(ಪಶ್ಚಿಮಘಟ್ಟ ವಾಯ್ಸ್ ಡೈಲಿ ನ್ಯೂಸ್ )ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ!


(ಪಶ್ಚಿಮಘಟ್ಟ ವಾಯ್ಸ್ ಡೈಲಿ ನ್ಯೂಸ್ )
ಅಂಕೋಲಾ : ವೃಕ್ಷಮಾತೆ ಎಂದೆನಿಸಿಕೊಂಡ ಪದ್ಮಶ್ರೀ ತುಳಸಿ ಗೌಡ ಸೋಮವಾರ(ಡಿ16) ವಿಧಿವಶರಾಗಿದ್ದಾರೆ. ಅವರಿಗೆ 86 ವರ್ಷ ವಯಸಾಗಿತ್ತು.

ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ತುಳಸಿ ಗೌಡ ಅವರು ವಯೋ ಸಹಜ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.
ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ತುಳಸಿ ಗೌಡ ಅವರು ವಯೋ ಸಹಜ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.
ಕಳೆದ ಎಂಟು ತಿಂಗಳಿನಿಂದ ವಯೋ ಸಹಜ ಅನಾರೋಗ್ಯಕ್ಕೆ ತುತ್ತಾದ ತುಳಸಿ ಗೌಡ ಅವರಿಗೆ ಆಸ್ಪತ್ರೆ ಸೇರಿದಂತೆ ಅನೇಕ ಕಡೆ ಚಿಕಿತ್ಸೆಯನ್ನು ನೀಡಲಾಗಿತ್ತು. ಹೊನ್ನಳ್ಳಿ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದ ಅವರು ಮನೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಸ್ಥಳಕ್ಕೆ ತಾಲೂಕು ವೈದ್ಯಾಧಿಕಾರಿ ಜಗದೀಶ ನಾಯಕ ತುಳಸಿ ಗೌಡ ಮನೆಗೆ ತೆರಳಿ ಮೃತಪಟ್ಟಿರುವುದು ಖಚಿತ ಪಡಿಸಿದ್ದಾರೆ.

ತುಳಸಿ ಗೌಡರವರು ಒರ್ವ ಪುತ್ರ ಮತ್ತು ಪುತ್ರಿ, ಮೊಮ್ಮಕ್ಕಳು ಮರಿಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

PGK

Post a Comment

Previous Post Next Post