್ಮ ಪ್ರದೇಶ ವ್ಯಾಪ್ತಿಯ ಗ್ರಾಮ ಮಟ್ಟದ ಜನಾಭಿಪ್ರಾಯ ಅಥವಾ ಭೌತಿಕ ಸರ್ವೇ ಮಾಡಿ ವಿಷಯ ಸಂಗ್ರಹ ಮಾಡಿರುವುದಿಲ್ಲ.
*ಪಶ್ಚಿಮ ಘಟ್ಟ ಪ್ರದೇಶವನ್ನು ರಕ್ಷಣೆ ಹಾಗೂ ಸಂರಕ್ಷಿಸಲು ಅಸ್ತಿತ್ವದಲ್ಲಿರುವ ಕಾನೂನು, ನೀತಿ-ನಿಯಮ ಇರುವುದರಿಂದ ಹೊಸಮಾನದಂಡದ ಅವಶ್ಯಕತೆ ಇರುವುದಿಲ್ಲ.
ವರದಿ :-ಗಣೇಶ್ ಬೆಳ್ಳಿ