(ಪಶ್ಚಿಮಘಟ್ಟ ವಾಯ್ಸ್ ಡೈಲಿ ನ್ಯೂಸ್) 15 ಎಕರೆ ಒತ್ತುವರಿ ಭೂಮಿ ವಶಕ್ಕೆ ಪಡೆದ ಅರಣ್ಯ ಇಲಾಖೆ: 3 ಸಾವಿರ ಅಡಿಕೆ ಮರಕ್ಕೆ ಕೊಡಲಿ

ಪಶ್ಚಿಮಘಟ್ಟ ವಾಯ್ಸ್ ಡೈಲಿ ನ್ಯೂಸ್-
 ದಾವಣಗೆರೆ: ಚನ್ನಗಿರಿ (Channagiri) ತಾಲೂಕಿನ ಶಾಂತಿಸಾಗರದಲ್ಲಿ ಅರಣ್ಯ ಭೂಮಿ (Forest Land) ಒತ್ತುವರಿ ಮಾಡಿದವರಿಗೆ ಅರಣ್ಯ ಇಲಾಖೆ (Forest Department) ಅಧಿಕಾರಿಗಳು ಶಾಕ್ ನೀಡಿದ್ದಾರೆ. ಒತ್ತುವರಿ ಮಾಡಿದ್ದ 15 ಎಕರೆ ಅರಣ್ಯ ಪ್ರದೇಶವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಶಾಂತಿಸಾಗರದ ಗುಡುಂಘಟ್ಟದ ಸರ್ವೇ ನಂ.43 ರಲ್ಲಿ 15 ಎಕರೆ ಜಾಗವನ್ನು ವಶಕ್ಕೆ ಪಡೆಯಲಾಗಿದೆ. ಈ ಭಾಗದಲ್ಲಿ ಜನರು ಅರಣ್ಯ ಪ್ರದೇಶವನ್ನು ಒತ್ತುವರಿ ಮಾಡಿಕೊಂಡು ಆ ಜಾಗದಲ್ಲಿ ಅಡಿಕೆ ಮತ್ತು ಬಾಳೆ ಬೆಳೆದಿದ್ದರು. ಅಧಿಕಾರಿಗಳು 3 ಸಾವಿರ ಅಡಿಕೆ ಮತ್ತು ಬಾಳೆ ಗಿಡಗಳನ್ನು ತೆರವು ಮಾಡಿ, ಜಾಗವನ್ನು ವಶಕ್ಕೆ ಪಡೆದಿದ್ದಾರೆ.

ಸುಮಾರು ವರ್ಷಗಳಿಂದ ರೈತರು ಅರಣ್ಯ ಪ್ರದೇಶವನ್ನು ಒತ್ತುವರಿ ಮಾಡಿ ಸಾಗುವಳಿ ಮಾಡಿಕೊಂಡು ಬಂದಿದ್ದರು. ಬಳಿಕ ಜಾಗದಲ್ಲಿ ಅಡಿಕೆ ತೋಟ ಮಾಡಿದ್ದರು. ಅಡಿಕೆ, ಬಾಳೆಗಿಡಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಸಿಬ್ಬಂದಿ ತೆರವು ಮಾಡಿದ್ದಾರೆ.



PGK

Post a Comment

Previous Post Next Post