(ಪಶ್ಚಿಮಘಟ್ಟ ವಾಯ್ಸ್ ಡೈಲಿ ನ್ಯೂಸ್) ಉಡುಪಿ :ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯವಿರುವ ಜಲ್ಲಿ, ಮರಳು ಸರಳ ರೀತಿಯಲ್ಲಿ ದೊರಕುವಂತಾಗಲಿ : ಶಾಸಕ ಯಶ್ ಪಾಲ್ ಎ.ಸುವರ್ಣ!

ಪಶ್ಚಿಮಘಟ್ಟ ವಾಯ್ಸ್ ಡೈಲಿ ನ್ಯೂಸ್..
 ಉಡುಪಿ: ಉಡುಪಿ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯವಿರುವ ಜಲ್ಲಿ ಹಾಗೂ ಮರಳು ಸರಳವಾಗಿ ನಿಗಧಿತ

ಬೆಲೆಗೆ ಜನಸಾಮಾನ್ಯರಿಗೆ ದೊರಕುವಂತೆ ಗಣಿ ಇಲಾಖೆ ಕ್ರಿಯಾಶೀಲವಾಗಿ ಕಾರ್ಯವನ್ನು ನೂತನ ಕಟ್ಟಡದಲ್ಲಿ ನಿರ್ವಹಿಸಲಿ ಎಂದು ಶಾಸಕ ಯಶ್‌ಪಾಲ್ ಎ ಸುವರ್ಣ ಹೇಳಿದರು.

ಅವರು ಶುಕ್ರವಾರ ನಗರದ ದೊಡ್ಡಣಗುಡ್ಡೆಯಲ್ಲಿ ಹಿರಿಯ ಭೂ ವಿಜ್ಞಾನಿಯವರ ಕಚೇರಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ ಖನಿಜ ಭವನ-ನೂತನ ಕಚೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿ ಮಾತನಾಡುತ್ತಿದ್ದರು.

ಉಡುಪಿ ಜಿಲ್ಲೆಯು ವಿಶ್ವದಲ್ಲಿಯೇ ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಜಿಲ್ಲೆಯಾಗಿದೆ. ಅಭಿವೃದ್ಧಿ ಹೊಂದಲು ಹೊಸ ಹೊಸ ಬೃಹತ್ ಕಟ್ಟಡಗಳು, ರಸ್ತೆ, ಸೇತುವೆ ನಿರ್ಮಾಣವಾಗುವುದರೊಂದಿಗೆ ಜಿಲ್ಲೆಯ ಅಭಿವೃದ್ಧಿಗೆ ಮತ್ತಷ್ಟು ವೇಗ ಸಿಗುತ್ತದೆ. ಇವುಗಳ ನಿರ್ಮಾಣಕ್ಕೆ ಅಗತ್ಯವಿರುವ ಹೊಯ್ಗೆ ಹಾಗೂ ಜಲ್ಲಿ ನಿರ್ಮಾಣಕ್ಕೆ ತಕ್ಕಂತೆ ಪೂರೈಸುವ ಕಾರ್ಯ ಗಣಿ ಇಲಾಖೆಯ ಸಹಕಾರದೊಂದಿಗೆ ಆಗಬೇಕು ಎಂದರು.

ಜಿಲ್ಲೆಯ ಜನರಿಗೆ ಗಣಿ ಇಲಾಖೆ ತಮ್ಮ ಸೇವೆಯನ್ನು ಮಾಡಲು ನೂತನವಾಗಿ 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಸುಸಜ್ಜಿತ ಕಟ್ಟಡದಲ್ಲಿ ಉತ್ತಮ ರೀತಿಯಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾರ್ಯನಿರ್ವಹಿಸಲಿ ಎಂದು ತಿಳಿಸಿದರು.
ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ನಂಜುಂಡಸ್ವಾಮಿ ಮಾತನಾಡಿ, ಸಾರ್ವಜನಿಕರು, ಕಲ್ಲುಬಂಡೆ
ಗುತ್ತಿಗೆದಾರರು, ಮರಳು ಗುತ್ತಿಗೆದಾರರು ಹೊಸ ಖನಿಜ ಭವನದ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.

ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲಾ ಕ್ಷೇತ್ರ ವ್ಯಾಪ್ತಿಯಲ್ಲಿ ಗಣಿ ಇಲಾಖೆಯ
ಅಡಿಯಲ್ಲಿ ಕಟ್ಟಡ ನಿರ್ಮಾಣಕ್ಕೆ ಕಲ್ಲುಗಳು, ಜೇಡಿಮಣ್ಣು, ಮೂರಾಕಲ್ಲು, ಮರಳು, ಸಿಲಿಕಾ ಮರಳು ಹಾಗೂ ಅಲಂಕಾರಿಕ ಶಿಲಾ ಕಲ್ಲುಗಳ ಒಟ್ಟು 167 ಗಣಿ ಗುತ್ತಿಗೆಗಳನ್ನು ನೀಡಲಾಗಿದೆ. ಅಲ್ಲದೇ 45 ಕ್ಕೂ ಹೆಚ್ಚು ಕ್ರಷರ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಇವುಗಳ ಕಾರ್ಯಚಟುವಟಿಕೆಗಳ ನಿಯಂತ್ರಣ ಕಾರ್ಯನಿರ್ವಹಿಸಲು ವ್ಯವಸ್ಥಿತವಾದ ನೂತನ ಕಟ್ಟಡ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕರ್ತವ್ಯ
ನಿರ್ವಹಿಸಲು ಸಹಕಾರಿಯಾಗಲಿದೆ ಎಂದರು.

ಪ್ರತಿಯೊಂದು ಇಲಾಖೆಗೂ ಸ್ವಂತ ಕಚೇರಿ ಇದ್ದಾಗ ಮಾತ್ರ ಅದು ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತದೆ.
ಸಾರ್ವಜನಿಕರಿಗೆ ಈ ಕಚೇರಿಯು ಉತ್ತಮ ರೀತಿಯಲ್ಲಿ ಸೇವೆ ನೀಡುವುದರ ಮೂಲಕ ಜಿಲ್ಲೆಯಲ್ಲಿ ಇನ್ನಷ್ಟು ಉದ್ಯಮಕ್ಕೆ ಪ್ರೋತ್ಸಾಹ ಸಿಗುವಂತಾಗಲಿ ಎಂದರು.

ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಹಾಗೂ ಮತ್ತಿತರರು ಉಪಸ್ಥಿತರಿದ್ದರು.ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಸಂದೀಪ್ ಜೆ.ಯು ಸ್ವಾಗತಿಸಿ, ವಿನೂತ ನಿರೂಪಿಸಿ, ಸಂಧ್ಯಾ ವಂದಿಸಿದರು.



PGK

Post a Comment

Previous Post Next Post