(ಪಶ್ಚಿಮಘಟ್ಟ ವಾಯ್ಸ್ ಡೈಲಿ ನ್ಯೂಸ್ )ಉಡುಪಿ:ಕೊಳಚೆಯಿಂದ ಕಂಗಾಲಾದ ನಿಟ್ಟೂರು, ಕಲ್ಮಾಡಿ

 ಪಶ್ಚಿಮಘಟ್ಟ ವಾಯ್ಸ್ ಡೈಲಿ ನ್ಯೂಸ್-

 ಉಡುಪಿ:
 ನಿಟ್ಟೂರು, ಕಲ್ಮಾಡಿ ಭಾಗಗಳಲ್ಲಿ ಒಳಚರಂಡಿ ನೀರಿನ ವಾಸನೆಯಿಂದ ರೋಗ-ರುಜಿಗಳು ಆವರಿಸುತ್ತಿವೆ. ಚಹಾ, ಊಟವನ್ನೂ ಮಾಡಲಾಗದಂತಹ ಸ್ಥಿತಿ ನಿರ್ಮಾಣಗೊಂಡಿದೆ. ಊರಿನಲ್ಲಿ ಎಲ್ಲ ರೀತಿಯ ಕಾಯಿಲೆಗಳೂ ತಾಂಡವವಾಡುತ್ತಿವೆ ಎಂಬ ಗಂಭೀರ ಸಮಸ್ಯೆ ಮಂಗಳವಾರ ನಡೆದ ನಗರಸಭೆ ಸಾಮಾನ್ಯ ಸಭೆಯಲ್ಲಿ ಚರ್ಚೆಗೆ ಗ್ರಾಸವಾಯಿತು. 
ಅಧ್ಯಕ್ಷ ಪ್ರಭಾಕರ ಪೂಜಾರಿ ಗುಂಡಿಬೈಲು ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಶಾಸಕ ಯಶ್‌ಪಾಲ್‌ ಎ.ಸುವರ್ಣ, ಉಪಾಧ್ಯಕ್ಷೆ ರಜನಿ ಹೆಬ್ಟಾರ್‌ ಉಪಸ್ಥಿತರಿದ್ದರು. ಸಭೆಯಲ್ಲಿ ಮಾತನಾಡಿದ ನಗರಸಭೆ ಸ್ಥಾಯೀ ಸಮಿತಿ ಅಧ್ಯಕ್ಷ ಸುಂದರ ಕಲ್ಮಾಡಿ ಹಾಗೂ ಸದಸ್ಯ ಸಂತೋಷ್‌ ಜತ್ತನ್ನ ಅವರು ತಮ್ಮ ಭಾಗದ ಸಮಸ್ಯೆಯನ್ನು ತೆರೆದಿಟ್ಟರು.
ನಿಟ್ಟೂರು ಎಸ್‌ಟಿಪಿಗೆ ಕೇಂದ್ರ ಸರಕಾರ 30 ಕೋ.ರೂ.ಅನುದಾನ ಬಿಡುಗಡೆಗೊಳಿಸಿದೆ. ಆದರೆ ಕಾಮಗಾರಿ ಯಾಕೆ ಆರಂಭಿಸಿಲ್ಲ. ಹೀಗಾಗಿಯೇ ಈ ಭಾಗದಲ್ಲಿ ಸಮಸ್ಯೆ ಉಲ್ಬಣಿಸಿದೆ ಎಂದು ಅಧ್ಯಕ್ಷರ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಗಳು, ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮೂಲಕ ಈ ಕಾಮಗಾರಿ ನಡೆಸಲಾಗುವುದು. ಈಗಾಗಲೇ ಡಿಪಿಆರ್‌ ಅಂತಿಮ ಹಂತದಲ್ಲಿದ್ದು, ಟೆಂಡರ್‌ ಪ್ರಕ್ರಿಯೆಯಲ್ಲಿದೆ. ಕನಿಷ್ಠ 6 ತಿಂಗಳು ಟೆಂಡರ್‌ಗೆ ಬೇಕು ಎಂದು ಅಧಿಕಾರಿಗಳು ತಿಳಿಸಿದರು. ಅಲ್ಲಿಯವರೆಗೆ ತಾತ್ಕಾಲಿಕ ಪರಿಹಾರ ಒದಗಿಸಬೇಕು ಎಂದು ಸದಸ್ಯರು ಆಗ್ರಹಿಸಿದರು.





 

PGK

Post a Comment

Previous Post Next Post