ಪಶ್ಚಿಮಘಟ್ಟ ವಾಯ್ಸ್ ಡೈಲಿ ನ್ಯೂಸ್ :- ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯ ಅರಣ್ಯದೊಳಗೆ ಅಕ್ರಮವಾಗಿ ಪ್ರವೇಶಿಸಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ.
ಆರೋಪಿ ಬಳಿ ಇದ್ದ ಆರು ಜೀವಂತ ಆಮೆಗಳು ಹಾಗೂ 72 ಕೆಜಿ ತೂಕದ ಶ್ರೀಗಂಧ ತುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತ ವ್ಯಕ್ತಿಯನ್ನು ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಆರ್. ಕುಮಾರ್ ಎಂದು ಗುರುತಿಸಲಾಗಿದೆ. ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಬಂಧಿತ ವ್ಯಕ್ತಿಯನ್ನು ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಆರ್. ಕುಮಾರ್ ಎಂದು ಗುರುತಿಸಲಾಗಿದೆ. ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.