ಪಶ್ಚಿಮ ಘಟ್ಟ ಕೂಗು ಡೈಲಿ ನ್ಯೂಸ್) Forest News: ಕರ್ನಾಟಕದ ಹತ್ತಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಕಾಡಾನೆಗಳ ಉಪಟಳದಿಂದ ಜನತೆ ಹೈರಾಣಾಗಿದ್ದು. ಅರಣ್ಯ ಇಲಾಖೆ ವಿರುದ್ದ ಆಕ್ರೋಶವನ್ನು ಹೊರ ಹಾಕುತ್ತಲೇ ಇದ್ದಾರೆ. ಇದರ ನಡುವೆ ಉತ್ತರ ಕರ್ನಾಟಕದ ಯಾಲಕ್ಕಿ ನಾಡು ಎಂದೇ ಹೆಸರಾಗಿರುವ ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದ ಸಮೀಪದ ಹುಣಸಿಕಟ್ಟೆ ಅರಣ್ಯದಲ್ಲಿ ಎರಡು ಆನೆಗಳು ಸಂಚರಿಸಿರುವುದು ಕಂಡುಬಂದಿದೆ. ಕಳೆದು ರಾತ್ರಿಯಿಂದ ಮುಡಕೇರಿ, ಮಡಕಿನಕೊಪ್ಪ ಸೇರಿದಂತೆ ವಿವಿಧೆಡೆ ಸಂಚರಿಸಿರುವ ಮಾಹಿತಿ ಲಭ್ಯ ಆಗಿದೆ. ತಂಡದಲ್ಲಿ ಒಟ್ಟು ಎರಡು ಗಂಡಾನೆಗಳಿವೆ. ಅದರಲ್ಲಿ ಒಂದು ದೊಡ್ಡ ಹಾಗೂ ಸಣ್ಣ ಆನೆ ಇವೆ ಎಂದು ಸ್ಥಳೀಯರು ಮಾಹಿತಿ ತಿಳಿಸಿದ್ದಾರೆ. ಈ ಎರಡು ಆನೆಗಳು ನಾಗನೂರ ಕೆರೆಯಲ್ಲಿ ನೀರು ಕುಡಿದು ಸಿದ್ದನಗುಡ್ಡದ ಬಳಿ ತೆರಳಿವೆ ಎಂದು ತಿಳಿದುಬಂದಿದೆ.
ನಮಗೆ ಇದ್ದ ಮಾಹಿತಿ ಪ್ರಕಾರ ಎರಡು ಗಂಡು Elephant ಗಳು ನಾಗನೂರು ಕೆರೆಯಲ್ಲಿ ಕಂಡ ಬಗ್ಗೆ ಮಾಹಿತಿ ಬಂದ ಕೂಡಲೇ ತಕ್ಷಣ ಸಿಬ್ಬಂದಿಯೊಂದಿಗೆ ಪರಿಶೀಲನೆ ಮಾಡಲಾಗಿ ಸಿದ್ದನಗುಡ್ಡ ಅರಣ್ಯ ಪ್ರದೇಶದಲ್ಲಿ ಹೋಗಿರುವುದಾಗಿ ಕಂಡು ಬಂದಿದೆ ಎಂದು ಆರ್‌ಎಫ್‌ಒ ಪರುಶರಾಮ ಮಾನಕುರ ತಿಳಿಸಿದ್ದಾರೆ.
ಸುತ್ತ ಮುತ್ತಲಿನ ಜನರು ಜಾಗೃತಯಿಂದ ಇರಬೇಕು ರಾತ್ರಿ ಹೊತ್ತು ಒಬ್ಬರೇ ತಿರುಗಾಡಬಾರದು. ಇವು ಪ್ರತಿ ವರ್ಷ ಹೆಚ್ಚು ಕಡಿಮೆ ಇದೆ ಸಮಯದಲ್ಲಿ ಬಂದು ಸ್ವಲ್ಪ ದಿವಸ ಇದ್ದು ಮರಳಿ ತಮ್ಮ ಖಾಯಂForest ಪ್ರದೇಶಕ್ಕೆ ಮರಳುತ್ತವೆ. ಜನರು ಭಯ ಪಡುವ ಅಗತ್ಯ ಇಲ್ಲಾ ಇಲಾಖೆ ಪ್ರತಿ ವರ್ಷದಂತೆ ಈ ಸಲವೂ ಕೂಡ ಅಗತ್ಯ ಕ್ರಮ ಕೈಗೊಂಡಿದ್ದು ಪೊಲೀಸ್ ಇಲಾಖೆಯವರೂ ಕೂಡ ಸಂಪರ್ಕದಲ್ಲಿ ಇದ್ದು ಅಗತ್ಯ ಬಿದ್ದರೆ ಸಹಾಯಕ್ಕೆ ತಮ್ಮ ಸಿಬ್ಬಂದಿ ಸಿದ್ಧರಿರುವುದಾಗಿ ತಿಳಿಸಿದ್ದಾರೆ.
ಬೇಲೂರು 3 ಆನೆ ಸೆರೆ ಕಾರ್ಯಾಚರಣೆ: ಈಶ್ವರ ಖಂಡ್ರೆ
ಹಾಸನ ಜಿಲ್ಲೆ ಬೇಲೂರು ತಾಲೂಕಿನ ಬಿಕ್ಕೋಡು, ಅರೆಹಳ್ಳಿ ಸುತ್ತಮುತ್ತ ಜನರಿಗೆ ಉಪಟಳ ನೀಡುತ್ತಿರುವ 3 ಪುಂಡಾನೆ ಗುರುತಿಸಿದ್ದು, ಈ ಆನೆಗಳನ್ನು ಸೆರೆ ಹಿಡಿಯಲು ಮತ್ತು ಕೂಡಲೇ ಇದೇ ಪ್ರದೇಶದಲ್ಲಿ ಆನೆ ಕಾರ್ಯಪಡೆಯ ಕಚೇರಿ ಸ್ಥಾಪಿಸಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ದರ್ಜೆಯ ಅಧಿಕಾರಿಯನ್ನು ನಿಯೋಜಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.
ಬೇಲೂರು ತಾಲೂಕು ಕೋಗೋಡಿನ ತೋಟದಲ್ಲಿ ಮಹಿಳೆಯೊಬ್ಬರು Elephant ಆಕ್ರಮಣಯಿಂದ ಮೃತಪಟ್ಟ ಹಿನ್ನೆಲೆಯಲ್ಲಿ ವಿಕಾಸಸೌಧದ ತಮ್ಮ ಕಚೇರಿಯಲ್ಲಿಂದು ಅರಣ್ಯಾಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ ಸಚಿವರು, ಹಾಸನ ವಲಯಕ್ಕೆ 2 ಥರ್ಮಲ್ ಕ್ಯಾಮರಾ ಸಹಿತ ಡ್ರೋನ್ ಖರೀದಿಸಿ ರಾತ್ರಿಯ ವೇಳೆ ಕೂಡ ಆನೆಗಳ ಸಂಚಾರದ ಬಗ್ಗೆ ನಿಗಾ ಇಟ್ಟು, ಸ್ಥಳೀಯರಿಗೆ ಸಕಾಲದಲ್ಲಿ ಮಾಹಿತಿ ನೀಡಲು ಸೂಚಿಸಿದರು.
ಆನೆಗಳ ಸಮಸ್ಯೆ ಹೆಚ್ಚಿರುವ ಪ್ರದೇಶದಲ್ಲಿ ತುರ್ತು ಸ್ಪಂದನೆಗಳಾಗಿ 2 ಹೆಚ್ಚುವರಿ ಜೀಪುಗಳು ಮತ್ತು ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಿ, ಆನೆಗಳ ಸಂಚಾರದ ಮಾಹಿತಿ ಬಂದ ಕೂಡಲೇ ಸ್ಪಂದಿಸುವಂತೆ ಈಶ್ವರ ಖಂಡ್ರೆ ಸೂಚಿಸಿದರು.
ತೋಟದ ಸಿಬ್ಬಂದಿಗೆ ತರಬೇತಿ
ಬೇಲೂರು ಭಾಗದ ಜನರಿಗೆ, ತೋಟದ ಕಾರ್ಮಿಕರಿಗೆ ಆನೆಗಳ ಸ್ವಭಾವ, ಆನೆ ಬಂದಾಗ ಏನೆಲ್ಲಾ ಮುಂಜಾಗರೂಕತಾ ಕ್ರಮ ವಹಿಸಬೇಕು, ಹೇಗೆ ನಡೆದುಕೊಳ್ಳಬೇಕು, ಸಂಜೆ ಮತ್ತು ಬೆಳಗಿನ ವೇಳೆ ಓಡಾಡುವಾಗ ಕೈಗೊಳ್ಳಬೇಕಾದ ಎಚ್ಚರಿಕೆ ಇತ್ಯಾದಿಗಳ ಬಗ್ಗೆ ಜಾಗೃತಿ ಮೂಡಿಸಲು ತೋಟದ ಮಾಲೀಕರ ಸಹಕಾರ ಪಡೆದು ಜಾಗೃತಿ ಮೂಡಿಸಲು ಮತ್ತು ಗ್ರಾಮಮಟ್ಟದಲ್ಲಿ ಸಾರ್ವಜನಿಕ ಸಭೆಗಳನ್ನು ನಡೆಸಲೂ ಆದೇಶ ನೀಡಿದರು.
ಇಟಿಎಫ್ ಸಿಬ್ಬಂದಿಗೆ ಅಗತ್ಯ ಸೌಲಭ್ಯ
Elephant ಆಪರೇಶನ ಮತ್ತು ಎಡಿಸಿ ಹೊರಗುತ್ತಿಗೆ ಸಿಬ್ಬಂದಿಗೆ ತಿಂಗಳು ತಿಂಗಳು ವೇತನ, ಆನೆ ಕಾರ್ಯಪಡೆಯ ಸಿಬ್ಬಂದಿಗೆ ಆಹಾರಭತ್ಯೆ, ಸಮವಸ್ತ್ರ, ಶೂ, ಜಾಕೆಟ್ ಹಾಗೂ ವಿಮಾ ಸೌಲಭ್ಯ ನೀಡುತ್ತಿರುವುದನ್ನು ಖಾತ್ರಿ ಪಡಿಸಿಕೊಳ್ಳುವಂತೆ ಮತ್ತು ಮೊಬೈಲ್ ಸಿಗ್ನಲ್ ದೊರಕದ ಕಡೆಗಳಲ್ಲಿ ಆನೆ ಕಾರ್ಯಪಡೆ ಸಿಬ್ಬಂದಿಗೆ ವಾಕಿ ಟಾಕಿ ನೀಡುವಂತೆಯೂ ಈಶ್ವರ ಖಂಡ್ರೆ ಸೂಚಿಸಿದರು.
ಸಭೆಯಲ್ಲಿ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್. ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ, ಮುಖ್ಯ ವನ್ಯಜೀವಿ ಪರಿಪಾಲಕರಾದ ಸುಭಾಷ್ ಮಾಲ್ಕಡೆ ಮತ್ತು ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು