(ಪಶ್ಚಿಮಘಟ್ಟ ವಾಯ್ಸ್ ಡೈಲಿ ನ್ಯೂಸ್ )ವರ್ಷದ ಮೊದಲ ದಿನವೇ 1 ಲಕ್ಷ ರೂ. ಲಂಚ ಪಡೆಯುತ್ತಿದ್ದ ಅಧಿಕಾರಿ ಸೆಕ್ಷನ್‌ ಆಫೀಸರ್‌ ಕೊಟ್ರಪ್ಪ ಅರೆಸ್ಟ್‌!

 

ಪಶ್ಚಿಮಘಟ್ಟ ವಾಯ್ಸ್ ಡೈಲಿ ನ್ಯೂಸ್:-
  ಶಿವಮೊಗ್ಗ : ಗುತ್ತಿಗೆದಾರರೊಬ್ಬರಿಗೆ ಹಣ ಮಂಜೂರು ಮಾಡಲು 1.20 ಲಕ್ಷ ರೂ. ಲಂಚ ಪಡೆಯುತ್ತಿದ್ದ ಅಧಿಕಾರಿಯೊಬ್ಬರ ಮೇಲೆ Lokayukta ಪೊಲೀಸರು ದಾಳಿ (RAID) ನಡೆಸಿದ್ದಾರೆ. ಲಂಚದ ಹಣವನ್ನು ವಶಕ್ಕೆ ಪಡೆದು, ಇಬ್ಬರು ಅಧಿಕಾರಿಗಳನ್ನು ಬಂಧಿಸಿದ್ದಾರೆ.

ಬಿಲ್‌ ಮಂಜೂರು ಮಾಡಲು ಲಂಚ

ಭದ್ರಾವತಿ ತಾಲೂಕು ಗೋಂದಿಯ ಭದ್ರಾ ಬಲದಂಡೆ ನಾಲೆಯ ಸಿಲ್ಟ್‌ ತೆಗೆಯುವ ಕಾಮಗಾರಿಯು 2024ರ ಜನವರಿಯಲ್ಲಿ ಪೂರ್ಣಗೊಂಡಿತ್ತು. ಆದರೆ ಟೆಂಡರ್‌ ಹಣ 9.16 ಲಕ್ಷ ರೂ. ಗುತ್ತಿಗೆದಾರರಿಗೆ ಮಂಜೂರಾಗಿರಲಿಲ್ಲ. ಹಾಗಾಗಿ ಗುತ್ತಿಗೆದಾರ ವಿ.ರವಿ ಹಲವು ಬಾರಿ ಹಣ ಮಂಜೂರಾತಿಗಾಗಿ ಮನವಿ ಮಾಡಿದ್ದರು. ಈಚೆಗೆ ನೀರಾವರಿ ನಿಗಮದ ಸೆಕ್ಷನ್‌ ಆಫೀಸರ್‌ ಕೊಟ್ರಪ್ಪ ಬಿಲ್‌ ಮಂಜೂರಾಗಬೇಕಿದ್ದರೆ 1.20 ಲಕ್ಷ ರೂ. ಹಣ ನೀಡುವಂತೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ.

ಲೋಕಾಯುಕ್ತಕ್ಕೆ ದೂರು ನೀಡಿದ ಗುತ್ತಿಗೆದಾರ

ಸೆಕ್ಷನ್‌ ಆಫೀಸರ್‌ ಕೊಟ್ರಪ್ಪ ಲಂಚದ ಹಣಕ್ಕೆ ಬೇಡಿಕೆ ಇಟ್ಟಿರುವ ಕುರಿತು ಗುತ್ತಿಗೆದಾರ ರವಿ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಇವತ್ತು ಬಿಆರ್‌ಪಿ ವ್ಯಾಪ್ತಿಯ ಡಿ.ಬಿ.ಹಳ್ಳಿಯ ಕಚೇರಿಯಲ್ಲಿ ಗುತ್ತಿಗೆದಾರ ರವಿ ಅವರಿಂದ 1.20 ಲಕ್ಷ ರೂ. ಲಂಚದ ಹಣ ಪಡೆಯುತ್ತಿದ್ದ ಸಂದರ್ಭ ಸೆಕ್ಷನ್‌ ಆಫೀಸರ್‌ ಕೊಟ್ರಪ್ಪ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ರೆಡ್‌ ಹ್ಯಾಂಡ್‌ ಆಗಿ ಬಂಧಿಸಿದ್ದಾರೆ. ಕಚೇರಿಯ ಲೈಟ್‌ ಮಜದೂರ್‌ ಅರವಿಂದ್‌ ಎಂಬಾತನನ್ನು ಬಂಧಿಸಲಾಗಿದೆ ಎಂದು ಲೋಕಾಯುಕ್ತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.



PGK

Post a Comment

Previous Post Next Post