ಪಶ್ಚಿಮ ಘಟ್ಟ ವಾಯ್ಸ್ ಡೈಲಿ ನ್ಯೂಸ್.. ಉಡುಪಿ: ಉಡುಪಿ ಕೋರ್ಟ್ ಆವರಣದಲ್ಲಿರುವ ತಮ್ಮ ಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದ ಆರೋಪದಲ್ಲಿ ಸಹಾಯಕ ಸರಕಾರಿ ಅಭಿಯೋಜಕರನ್ನು ಉಡುಪಿ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮರಳು ವಾಹನ ಬಿಡುಗಡೆ ಸಂಬಂಧ ಇವರು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ, ಉಡುಪಿ ನ್ಯಾಯಾಲಯದಲ್ಲಿರುವ ಕಚೇರಿಯಲ್ಲಿ 2ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಲೋಕಾಯುಕ್ತ ಮಂಗಳೂರು ಪ್ರಭಾರ ಎಸ್ಪಿ ಕುಮಾರಚಂದ್ರ ಮಾರ್ಗದರ್ಶನದಲ್ಲಿ ಉಡುಪಿ ಪ್ರಭಾರ ಡಿವೈಎಸ್ಪಿ ಮಂಜುನಾಥ್, ಪೊಲೀಸ್ ನಿರೀಕ್ಷಕ ರಾಜೇಂದ್ರ ನಾಯಕ್ ಎಂ.ಎನ್., ಎಎಸ್ಸೆ ನಾಗೇಶ್ ಉಡುಪ ಮತ್ತಿತರರು ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.