(ಪಶ್ಚಿಮಘಟ್ಟ ವಾಯ್s ಡೈಲಿ ನ್ಯೂಸ್)ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆ:-| ಅತೀ ಉದ್ದದ ಮಾನವ ಸರಪಳಿ ನಿರ್ಮಾಣ ಕಾರ್ಯಕ್ರಮಕ್ಕೆ ಸಿಎಂ ಚಾಲನೆ


 
ಪಶ್ಚಿಮಘಟ್ಟ ವಾಯ್s ಡೈಲಿ ನ್ಯೂಸ್ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆ ಇಂದು (ಕರ್ನಾಟಕದ ಅತಿ ಉದ್ದದ ಮಾನವ ಸರಪಳಿ ನಿರ್ಮಿಸುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಚಾಲನೆ ನೀಡಿದರು.

ವಿಧಾನಸೌಧದ ಪೂರ್ವ ದ್ವಾರದ ಮೆಟ್ಟಿಲುಗಳ ಮೇಲೆ ನಗಾರಿ ಬಾರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಹೆಚ್.ಸಿ ಮಹಾದೇವಪ್ಪ, ಪ್ರಿಯಾಂಕ್ ಖರ್ಗೆ, ಕೆ.ಜೆ ಜಾರ್ಜ್, ದಿನೇಶ್ ಗುಂಡೂರಾವ್, ಪರಿಷತ್ ಸಭಾಪತಿ ಹೊರಟ್ಟಿ, ಶಾಸಕ ರಿಜ್ವಾನ್ ಅರ್ಷದ್, ಪರಿಷತ್ ಸದಸ್ಯ ಸಲೀಂ ಅಹಮದ್, ಯು.ಬಿ ವೆಂಕಟೇಶ್, ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಅಹಮದ್, ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಪ್ಪ ಮತ್ತಿತರರು ಸಾಥ್ ನೀಡಿದರು.

ಏಕಕಾಲಕ್ಕೆ 2500 ಕಿ.ಮೀ. ಉದ್ದದ ಮಾನವ ಸರಪಳಿ ನಿರ್ಮಿಸುವ ಮೂಲಕ ವಿಶ್ವದಾಖಲೆ ನಿರ್ಮಿಸಲು ಸರ್ಕಾರ ಮುಂದಾಗಿದೆ. ಬಹುತೇಕ ವಿವಿಧ ಸಮಾಜದ 3 ಕೋಟಿ ಜನರು ಕೈ ಕೈ ಹಿಡಿದು ಮಾನವ ಸರಪಳಿ ನಿರ್ಮಿಸಿಲಿದ್ದಾರೆ.

ಸಂವಿಧಾನದ ಆಶಯ ಜಾಗೃತಿಗೊಳಿಸುವ ಮಹಾದಾಶಯದೊಂದಿಗೆ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆ ನಿಮಿತ್ತ ಬಸವಾದಿ ಶರಣರ ಕಾಯಕ ಭೂಮಿ ಬಸವಕಲ್ಯಾಣದ ಅನುಭವ ಮಂಟಪದಿಂದ ಚಾಮರಾಜನಗರದವರೆಗೆ ರಾಜ್ಯ ಸರ್ಕಾರದಿಂದ ಹಮ್ಮಿಕೊಳ್ಳಲಾದ ಮಾನವ ಸರಪಳಿ ನಿರ್ಮಾಣ ಕಾರ್ಯಕ್ರಮಕ್ಕಾಗಿ ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆಗಳು ಮಾಡಿಕೊಳ್ಳಲಾಗಿದೆ. ವಿಶ್ವಕ್ಕೆ ಪ್ರಜಾಪ್ರಭುತ್ವದ ಪರಿಕಲ್ಪನೆ ನೀಡಿದ ಅನುಭವ ಮಂಟಪದಿಂದ ಮಾನವ ಸರಪಳಿಗೆ ಚಾಲನೆ ನೀಡುವಂತೆ ಕಾಂಗ್ರೆಸ್ ಸರ್ಕಾರ ಯೋಜನೆ ಹಾಕಿದೆ. ಬೃಹತ್ ಮಾನವ ಸರಪಳಿ ಅಭಿಯಾನಕ್ಕೆ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಚಾಲನೆ ನೀಡಿದರು. ಜಿಲ್ಲೆಯಾದ್ಯಂತ 40 ಕಿ.ಮೀ.ವರೆಗೆ 35 ಸಾವಿರ ಜನರು ಭಾಗಿಯಾಗಿ ಮಾನವ ಸರಪಳಿ ರಚನೆಯಾಗಲಿದೆ. ಬಸವಕಲ್ಯಾಣದಿಂದ ಹುಮ್ನಾಬಾದ್‌ಗೆ ತಲುಪಿ ಬಳಿಕ ಕಲಬುರಗಿಯ ಕಿಣ್ಣಿ ಸಡಕ ತಲುಪಲಿದೆ. 

ಉತ್ತರಕನ್ನಡ:
ಹೊನ್ನಾವರದಲ್ಲಿ ಸಚಿವ ಮಂಕಾಳು ವೈದ್ಯ, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ ದೇಶಪಾಂಡೆ ಚಾಲನೆ ನೀಡಿದರು. ಉತ್ತರಕನ್ನಡ ಜಿಲ್ಲೆಯಲ್ಲಿ 143 ಕಿ.ಮೀ. ಉದ್ದದ ಮಾನವ ಸರಪಳಿ ಹಳಿಯಾಳದ ಮಾವಿನಕೊಪ್ಪದಿಂದ ಭಟ್ಕಳದ ಶಿರೂರುವರೆಗೆ ರಚನೆಯಾಗಲಿದ್ದು, 80 ಸಾವಿರಕ್ಕೂ ಅಧಿಕ ಮಂದಿ ಭಾಗಿಯಾಗಿದ್ದಾರೆ.

ದಾವಣಗೆರೆ:
ನ್ಯಾಮತಿ ಗಡಿಭಾಗದಿಂದ ರಾಣೆಬೆನ್ನೂರು ತಾಲ್ಲೂಕಿನ ಕೊಡಿಯಾಲ್ ಹೊಸಪೇಟೆವರೆಗೆ ಮಾನವ ಸರಪಳಿ ನಿರ್ಮಾಣವಾಗಲಿದೆ. 80 ಕಿ.ಮೀ.ನಲ್ಲಿ 90 ಸಾವಿರ ಜನ ಮಾನವ ಸರಪಳಿಯಲ್ಲಿ ಭಾಗಿಯಾಗಲಿದ್ದಾರೆ. ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಚಾಲನೆ ನೀಡಿದರು.



PGK

Post a Comment

Previous Post Next Post